LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

IPL 2026 Qualifier 1: ನಾಯಕ ಪಟಿದಾರ್ ರೌದ್ರಾವತಾರ; ಗುಜರಾತ್‌ಗೆ ಕಠಿಣ ಗುರಿ ನೀಡಿದ ಆರ್‌ಸಿಬಿ!

ಇಂದು ( ಮೇ 26 ) ಧರಂಶಾಲಾ ಕ್ರೀಡಾಂಗಣದಲ್ಲಿ ಮಹತ್ವದ ಐಪಿಎಲ್ 2026ರ ಒಂದನೇ ಕ್ವಾಲಿಫಯರ್ ಪಂದ್ಯ ನಡೆಯುತ್ತಿದೆ. ಗ್ರೂಪ್ ಹಂತದ ಅಂಕಪಟ್ಟಿಯಲ್ಲಿ ಕ್ರಮವಾಗಿ ಒಂದು ಹಾಗೂ ಎರಡನೇ ಸ್ಥಾನ ಪಡೆದುಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಿವೆ.

ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟನ್ಸ್ ಬೌಲಿಂಗ್ ಆರಿಸಿಕೊಂಡಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 254 ರನ್ ಕಲೆಹಾಕಿ ಗುಜರಾತ್ ಟೈಟನ್ಸ್‌ಗೆ 255 ರನ್‌ಗಳ ಗುರಿಯನ್ನು ನೀಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆರಂಭಿಕರಾಗಿ ಕಣಕ್ಕಿಳಿದ ವೆಂಕಟೇಶ್ ಐಯ್ಯರ್ 7 ಎಸೆತಗಳಲ್ಲಿ 19 ರನ್ ಗಳಿಸಿದರೆ, ವಿರಾಟ್ ಕೊಹ್ಲಿ 25 ಎಸೆತಗಳಲ್ಲಿ 43 ರನ್ ಗಳಿಸಿದರು. ಇನ್ನುಳಿದಂತೆ ದೇವದತ್ ಪಡಿಕ್ಕಲ್ 19 ಎಸೆತಗಳಲ್ಲಿ 30 ರನ್ ಬಾರಿಸಿದರೆ, ನಾಲ್ಕನೇ ವಿಕೆಟ್‌ಗೆ ಜತೆಯಾದ ನಾಯಕ ರಜತ್ ಪಟಿದಾರ್ ಹಾಗೂ ಕೃನಾಲ್ ಪಾಂಡ್ಯ 95 ರನ್‌ಗಳ ಜತೆಯಾಟವನ್ನಾಡಿ ಅಬ್ಬರಿಸಿದರು. ಕೃನಾಲ್ ಪಾಂಡ್ಯ 28 ಎಸೆತಗಳಲ್ಲಿ 43 ರನ್ ಚಚ್ಚಿದರೆ, ಕೊನೆಯವರೆಗೂ ನಿಂತು ಆರ್ಭಟಿಸಿದ ಪಟಿದಾರ್ 33 ಎಸೆತಗಳಲ್ಲಿ 5 ಬೌಂಡರಿ ಹಾಗೂ 9 ಸಿಕ್ಸರ್ ಸಹಿತ ಅಜೇಯ 93 ರನ್ ಚಚ್ಚಿದರು. ಇನ್ನುಳಿದಂತೆ ಟಿಮ್ ಡೇವಿಡ್ 4 ರನ್ ಹಾಗೂ ಜಿತೇಶ್ ಶರ್ಮಾ 5 ಎಸೆತಗಳಲ್ಲಿ ಅಜೇಯ 15 ರನ್ ಗಳಿಸಿದರು.

ಗುಜರಾತ್ ಟೈಟನ್ಸ್ ಪರ ಕಗಿಸೊ ರಬಾಡಾ ಹಾಗೂ ಜೇಸನ್ ಹೋಲ್ಡರ್ ತಲಾ ಎರಡು ವಿಕೆಟ್ ಪಡೆದರೆ, ಪ್ರಸಿದ್ಧ್ ಕೃಷ್ಣ ಒಂದು ವಿಕೆಟ್ ಪಡೆದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ