LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

JOB ALERT : ‘SSLC’ ಪಾಸಾದವರಿಗೆ ಗುಡ್ ನ್ಯೂಸ್ ; 234 ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ತುಮಕೂರು: ಜಿಲ್ಲಾ ಗೃಹರಕ್ಷಕ ದಳದಲ್ಲಿ ಖಾಲಿ ಇರುವ 234 ಗೃಹರಕ್ಷಕ/ಗೃಹರಕ್ಷಕಿಯರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.

ಜಿಲ್ಲಾ ಗೃಹರಕ್ಷಕ ದಳದ ಪ್ರಕಟಣೆ ಪ್ರಕಾರ, 16-06-2026ರ ವೇಳೆಗೆ ತುಮಕೂರು ಜಿಲ್ಲೆಯ ವಿವಿಧ ಘಟಕಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 180 ಪುರುಷರು ಹಾಗೂ 54 ಮಹಿಳೆಯರು ಸೇರಿದಂತೆ 234 ಹುದ್ದೆಗಳು ಭರ್ತಿಯಾಗಲಿವೆ.

ಘಟಕವಾರು ಹುದ್ದೆಗಳ ವಿವರ

  • ತುಮಕೂರು – 27
  • ತಿಪಟೂರು – 10
  • ಅರಸೀಕೆರೆ – 14
  • ಕುಣಿಗಲ್ – 17
  • ತುರುವೇಕೆರೆ – 13
  • ಅಬ್ಬೂರು – 10
  • ಶಿರಾ – 07
  • ಕೊರಟಗೆರೆ – 09
  • ಮಿಡಿಗೇಶಿ – 12
  • ಪಾವಗಡ – 18
  • ಡಿ.ಎಂ. ಪ್ಲಾಟೂನ್ – 04
  • ಸಿರಾ – 12
  • ಗೂಬ್ಬಿ – 12
  • ಕಳಂಬಳ್ಳಿ – 07
  • ತಾವರೆಕೆರೆ – 15
  • ಜಯನಗರ – 12
  • ಚೆನ್ನಾಯನಪಾಳ್ಯ – 10
  • ನೆಲ್ಲಿಸಿಕೆರೆ – 14
  • ಹೊನ್ನವಳ್ಳಿ – 11

ಅರ್ಜಿ ಸಲ್ಲಿಕೆ ದಿನಾಂಕ

ಅರ್ಜಿ ಸ್ವೀಕಾರ ಪ್ರಕ್ರಿಯೆಯು 18-06-2026 ರಿಂದ 25-06-2026ರವರೆಗೆ ನಡೆಯಲಿದೆ.

ಅರ್ಜಿ ಸಲ್ಲಿಸುವ ಸಮಯ

  • ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30ರವರೆಗೆ
  • ಮಧ್ಯಾಹ್ನ 3:00 ರಿಂದ ಸಂಜೆ 5:00ರವರೆಗೆ

ಅರ್ಜಿ ಸಲ್ಲಿಸುವ ಸ್ಥಳ

ಜಿಲ್ಲಾ ಗೃಹರಕ್ಷಕ ದಳ ಕಚೇರಿ, ಬಟವಾಡಿ, ತುಮಕೂರು.

ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ಗೃಹರಕ್ಷಕ ದಳದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕೊನೆ ಮಾತು: ಸರ್ಕಾರಿ ಸೇವೆಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಯುವಕರಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೇ ಶೀಘ್ರವೇ ಅರ್ಜಿ ಸಲ್ಲಿಸುವುದು ಒಳಿತು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ