LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

JOB ALERT : 14 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 258 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸ್ತುತ ಖಾಲಿ ಇರುವ 14 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಿಗೆ ತಲಾ ಒಂದರಂತೆ ಒಟ್ಟು 14 ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬಾಂಡ್ಯ ಕುಕ್ಕೆ, ಹೊಸಹಳ್ಳಿ. ಸಾಗರ ತಾಲ್ಲೂಕಿನ ಕುದರೂರು, ಕಲ್ಮನೆ, ಹೆಗ್ಗೋಡು. ಭದ್ರಾವತಿ ತಾಲ್ಲೂಕಿನ ವೀರಾಪುರ, ಕೂಡ್ಲಿಗೆರೆ. ಹೊಸನಗರ ತಾಲ್ಲೂಕಿನ ಸುಳುಗೋಡು, ತ್ರಿಣಿವೆ. ಸೊರಬ ತಾಲ್ಲೂಕಿನ ಭಾರಂಗಿ, ಹರೀಶಿ. ಶಿಕಾರಿಪುರ ತಾಲ್ಲೂಕಿನ‌ ಮುದ್ದನಹಳ್ಳಿ, ಅಂಬಾರಗೊಪ್ಪ ಹಾಗೂ ಶಿವಮೊಗ್ಗ ತಾಲ್ಲೂಕಿನ ಚೋರಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರಿವು ಕೇಂದ್ರಗಳಲ್ಲಿ ಈ ಹುದ್ದೆಗಳು ಖಾಲಿ ಇದ್ದು, ನಿಯಮಾನುಸಾರ ರೋಸ್ಟರ್ ಬಿಂದುಗಳ ಆಧಾರದ ಮೇಲೆ ನೇಮಕಾತಿ ನಡೆಯಲಿದೆ.

ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ, ಧೃಢೀಕರಿಸಿದ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳಿಗೆ ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸಲ್ಲಿಸಬೇಕಾಗಿದೆ. ಅರ್ಜಿಗಳನ್ನು ಸಲ್ಲಿಸಲು ಜುಲೈ 8 ಕಡೆಯ ದಿನವಾಗಿದೆ.

ಅರ್ಜಿ ನಮೂನೆಗಳು ಆಯಾ 14 ಗ್ರಾಮ ಪಂಚಾಯತಿಗಳಲ್ಲಿ ಲಭ್ಯವಿದ್ದು, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://shivamogga.nic.in ಮೂಲಕವೂ ಡೌನ್‌ಲೋಡ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಲು ಶಿವಮೊಗ್ಗ ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ (ಆಡಳಿತ) ಹಾಗೂ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದಿಂದ ಅರಿವು ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮವು 2026-27ನೇ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಕ್ರಿಶ್ಚಿಯನ್ ಸಮುದಾಯದವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ಹೊಸ/ಸಿಇಟಿ/ಎನ್‌ಇಇಟಿ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯಬಯಸುವವರಿಂದ ಅರಿವು ಸಾಲ ಸೌಲಭ್ಯ ಪಡೆಯಲು ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಆಸಕ್ತ ವಿದ್ಯಾರ್ಥಿಗಳು www.kccdconline.karnataka.gov.in ಮೂಲಕ ಅರ್ಜಿ ಭರ್ತಿ ಮಾಡಿ, ಪ್ರಿಂಟೌಟ್ ಜೊತೆಗೆ ಎಸ್‌ಎಸ್‌ಎಲ್‌ಸಿ/ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಭಾವಚಿತ್ರ, ಸಿಇಟಿ/ಎನ್‌ಇಇಟಿ ಪ್ರವೇಶ ಪತ್ರ ಹಾಗೂ ಇನ್ನಿತರ ದಾಖಲೆಗಳನ್ನು ಲಗತ್ತಿಸಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಅಚ್ಯುತ್‌ರಾವ್ ಲೇಔಟ್, 4ನೇ ತಿರುವು, ನಂಜಪ್ಪ ಆಸ್ಪತ್ರೆ ಮುಂಭಾಗ, ಶಿವಮೊಗ್ಗ ಇಲ್ಲಿಗೆ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-228262 ಹಾಗೂ ಜಿಲ್ಲಾ ಕಚೇರಿಯನ್ನು ಸಂಪರ್ಕಿಸುವುದು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ