LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

JOB ALERT : ಜೂನ್ 20 ರಂದು ಉದ್ಯೋಗ ನೇರ ಸಂದರ್ಶನ

ಶಿವಮೊಗ್ಗ :   ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ. 20 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಶನದಲ್ಲಿ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದು, ಯಾವುದೇ ಡಿಗ್ರಿ ಮತ್ತು ಮಾಸ್ಟರ್ ಡಿಗ್ರಿ ಪೂರೈಸಿದ, 18 ರಿಂದ 30 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವುದು

ಪ್ರಧಾನ ಮಂತ್ರಿ ಮತ್ಸ್ಯಸಂಪದ/ನೀಲಿಕ್ರಾಂತಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : 2022-26 ರಿಂದ 2024-25 ನೇ ಸಾಲಿನವರೆಗೂ ಮರುಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿಯಲ್ಲಿ ಬಾಕಿಯಿರುವ ಮೀನು ಕೃಷಿ ಕೊಳಗಳ ನಿರ್ಮಾಣ, ಮೀನುಕೃಷಿ ಕೊಳ ನಿರ್ಮಾಣ ಮಾಡಿ ಮೀನುಕೃಷಿ ಕೈಗೊಂಡವರಿಗೆ ಹೂಡಿಕೆಗಳ ವೆಚ್ಚದ ಮೇಲೆ ಸಹಾಯಧನ ಹಾಗೂ ಮೀನುಮರಿ ಪಾಲನಾ ಘಟಕ ನಿರ್ಮಾಣದ ಬಗ್ಗೆ ಸಹಾಯಧನ ಪಡೆಯಲು ಆಸಕ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಸಹಾಯಧನ ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. 40 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ. 60 ರಷ್ಟು ಸಹಾಯಧನ ನೀಡಲಾಗುವುದು.ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಆಯಾ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಜೂ. 20 ರೊಳಗಾಗಿ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ