LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಡದಿ ಟೌನ್ ಶಿಪ್ ಬಗ್ಗೆ HDK ಪಂಥಾಹ್ವಾನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ನೇರಾನೇರ ಚರ್ಚೆಗೆ ಟೈಮ್ ಫಿಕ್ಸ್: ಜೂ. 26ರಂದು ಬೆಳಗ್ಗೆ 11 ಗಂಟೆಗೆ ದಾಖಲೆ ಸಹಿತ ಬರಲು ಆಹ್ವಾನ

ಬೆಂಗಳೂರು: ಬಿಡದಿ ಟೌನ್ ಶಿಪ್ ಬಗ್ಗೆ ನೇರಾನೇರ ಚರ್ಚೆಗೆ ಪಂಥಾಹ್ವಾನ ನೀಡಲಾಗಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಪಂಥಾಹ್ವಾನ ಸ್ವೀಕರಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಟೈಮ್ ಫಿಕ್ಸ್ ಮಾಡಿದ್ದಾರೆ.

ಜೂನ್ 26ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧಕ್ಕೆ ಬರಲು ಆಹ್ವಾನ ನೀಡಿದ್ದಾರೆ. ನೇರಾನೇರ ಚರ್ಚೆಗೆ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಡಿ.ಕೆ. ಶಿವಕುಮಾರ್ ಆಹ್ವಾನ ನೀಡಿದ್ದಾರೆ.

ಬಿಡದಿ ಟೌನ್ ಶಿಪ್ ಗೆ ಸಂಬಂಧಿಸಿದ ಅಧಿಕೃತ ದಾಖಲೆಗಳ ಜೊತೆಗೆ ಚರ್ಚೆಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಜೂನ್ 26ರಂದು ಬೆಳಿಗ್ಗೆ 11 ಗಂಟೆಗೆ ಐವರು ಜನಪ್ರತಿನಿಧಿಗಳ ಜೊತೆಗೆ ಬರುವಂತೆ ಕುಮಾರಸ್ವಾಮಿಗೆ ಸಿಎಂ ಡಿಕೆ ಆಹ್ವಾನ ನೀಡಿ ಪತ್ರ ಬರೆದಿದ್ದಾರೆ.

ಬಿಡದಿ ಟೌನ್ ಶಿಪ್ ಬಗ್ಗೆ

ಕರ್ನಾಟಕ ಸರ್ಕಾರವು ಬೆಂಗಳೂರು ನಗರದ ಜನಸಂದಣಿಯನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಬೃಹತ್ ಬಿಡದಿ ಟೌನ್ ಶಿಪ್(Greater Bengaluru Integrated Township – GBIT) ಯೋಜನೆಯನ್ನು ಪ್ರಕಟಿಸಿದೆ. ಆದರೆ, ಇದು ಫಲವತ್ತಾದ ಕೃಷಿ ಭೂಮಿಯನ್ನು ಕಸಿದುಕೊಳ್ಳುತ್ತಿದೆ ಎಂದು ವಿರೋಧಿಸಿ ಸ್ಥಳೀಯ ರೈತರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.

ಮಾವು ಮತ್ತು ತೆಂಗಿನ ಮರಗಳನ್ನು ಒಳಗೊಂಡಿರುವ ಫಲವತ್ತಾದ ಕೃಷಿ ಭೂಮಿಯನ್ನು ಕಳೆದುಕೊಳ್ಳುವುದರಿಂದ ಸಾವಿರಾರು ರೈತರು ಬೀದಿಪಾಲಾಗಲಿದ್ದಾರೆ ಎಂದು ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಹೆಚ್.ಡಿ. ಕುಮಾರಸ್ವಾಮಿ ಅವರು ಈ ಯೋಜನೆಯನ್ನು ತೀವ್ರವಾಗಿ ವಿರೋಧಿಸಿದ್ದು, ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ. ಇದರ ನಡುವೆಯೇ ಯೋಜನೆಗಾಗಿ ಭೂಮಿ ನೀಡಿದ ಕೆಲವು ರೈತರಿಗೆ ಪರಿಹಾರದ ಚೆಕ್ ವಿತರಿಸಲಾಗಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಬಿಡದಿ ಟೌನ್ ಶಿಪ್ ಬಗ್ಗೆ ಹೆಚ್.ಡಿ. ಕುಮಾರಸ್ವಾಮಿ ಪಂಥಾಹ್ವಾನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ನೇರಾನೇರ ಚರ್ಚೆಗೆ ಟೈಮ್ ಫಿಕ್ಸ್ ಮಾಡಿದ್ದು, ಜೂ. 26ರಂದು ಬೆಳಗ್ಗೆ 11 ಗಂಟೆಗೆ ದಾಖಲೆ ಸಹಿತ ಬರಲು ಆಹ್ವಾನ ನೀಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ