LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಿನ IT ಕಂಪನಿಗಳಲ್ಲಿ ಉದ್ದೇಶಪೂರ್ವಕವಾಗಿ ಕನ್ನಡಿಗರನ್ನು ಕಡೆಗಣಿಸಿದ್ರೆ ಕಠಿಣ ಕ್ರಮ : ಸಿಎಂ ಡಿಕೆ ಶಿವಕುಮಾರ್ ವಾರ್ನಿಂಗ್!

ಬೆಂಗಳೂರು : ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಕೆಲಸ ಸಿಗುತ್ತಿಲ್ಲ ಎಂದು ನಿನ್ನೆ ಯುವತಿಯೊಬ್ಬಳು ವಿಡಿಯೋ ಮಾಡಿದ್ದಳು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಳು. ಇದೀಗ ಡಿಕೆ ಶಿವಕುಮಾರ್ ಯುವತಿಯ ಒಂದು ಮನವಿಗೆ ಸ್ಪಂದಿಸಿದ್ದು ಐಟಿ ಕಂಪನಿಗಳಲ್ಲಿ ಕನ್ನಡಿಗರನ್ನು ಕಡೆಗಣಿಸಿದರೆ ಅಂತಹ ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ, ವಾರ್ನಿಂಗ್ ಕೊಟ್ಟಿದ್ದಾರೆ.

ಎಕ್ಸ್ ಖಾತೆಯಲ್ಲಿ ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿರುವುದು ವಿಷಾದನೀಯ. ಕನ್ನಡ ಮಾತೃಭಾಷೆ ಇರುವವರನ್ನು ಕಡೆಗಣಿಸಲಾಗುತ್ತಿದೆ ಎಂಬ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. 

ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡಿಗರ ಹಕ್ಕು, ಗೌರವ ಮತ್ತು ಅವಕಾಶಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಲು ಸರ್ಕಾರ ಅವಕಾಶ ನೀಡುವುದಿಲ್ಲ. ಜಗತ್ತು ಬೆಂಗಳೂರನ್ನು ಭಾರತದ ತಂತ್ರಜ್ಞಾನ ರಾಜಧಾನಿಯಾಗಿ ನೋಡುತ್ತಿದ್ದು, ನಮ್ಮ ಕನ್ನಡಿಗರ ಪ್ರತಿಭೆ, ಕೌಶಲ್ಯ ಮತ್ತು ಸಾಮರ್ಥ್ಯದ ಬಗ್ಗೆ ನಮಗೆ ಅಪಾರ ಹೆಮ್ಮೆಯಿದೆ.

ಕನ್ನಡಿಗರನ್ನು ಯಾವುದೇ ಖಾಸಗಿ ಸಂಸ್ಥೆ ಉದ್ದೇಶಪೂರ್ವಕವಾಗಿ ಕಡೆಗಣಿಸಿರುವುದು ಕಂಡುಬಂದರೆ, ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಕನ್ನಡಿಗರ ಹಿತಾಸಕ್ತಿಗೆ ಧ್ವನಿಯಾಗಿ, ಅವರ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಸದಾ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

https://twitter.com/i/status/2114240574819860939

 

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೌದಿ ಅರೇಬಿಯಾದ ರಿಯಾದ್ ಹಾಗೂ ದಮ್ಮಾಮ್ ಗೆ ನವೆಂಬರ್ 7ರವರೆಗೆ ಏರ್ ಇಂಡಿಯಾ ವಿಮಾನ ಹಾರಾಟ ರದ್ದುಲಿಂಗಾಯತ, ವೀರಶೈವ ಒಂದೇ ನಾಣ್ಯದ ಎರಡು ಮುಖ: ಸಚಿವ ಈಶ್ವರ ಖಂಡ್ರೆಸೌದಿ ಅರೆಬಿಯಾದ ರಿಯಾದ್ ಹಾಗೂ ದಮ್ಮಾಮ್ ಗೆ ನವೆಂಬರ್ 7ರವರೆಗೆ ಏರ್ ಇಂಡಿಯಾ ವಿಮಾನ ಹಾರಾಟ ರದ್ದುಬೆಂಗಳೂರಿನ IT ಕಂಪನಿಗಳಲ್ಲಿ ಉದ್ದೇಶಪೂರ್ವಕವಾಗಿ ಕನ್ನಡಿಗರನ್ನು ಕಡೆಗಣಿಸಿದ್ರೆ ಕಠಿಣ ಕ್ರಮ : ಸಿಎಂ ಡಿಕೆ ಶಿವಕುಮಾರ್ ವಾರ್ನಿಂಗ್!ಜನವರಿಯೊಳಗೆ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆ: ಸಚಿವ ಈಶ್ವರ ಖಂಡ್ರೆದಸರಾ ಸಾಕಾನೆಗಳಿಗೆ ಹೆಚ್ಚಿನ ತಾಲೀಮು ಅಗತ್ಯ: ಸಚಿವ ಈಶ್ವರ ಖಂಡ್ರೆಡಾ.ಭೀಮಣ್ಣ ಖಂಡ್ರೆಗೆ 'ಕರ್ನಾಟಕ ರತ್ನ' ನೀಡಲು ವೀರಶೈವ ಲಿಂಗಾಯತ ಮಹಾಸಭಾ ನಿರ್ಣಯಗ್ರಾಮೀಣ ಕುಡಿಯುವ ನೀರಿಗೆ ಹಣಕಾಸಿನ ಕೊರತೆ ಇಲ್ಲ: ಸಚಿವ ಈಶ್ವರ ಖಂಡ್ರೆನಟ ಧನ್ವೀರ್‌ಗೆ 10 ಕೋಟಿ ರೂ. ನೀಡಿದ್ದರೇ ವಿಜಯಲಕ್ಷ್ಮಿ? ದರ್ಶನ್ ಪತ್ನಿ-ಧನ್ವೀರ್ ನಡುವಿನ ಗಲಾಟೆಗೆ ಹೊಸ ತಿರುವು!ಸಿದ್ದರಾಮಯ್ಯರನ್ನು ಭೇಟಿಯಾಗಿಲ್ಲ, ಕೆಲವರು ಹೇಳಿ ಕೊಟ್ಟಿದನ್ನು ಮಾತ್ರ ಹೇಳಿದ್ದೇನೆ : ಸ್ಟಿಂಗ್ ವಿಡಿಯೋದಲ್ಲಿದ್ದ ಮಹಿಳೆ ಸ್ಪೋಟಕ ಹೇಳಿಕೆ!