LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

K-SET ಪರೀಕ್ಷೆ ಯಶಸ್ವಿ: ಶೇ.91ರಷ್ಟು ಅಭ್ಯರ್ಥಿಗಳು ಹಾಜರು

ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್-2026 ಪರೀಕ್ಷೆ ಇಂದು ಯಶಸ್ವಿಯಾಗಿ ನಡೆಯಿತು.

ಒಟ್ಟು 37 ವಿವಿಧ ವಿಷಯಗಳಿಗೆ ನಡೆದ ಕೆ-ಸೆಟ್ ಗೆ ಅರ್ಜಿ ಸಲ್ಲಿಸಿದ್ದ 1,29,212 ಮಂದಿ ಪೈಕಿ 1,17,017 (ಶೇ‌ 91ರಷ್ಟು) ಮಂದಿ ಹಾಜರಾಗಿದ್ದರು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ತಿಳಿಸಿದ್ದಾರೆ.

ಒಟ್ಟು 11 ಜಿಲ್ಲೆಗಳ 326 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಕೆಇಎ ಕಚೇರಿಯಲ್ಲಿ ಸ್ಥಾಪಿಸಿದ್ದ ಕಮಾಂಡ್ ಸೆಂಟರ್ ‌ಮೂಲಕ ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ‌ ಇಡುವ ವ್ಯವಸ್ಥೆಯನ್ನು ಮಾಡಲಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಒಎಂಆರ್ ಉತ್ತರ ಪತ್ರಿಕೆಗಳ ಸ್ಕ್ಯಾನಿಂಗ್ ಕೂಡ ಆರಂಭವಾಗಿದ್ದು ಹಂತಹಂತವಾಗಿ ವೆಬ್ ಸೈಟ್ ಗೆ ಅಪ್ ಲೋಡ್ ಮಾಡುವ ಕೆಲಸವನ್ನೂ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಕೆಇಎ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ, ಪರೀಕ್ಷಾ ನಿಯಂತ್ರಕಿ ಅರ್ಚನಾ ಅವರು ಖುದ್ದು ಕಮಾಂಡ್ ಸೆಂಟರ್ ನಲ್ಲಿ ಇದ್ದು ಪರೀಕ್ಷಾ ಮೇಲ್ವಿಚಾರಣೆ ನಡೆಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆಉತ್ತರ ಪ್ರದೇಶದಲ್ಲಿ ಮೂರನೇ ಅವಧಿಗಾಗಿ ಬಿಜೆಪಿಯ ತಂತ್ರ: ಕಲ್ಯಾಣ ಯೋಜನೆ, ಮಹಿಳಾ ಮತ ಮತ್ತು ಯೋಗಿ ವರ್ಚಸ್ಸಿನ ಮೇಲೆ ಭರವಸೆಭಾರತದಲ್ಲಿ ಅತಿ ಹೆಚ್ಚು ಸಕ್ಕರೆ ಉತ್ಪಾದಿಸುವ ಟಾಪ್ 5 ಕಂಪನಿಗಳು ಯಾವುದು ಗೊತ್ತಾ? ಇಲ್ಲಿದೆ ಮಾಹಿತಿ!