LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

IPS ಅಧಿಕಾರಿ ಅಲೋಕ್ ಕುಮಾರ್ ವಿರುದ್ಧ ಶಿಸ್ತುಕ್ರಮಕ್ಕೆ ಆಗ್ರಹಿಸಿ CSಗೆ ಮಾಜಿ MLC ರಮೇಶ್ ಬಾಬು ಪತ್ರ

ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು, ಅದನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧ ಅಖಿಲ ಭಾರತ ಸೇವಾ ನಿಯಮಗಳಡಿ ಶಿಸ್ತುಕ್ರಮ ಜರುಗಿಸುವಂತೆ ಹೈಕೋರ್ಟ್ ವಕೀಲ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಒತ್ತಾಯಿಸಿದ್ದಾರೆ. 

ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಅವರು, ಸಾರ್ವಜನಿಕ ಆಡಳಿತ ಹಾಗೂ ಸೇವಾ ಶಿಸ್ತಿನ ಉಲ್ಲಂಘನೆಯ ಹಿನ್ನೆಲೆಯಲ್ಲಿ ಅಧಿಕಾರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿ ವಿವರಣೆ ಪಡೆಯುವಂತೆ ಕೋರಿದ್ದಾರೆ.

ಸುಪ್ರೀಂ ಕೋರ್ಟ್ ವಿಚಾರಣೆ ಹಾಗೂ ಮಾಧ್ಯಮ ವರದಿಗಳು

ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಹಗರಣದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಮುಂದೆ ರಾಜ್ಯ ಸರ್ಕಾರ ಮಂಡಿಸಿದ ವಾದವನ್ನು ಪ್ರಶ್ನಿಸಿ, ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಅವರು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವುದಾಗಿ ಅಕ್ಟೋಬರ್ 14 ಮತ್ತು 15ರಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ರಾಜ್ಯ ಸರ್ಕಾರವು ನ್ಯಾಯಾಲಯದ ಮುಂದೆ ತಪ್ಪು ಮಾಹಿತಿ ಸಲ್ಲಿಸಿದೆ ಮತ್ತು ತಮ್ಮನ್ನು ಆರೋಪಿಯಂತೆ ಬಿಂಬಿಸಿದೆ ಎಂದು ಅಧಿಕಾರಿ ಆಕ್ಷೇಪ ವ್ಯಕ್ತಪಡಿಸಿರುವುದಾಗಿ ವರದಿಗಳಲ್ಲಿ ಉಲ್ಲೇಖಿಸಲಾಗಿತ್ತು. ಈ ವಿಷಯಗಳು ಪ್ರಸ್ತುತ ಸರ್ವೋಚ್ಚ ನ್ಯಾಯಾಲಯದ ವಿಚಾರಣಾ ಹಂತದಲ್ಲಿದ್ದು, ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಲಾಗಿದೆ.

ಅಖಿಲ ಭಾರತ ಸೇವಾ ನಡತೆ ನಿಯಮಗಳ ಸ್ಪಷ್ಟ ಉಲ್ಲಂಘನೆ

ಅಖಿಲ ಭಾರತ ಸೇವೆಗಳ (ನಡತೆ) ನಿಯಮಗಳು 1968ರ ಪ್ರಕಾರ, ಅಧಿಕಾರಿಗಳು ಸರ್ಕಾರದ ನೀತಿ ಅಥವಾ ಕ್ರಮಗಳನ್ನು ಸಾರ್ವಜನಿಕವಾಗಿ ಟೀಕಿಸುವುದು, ಮಾಧ್ಯಮಗಳಿಗೆ ಅಧಿಕೃತ ಮಾಹಿತಿಗಳನ್ನು ಸೋರಿಕೆ ಮಾಡುವುದು ಗಂಭೀರ ನಿಯಮಬಾಹಿರ ಕೃತ್ಯವಾಗಿದೆ. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲಿ ಯಾವುದೇ ಅಸಮಾಧಾನವಿದ್ದರೂ ಅದನ್ನು ಇಲಾಖಾ ಸೇವಾ ನಿಯಮಗಳ ಚೌಕಟ್ಟಿನಲ್ಲಿಯೇ ಪರಿಹರಿಸಿಕೊಳ್ಳಬೇಕಿತ್ತು. ಆದರೆ ಸರ್ಕಾರದ ಆಂತರಿಕ ಪತ್ರವು ಮಾಧ್ಯಮಗಳಿಗೆ ತಲುಪಿರುವುದು ನಿಯಮ 3ರ ನೇರ ಉಲ್ಲಂಘನೆಯಾಗಿದ್ದು, ಅಧಿಕಾರಿ ಸುಪ್ರೀಂ ಕೋರ್ಟ್ ವಿಚಾರಣೆಯ ಮಾಹಿತಿ ಪಡೆದ ಮೂಲ ಹಾಗೂ ಸರ್ಕಾರದ ವಿರುದ್ಧ ಅರ್ಜಿ ಸಲ್ಲಿಸಿದ ಅವಕಾಶದ ಬಗ್ಗೆ ವಿವರಣೆ ನೀಡಬೇಕಿದೆ ಎಂದು ರಮೇಶ್ ಬಾಬು ಪ್ರತಿಪಾದಿಸಿದ್ದಾರೆ.

ಸರ್ಕಾರಕ್ಕೆ ಸಲ್ಲಿಸಿರುವ ಪ್ರಮುಖ ಬೇಡಿಕೆಗಳು

ಸಾರ್ವಜನಿಕ ಹಿತಾಸಕ್ತಿಯಿಂದ ಸರ್ಕಾರಕ್ಕೆ ಸಲ್ಲಿಸಿದ ಪತ್ರವು ಮಾಧ್ಯಮಗಳಿಗೆ ಹೇಗೆ ತಲುಪಿತು ಎಂಬುದರ ಕುರಿತು ಸಮಗ್ರ ವರದಿ ಪಡೆಯಬೇಕೆಂದು ಪತ್ರದಲ್ಲಿ ಕೋರಲಾಗಿದೆ. ಅಗತ್ಯವಿದ್ದಲ್ಲಿ ಅಧಿಕಾರಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿ ವಿವರಣೆ ಪಡೆಯಬೇಕು ಹಾಗೂ ನಿಯಮಗಳ ಉಲ್ಲಂಘನೆ ಸಾಬೀತಾದರೆ ಅಖಿಲ ಭಾರತ ಸೇವೆಗಳು (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು 1969ರ ಅಡಿಯಲ್ಲಿ ಕ್ರಮ ಕೈಗೊಂಡು ಸಕ್ಷಮ ಪ್ರಾಧಿಕಾರಕ್ಕೆ ವಹಿಸಬೇಕು. ಸರ್ವೋಚ್ಚ ನ್ಯಾಯಾಲಯದ ಮುಂದೆ ರಾಜ್ಯ ಸರ್ಕಾರ ಮಂಡಿಸಿರುವ ಕಾನೂನು ನಿಲುವಿಗೆ ಯಾವುದೇ ಪೂರ್ವಾಗ್ರಹ ಉಂಟಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆಉತ್ತರ ಪ್ರದೇಶದಲ್ಲಿ ಮೂರನೇ ಅವಧಿಗಾಗಿ ಬಿಜೆಪಿಯ ತಂತ್ರ: ಕಲ್ಯಾಣ ಯೋಜನೆ, ಮಹಿಳಾ ಮತ ಮತ್ತು ಯೋಗಿ ವರ್ಚಸ್ಸಿನ ಮೇಲೆ ಭರವಸೆಭಾರತದಲ್ಲಿ ಅತಿ ಹೆಚ್ಚು ಸಕ್ಕರೆ ಉತ್ಪಾದಿಸುವ ಟಾಪ್ 5 ಕಂಪನಿಗಳು ಯಾವುದು ಗೊತ್ತಾ? ಇಲ್ಲಿದೆ ಮಾಹಿತಿ!