LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

JOB ALERT : ಕ್ರೈಸ್ ವಸತಿ ಶಾಲೆಗಳ ಅತಿಥಿ ಶಿಕ್ಷಕರ ಆಯ್ಕೆಗೆ ಜೂನ್ 15 ರಂದು ತರಗತಿ ಪ್ರಾತ್ಯಕ್ಷಿಕೆ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ವಸತಿ ಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ಆಯ್ಕೆ ಮಾಡಿಕೊಳ್ಳಲು ಜೂನ್ 15ರಂದು ತರಗತಿ ಪ್ರಾತ್ಯಕ್ಷಿಕೆ ಆಯೋಜಿಸಲಾಗಿದೆ.

ಜಿಲ್ಲೆಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತಿದ್ದು, ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಈ ಪ್ರಾತ್ಯಕ್ಷಿಕೆ ನಡೆಯಲಿದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ಪದವಿ ಮತ್ತು ಬಿ.ಇಡಿ ಅಂಕಪಟ್ಟಿಗಳು, ಟಿ.ಇ.ಟಿ ಪ್ರಮಾಣಪತ್ರ ಹಾಗೂ ಸೇವಾ ಪ್ರಮಾಣಪತ್ರಗಳ ಮೂಲ ಪ್ರತಿಗಳೊಂದಿಗೆ 2026ರ ಜೂನ್ 15ರ ಸೋಮವಾರ ಬೆಳಿಗ್ಗೆ 10.30ಕ್ಕೆ ಸಂಬಂಧಪಟ್ಟ ಶಾಲೆಗಳಿಗೆ ಹಾಜರಾಗಲು ಸೂಚಿಸಲಾಗಿದೆ.

ಗಣಿತ, ವಿಜ್ಞಾನ, ಕಂಪ್ಯೂಟರ್ ಸೈನ್ಸ್ ಹಾಗೂ ಹಿಂದಿ ವಿಷಯಗಳ ಅಭ್ಯರ್ಥಿಗಳಿಗೆ ಗೂಳಯ್ಯನಹಟ್ಟಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ (ಸಾಮಾನ್ಯ-24) ಪ್ರಾತ್ಯಕ್ಷಿಕೆ ನಡೆಯಲಿದೆ. ಇಂಗ್ಲಿಷ್, ಸಮಾಜ ವಿಜ್ಞಾನ ಹಾಗೂ ದೈಹಿಕ ಶಿಕ್ಷಣ ವಿಷಯಗಳ ಅಭ್ಯರ್ಥಿಗಳಿಗೆ ಚಿತ್ರದುರ್ಗ ನಗರದ ಸೀಬಾರದ ಎನ್.ಹೆಚ್-4 ಕೇತೇಶ್ವರ ಮಠದ ಸಮೀಪದ ಇರುವ ತುರುವನೂರು ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ (ಪ. ವರ್ಗ-59) ಪ್ರಾತ್ಯಕ್ಷಿಕೆ ಆಯೋಜಿಸಲಾಗಿದೆ ಎಂದು ಚಿತ್ರದುರ್ಗ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನ

2026-27ನೆ ಸಾಲಿಗೆ ಕೃಷೋನ್ನತಿ-ಕೃಷಿ ವಿಸ್ತರಣೆ (ಆತ್ಮ) ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ಕೃಷಿ ಇಲಾಖೆಯಲ್ಲಿ ಹೊಸದಾಗಿ 6 ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗಳಿಗೆ ನೇರ ಗುತ್ತಿಗೆ ಆಧಾರದ ಮೇಲೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೂನ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ.ಮೊಳಕಾಲ್ಮೂರು ತಾಲ್ಲೂಕು ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಒಂದರಂತೆ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬಬ್ಬೂರು ಫಾರಂಗೆ ಒಂದು ಹುದ್ದೆ ಸೇರಿದಂತೆ ಒಟ್ಟು 6 “ಸಹಾಯಕ ತಾಂತ್ರಿಕ ವ್ಯವಸ್ಥಾಪಕರ” ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಕೃಷಿ/ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಕೃಷಿ/ಕೃಷಿ ಸಂಬಂಧಿತ ಚಟುವಟಿಕೆಗಳಲ್ಲಿ ಕನಿಷ್ಠ 1 ವರ್ಷದ ಕ್ಷೇತ್ರ ಮಟ್ಟದ ಅನುಭವ ಹೊಂದಿರಬೇಕು. ಅರ್ಜಿದಾರರು 10.06.2026ಕ್ಕೆ 45 ವರ್ಷದೊಳಗಿರಬೇಕು. ವೇತನ ಮಾಹೆಯಾನ ರೂ. 25,000/- ನೀಡಲಾಗುವುದು.

ಆಸಕ್ತ ಅಭ್ಯರ್ಥಿಗಳು ಆತ್ಮ ವಿಭಾಗ, ಜಂಟಿ ಕೃಷಿ ನಿರ್ದೇಶಕರ ಕಛೇರಿ, ಚಿತ್ರದುರ್ಗ ಇಲ್ಲಿ ಅರ್ಜಿಯನ್ನು ಪಡೆದು, ಅರ್ಜಿಯನ್ನು ನಿಗಧಿತ ನಮೂನೆಯಲ್ಲಿ ಪೂರ್ಣ ಮಾಹಿತಿಯೊಂದಿಗೆ ದಿನಾಂಕ:30.06.2026 ಸಂಜೆ 5ರ ಒಳಗಾಗಿ ಮುದ್ದಾಂ / ನೊಂದಣೆ ಅಂಚೆ ಮೂಲಕ ಜಂಟಿ ಕೃಷಿ ನಿರ್ದೇಶಕರು, ಆತ್ಮ ವಿಭಾಗ ಚಿತ್ರದುರ್ಗ ಇವರಿಗೆ ಅರ್ಜಿ ಸಲ್ಲಿಸಲು ಸೂಚಿಸಿದ್ದು, ತಡವಾಗಿ ಬಂದ ಅರ್ಜಿಗಳನ್ನು ಸ್ವಿಕರಿಸಲಾಗುವುದಿಲ್ಲ. ಅರ್ಜಿಯೊಂದಿಗೆ ವಿದ್ಯಾರ್ಹತೆ ಸಂಬಂಧಿಸಿದಂತೆ ಎಲ್ಲಾ ವರ್ಷದ ಅಂಕಪಟ್ಟಿಗಳು, ಅನುಭವ ಪ್ರಮಾಣ ಪತ್ರಗಳು, ಕಂಪ್ಯೂಟರ್ ಜ್ಞಾನಕ್ಕೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಲಗತ್ತಿಸುವುದು ಕಡ್ಡಾಯವಾಗಿರುತ್ತದೆ ಮತ್ತು ಎಲ್ಲಾ ಪ್ರಮಾಣ ಪತ್ರಗಳ ದೃಢೀಕೃತ ಪ್ರತಿಗಳನ್ನು ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಆತ್ಮ ವಿಭಾಗ, ಜಂಟಿ ಕೃಷಿ ನಿರ್ದೇಶಕರ ಕಛೇರಿ, ಚಿತ್ರದುರ್ಗ ಇಲ್ಲಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ