LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!

ದಸರಾ : ದಸರಾ ಹಬ್ಬ ಮತ್ತು ಶಾಲಾ-ಕಾಲೇಜುಗಳಿಗೆ ರಜೆ ಆರಂಭವಾಗಿರುವ ಹಿನ್ನೆಲೆಯಲ್ಲಿ, ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ರಾಜ್ಯ ಹಾಗೂ ಹೊರರಾಜ್ಯಗಳ ನಾನಾ ಪ್ರದೇಶಗಳಿಗೆ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ಆರ್‌ಟಿಸಿ) ಬೃಹತ್ ಸಿದ್ಧತೆ ಮಾಡಿಕೊಂಡಿದೆ. ಅಕ್ಟೋಬರ್ 16 ರಿಂದ 20 ರವರೆಗೆ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ಒಟ್ಟು 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳು ಸಂಚರಿಸಲಿವೆ. ಅಲ್ಲದೆ, ಹಬ್ಬ ಮುಗಿದು ವಾಪಸ್ ಬರುವವರಿಗಾಗಿ ಅಕ್ಟೋಬರ್ 20 ಮತ್ತು 21 ರಂದು ವಿಶೇಷ ಮರಳುವಿಕೆಯ ಬಸ್ ಸೇವೆಗಳನ್ನು ಸಹ ಒದಗಿಸಲಾಗುವುದು ಎಂದು ನಿಗಮ ತಿಳಿಸಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನ ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಸ್ಯಾಟಲೈಟ್ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣಗಳ ಜೊತೆಗೆ ಪ್ರಮುಖ ಟಿಟಿಎಂಸಿ ಕೇಂದ್ರಗಳಾದ ವಿಜಯನಗರ, ಯಶವಂತಪುರ, ಜಯನಗರ, ಬನಶಂಕರಿ, ಬಸವೇಶ್ವರನಗರ ಹಾಗೂ ದೊಮ್ಮಲೂರಿನಿಂದಲೂ ಮುಂಗಡ ಕಾಯ್ದಿರಿಸುವಿಕೆ ಸೌಲಭ್ಯವಿರುವ ಬಸ್‌ಗಳು ಕಾರ್ಯನಿರ್ವಹಿಸಲಿವೆ. ವಿಶೇಷವಾಗಿ ಮೈಸೂರು ದಸರಾಕ್ಕಾಗಿ ಒಟ್ಟು 700 ಬಸ್‌ಗಳನ್ನು ನಿಯೋಜಿಸಲಾಗಿದ್ದು, ಇದರಲ್ಲಿ ಬೆಂಗಳೂರಿನಿಂದ ಮೈಸೂರಿಗೆ ತೆರಳುವ 300 ಹೆಚ್ಚುವರಿ ಬಸ್‌ಗಳು ಹಾಗೂ ಮೈಸೂರಿನಿಂದ ಚಾಮುಂಡಿ ಬೆಟ್ಟ, ಕೆಆರ್‌ಎಸ್, ಶ್ರೀರಂಗಪಟ್ಟಣ, ನಂಜನಗೂಡು ಮತ್ತು ಮಡಿಕೇರಿಯಂತಹ ಪ್ರಮುಖ ಪ್ರವಾಸಿ ಹಾಗೂ ಧಾರ್ಮಿಕ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವ 400 ಬಸ್‌ಗಳು ಸೇರಿವೆ.

ಕರ್ನಾಟಕದ ಮಂಗಳೂರು, ಉಡುಪಿ, ಶಿವಮೊಗ್ಗ, ಹುಬ್ಬಳ್ಳಿ-ಧಾರವಾಡ, ಕಲಬುರಗಿ ಸೇರಿದಂತೆ ವಿವಿಧ ಭಾಗಗಳಿಗೆ ಮಾತ್ರವಲ್ಲದೆ, ಹೈದರಾಬಾದ್, ಚೆನ್ನೈ, ಪಣಜಿ, ಮಂತ್ರಾಲಯಂ, ಪುಣೆ ಹಾಗೂ ಎರ್ನಾಕುಲಂ ಮುಂತಾದ ಅಂತರರಾಜ್ಯ ಪ್ರಮುಖ ನಗರಗಳಿಗೂ ಸಾರಿಗೆ ಸೇವೆಯನ್ನು ವಿಸ್ತರಿಸಲಾಗಿದೆ. ಪ್ರಯಾಣಿಕರ ಆರ್ಥಿಕ ಹೊರೆಯನ್ನು ತಗ್ಗಿಸಲು ಕೆಎಸ್‌ಆರ್‌ಟಿಸಿಯು ವಿಶೇಷ ರಿಯಾಯಿತಿಗಳನ್ನು ಘೋಷಿಸಿದ್ದು, ಒಂದೇ ರಿಸರ್ವೇಷನ್ ಅಡಿಯಲ್ಲಿ ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಟಿಕೆಟ್ ಬುಕ್ ಮಾಡಿದರೆ ಮೂಲ ದರದಲ್ಲಿ ಶೇ. 5 ರಷ್ಟು ರಿಯಾಯಿತಿ ಸಿಗಲಿದೆ. ಹಾಗೆಯೇ, ಹೋಗುವ ಮತ್ತು ಬರುವ (Return Journey) ಟಿಕೆಟ್‌ಗಳನ್ನು ಒಟ್ಟಿಗೆ ಕಾಯ್ದಿರಿಸುವವರಿಗೆ ವಾಪಸಾತಿ ಪ್ರಯಾಣದ ದರದ ಮೇಲೆ ಶೇ. 10 ರಷ್ಟು ವಿಶೇಷ ರಿಯಾಯಿತಿ ದೊರೆಯಲಿದೆ.

ಪ್ರಯಾಣಿಕರು ಈ ವಿಶೇಷ ಬಸ್ ಸೌಲಭ್ಯದ ಪ್ರಯೋಜನ ಪಡೆಯಲು ನಿಗಮದ ಅಧಿಕೃತ ವೆಬ್‌ಸೈಟ್ (www.ksrtc.karnataka.gov.in) ಅಥವಾ ಕೆಎಸ್‌ಆರ್‌ಟಿಸಿ ಮೊಬೈಲ್ ಅಪ್ಲಿಕೇಶನ್ ಮೂಲಕ ಮುಂಚಿತವಾಗಿ ಟಿಕೆಟ್‌ಗಳನ್ನು ಕಾಯ್ದಿರಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ. ಹಬ್ಬದ ರಜೆಯ ಖುಷಿಯಲ್ಲಿ ಊರಿಗೆ ತೆರಳುವ ಸಾರ್ವಜನಿಕರು ಕೊನೆಯ ಕ್ಷಣದ ನೂಕುನುಗ್ಗಲು ತಪ್ಪಿಸಲು ಮುಂಗಡ ಟಿಕೆಟ್ ಬುಕಿಂಗ್ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮೈಸೂರು ದಸರಾ ಸಂಭ್ರಮ: ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿರುವ ಸಿಎಂ ಡಿ.ಕೆ. ಶಿವಕುಮಾರ್ರಾಮಗಿರಿ ರೈಲ್ವೆ ನಿಲ್ದಾಣದಲ್ಲಿ ಬೆಳಗಾವಿ–ಮೈಸೂರು ರೈಲುಗಳ ತಾತ್ಕಾಲಿಕ ನಿಲುಗಡೆ ಅವಧಿ ವಿಸ್ತರಣೆBREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!