LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

GOOD NEWS : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ; ರಾಜ್ಯದಲ್ಲಿ ಮುಂದಿನ 6 ತಿಂಗಳಲ್ಲಿ 72,000 ಹುದ್ದೆಗಳ ಭರ್ತಿ.!

ಬೆಂಗಳೂರು: ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಲಕ್ಷಾಂತರ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಮುಂದಿನ ಆರು ತಿಂಗಳೊಳಗೆ 72,000 ವಿವಿಧ ಸರ್ಕಾರಿ ಹುದ್ದೆಗಳ ಭರ್ತಿ ಮಾಡುವ ಗುರಿಯನ್ನು ಸರ್ಕಾರ ಹೊಂದಿದ್ದು, ನೇಮಕಾತಿ ಪ್ರಕ್ರಿಯೆಗೆ ವೇಗ ನೀಡಲಾಗಿದೆ. ರಾಜ್ಯದ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಈ ಕುರಿತು ಮಾಹಿತಿ ನೀಡಿದ್ದು, ಒಳಮೀಸಲಾತಿ ಜಾರಿಯಿಂದ ಸ್ಥಗಿತಗೊಂಡಿದ್ದ ನೇಮಕಾತಿ ಪ್ರಕ್ರಿಯೆಗಳಿಗೆ ಮರುಚಾಲನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕಕ್ಕೆ 32 ಸಾವಿರ ಹುದ್ದೆಗಳ ಮೀಸಲು
ಒಟ್ಟು 72 ಸಾವಿರ ಹುದ್ದೆಗಳ ಪೈಕಿ ಸುಮಾರು 32 ಸಾವಿರ ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ಮೀಸಲಿಡಲಾಗಿದೆ. ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಿ, 4 ತಿಂಗಳೊಳಗೆ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿ, 6 ತಿಂಗಳೊಳಗೆ ನೇಮಕಾತಿ ಪತ್ರ ವಿತರಿಸುವ ಗುರಿ ಸರ್ಕಾರ ಹೊಂದಿದೆ.

ಯಾವ ಇಲಾಖೆಗಳಲ್ಲಿ ನೇಮಕಾತಿ?
ರಾಜ್ಯದ ಹಲವು ಪ್ರಮುಖ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಈಗಾಗಲೇ ಅಧಿಸೂಚನೆಗಳು ಪ್ರಕಟವಾಗಿವೆ. ಪ್ರಮುಖವಾಗಿ:
• ಕಂದಾಯ ಇಲಾಖೆ – ಗ್ರಾಮ ಆಡಳಿತಾಧಿಕಾರಿ (VAO), ಭೂಮಾಪಕರು
• ಅಲ್ಪಸಂಖ್ಯಾತ ಹಾಗೂ ಸಮಾಜ ಕಲ್ಯಾಣ ಇಲಾಖೆ – ವಸತಿ ಶಾಲೆಗಳ ಶಿಕ್ಷಕರು
• ಗೃಹ ಇಲಾಖೆ – ವಿಶೇಷ ಮೀಸಲು ಪೊಲೀಸ್ ಪಡೆಯ ವಿವಿಧ ಹುದ್ದೆಗಳು
• ಕೆಪಿಎಸ್ಸಿ ಮೂಲಕ 319 ಗೆಜೆಟೆಡ್ ಪ್ರೊಬೇಷನರಿ (KAS) ಗ್ರೂಪ್ ‘ಎ’ ಮತ್ತು ‘ಬಿ’ ಹುದ್ದೆಗಳ ಭರ್ತಿಗೂ ಸರ್ಕಾರ ಅನುಮೋದನೆ ನೀಡಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಗಳು
ಹುದ್ದೆ ಹುದ್ದೆಗಳ ಸಂಖ್ಯೆ ಕೊನೆಯ ದಿನಾಂಕ
ಗ್ರಾಮ ಆಡಳಿತಾಧಿಕಾರಿ (VAO) 575 ಜುಲೈ 30
ಭೂಮಾಪಕರು 750 ಆಗಸ್ಟ್ 7
ವಸತಿ ಶಾಲೆ ಶಿಕ್ಷಕರು 1,074 ಆಗಸ್ಟ್ 13

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ
ಬಹುದಿನಗಳಿಂದ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಇದು ದೊಡ್ಡ ಅವಕಾಶವಾಗಿದೆ. ಈಗಾಗಲೇ ಪ್ರಕಟವಾಗಿರುವ ಅಧಿಸೂಚನೆಗಳಿಗೆ ನಿಗದಿತ ಅವಧಿಯೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ, ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯನ್ನು ಆರಂಭಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ.

ಡಿಸಿಎಂ ಡಾ.ಜಿ ಪರಮೇಶ್ವರ್ ಟ್ವೀಟ್
ಕರುನಾಡಿನಲ್ಲಿ ಉದ್ಯೋಗ ಉತ್ಸವ ಆರಂಭವಾಗಿದೆ. ಒಳಮೀಸಲಾತಿ ಜಾರಿಯಾದ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆಗಳನ್ನು ಮತ್ತೆ ಆರಂಭಿಸಲಾಗಿದ್ದು, ಮುಂದಿನ ಆರು ತಿಂಗಳಲ್ಲಿ 72,000 ಹುದ್ದೆಗಳು ಭರ್ತಿಯಾಗಲಿದೆ. ಇದರಲ್ಲಿ ಸುಮಾರು 32 ಸಾವಿರ ಹುದ್ದೆಗಳು ಕಲ್ಯಾಣ ಕರ್ನಾಟಕ ಭಾಗಕ್ಕೆ ಮೀಸಲಿಡಲಾಗಿದೆ. 4 ತಿಂಗಳೊಳಗೆ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಆರು ತಿಂಗಳೊಳಗೆ ಅರ್ಹ ಅಭ್ಯರ್ಥಿಗಳ ಕೈಗೆ ನೇಮಕಾತಿ ಪತ್ರ ನೀಡುವ ಗುರಿಯನ್ನು ನಮ್ಮ ಸರ್ಕಾರ ಹೊಂದಿದೆ. ಈಗಾಗಲೇ ಗ್ರಾಮ ಆಡಳಿತಾಧಿಕಾರಿಗಳು, ಭೂಮಾಪಕರು, ವಸತಿ ಶಾಲೆಗಳ ಶಿಕ್ಷಕರು ಹಾಗೂ ವಿಶೇಷ ಮೀಸಲು ಪೊಲೀಸ್ ಪಡೆಯ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಗೊಂಡಿದೆ. ಅಲ್ಲದೇ 2026-27 ನೇ ಸಾಲಿನ ಗ್ರೂಪ್ ʼಎʼ ಮತ್ತು ಗ್ರೂಪ್ ʼಬಿʼ ವೃಂದದ 319 ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ಹುದ್ದೆಗಳ ಭರ್ತಿಗೂ ಆದೇಶ ನೀಡಲಾಗಿದೆ. ಆಸಕ್ತ ಉದ್ಯೋಗಾಕಾಂಕ್ಷಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ, ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ನಿಮ್ಮ ಪ್ರತಿಭೆ ಮತ್ತು ಪರಿಶ್ರಮಕ್ಕೆ ಉದ್ಯೋಗದ ಗೌರವವನ್ನು ನೀಡಲು ನಾವು ಬದ್ಧರಿದ್ದೇವೆ ಎಂದು ಡಿಸಿಎಂ ಡಾ.ಜಿ ಪರಮೇಶ್ವರ್ ಟ್ವೀಟ್ ಮಾಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ