LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

GOOD NEWS : ರಾಜ್ಯದ ‘SC’ ಸಮುದಾಯದ ವಿದ್ಯಾರ್ಥಿಗಳಿಗೆ ಸಿಗಲಿದೆ 35,000 ದವರೆಗೆ ಪ್ರೋತ್ಸಾಹಧನ , ಕೂಡಲೇ ಅರ್ಜಿ ಸಲ್ಲಿಸಿ

ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ., ಪಿಯುಸಿ, ಪದವತಿ, ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ನೀಡಲಾಗುವ ಪ್ರೋತ್ಸಾಹಧನ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ.ಯಲ್ಲಿ ಶೇ.60 ರಷ್ಟು ಅಂಕ ಗಳಿಸಿದವರಿಗೆ 7000/-, ಶೇ. 75 ಕ್ಕಿಂತ ಹೆಚ್ಚು ಅಂಕ ಗಳಿಸಿದವರಿಗೆ 15000/- ನೀಡಲಾಗುವುದು. ಪಿಯುಸಿ ವಿದ್ಯಾರ್ಥಿಗಳಿಗೆ 20000/-, ಪದವಿ ವಿದ್ಯಾರ್ಥಿಗಳಿಗೆ 25000/-, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 30000/- ಹಾಗೂ ಕೃಷಿ ಎಂಜಿನಿಯರಿಂ ಗ್, ಪಶು ವೈದ್ಯಕೀಯ ಮತ್ತು ವೈದ್ಯಕೀಯ ಪದವಿ ವಿದ್ಯಾರ್ಥಿಗಳಿಗೆ 35000/- ರೂ.ಗಳ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಇಲಾಖೆಯ ವೆಬ್‌ಸೈಟ್ https://sw.karnataka.gov.in ಮೂಲಕ ಅರ್ಜಿ ಸಲ್ಲಿಸುವಂತೆ ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸುವುದು.

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ (ಎಸ್ ಎಸ್ ಪಿ) ಮೂಲಕ ತಮ್ಮ ಎಸ್ ಎ ಟಿ ಎಸ್ ಐಡಿ ಬಳಸಿ ಹೊಸದಾಗಿ ಅಥವಾ ನವೀಕರಣಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

31.01.2027 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.ಹೆಚ್ಚಿನ ವಿವರ ಹಾಗೂ ಮಾಹಿತಿಗಾಗಿ ವಿದ್ಯಾರ್ಥಿಗಳು ಕಚೇರಿ ವೇಳೆಯಲ್ಲಿ ಖುದ್ದಾಗಿ ಭದ್ರಾವತಿಯ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ಸಹಾಯಕ ನಿರ್ದೇಶಕರು (ಗ್ರೇಡ್ 1) ತಿಳಿಸಿದ್ದಾರೆ.

ಶಿಕಾರಿಪುರ: ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ: ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ಇಲಾಖೆಯಿಂದ 2026-27 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್, ಹನಿ ನೀರಾವತಿ, ಕೃಷಿ ಯಾಂತ್ರೀಕರಣ ಉಪಯೋಜನೆ, ತಾಳೆ ಬೆಳೆ ಯೋಜನೆ, ಆರ್‌ಕೆವಿವೈ, ಜೇನುಸಾಕಾಣಿಕೆ, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಮುಂತಾದ ಯೋಜನೆಗಳಡಿ ವಿವಿಧ ಕಾರ್ಯಕ್ರಮಗಳಿಗೆ ಸಹಾಯಧನ ನೀಡಲಾಗುತ್ತಿದ್ದು, ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ.

ಈ ಕಾರ್ಯಕ್ರಮಗಳಿಗೆ ಜೇಷ್ಠತೆ ಮತ್ತು ಮೀಸಲಾತಿಗೆ ಅನುಗುಣವಾಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದು, ರೈತರು ಹೆಚ್ಚಿನ ವಿವರ ಹಾಗೂ ನಿಗದಿತ ನಮೂನೆ ಅರ್ಜಿಗಾಗಿ ಶಿಕಾರಿಪುರ ತೋಟಗಾರಿಕೆ ಇಲಾಖೆ ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರದಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ದಿ:13/07/2026 ರೊಳಗಾಗಿ ಸಲ್ಲಿಸುವಂತೆ ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಆಯಾ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸುವುದು. ಅಂಜನಾಪುರ-8861994178, ತಾಳಗುಂದ – 7975515575, ಕಸಬಾ-9113812090, ಉಡುಗಣಿ – 9108548454, ಹೊಸೂರು – 6363095898 ಗಳನ್ನು ಸಂಪರ್ಕಿಸುವುದು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ