LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: KKRTC ಗೆ 400 ಹೊಸ ಬಸ್ ಮಂಜೂರು

ಕೊಪ್ಪಳ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ(ಕೆಕೆಆರ್‌ಟಿಸಿ) ಒಟ್ಟಾರೆ 400 ನೂತನ ಬಸ್‌ ಗಳು ಮಂಜೂರಾಗಿದ್ದು, ಶೀಘ್ರದಲ್ಲೇ ‘ಪಿಎಂ ಇ-ಬಸ್ ಸೇವಾ’ (PM E-Bus Seva) ಯೋಜನೆಯಡಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ಬಸ್‌ ಗಳು ನಿಗಮಕ್ಕೆ ಸೇರ್ಪಡೆಗೊಳ್ಳಲಿವೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ ಪಾಟೀಲ್ ಹೇಳಿದರು.

ಆಗಸ್ಟ್ 20 ರಂದು ಕೊಪ್ಪಳ ಜಿಲ್ಲೆಗೆ ಭೇಟಿ ನೀಡಿದ ಅವರು, ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರಿಗೆ ಸೌಲಭ್ಯಗಳ ಪರಿಶೀಲನೆ ನಡೆಸಿದರು.

ಸಂಸದರೊಂದಿಗೆ ಚರ್ಚೆ:

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಅಧ್ಯಕ್ಷರು, ಕೊಪ್ಪಳ ಜಿಲ್ಲಾ ಭೇಟಿಯ ವೇಳೆ ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಈ ಸಂದರ್ಭದಲ್ಲಿ ಸಂಸದರು ಕೊಪ್ಪಳ ಜಿಲ್ಲೆಯ ಸಾರ್ವಜನಿಕರಿಗೆ ಹಾಗೂ ಗ್ರಾಮೀಣ ಭಾಗದ ಜನರಿಗೆ ಇನ್ನಷ್ಟು ಹೆಚ್ಚಿನ ಸಾರಿಗೆ ಸೌಲಭ್ಯ ಒದಗಿಸುವಂತೆ ಅಧ್ಯಕ್ಷರಲ್ಲಿ ಮನವಿ ಮಾಡಿದರು.

ಕೇಂದ್ರೀಯ ಬಸ್ ನಿಲ್ದಾಣ ಪರಿಶೀಲನೆ:

ನಂತರ ಕೊಪ್ಪಳ ಕೇಂದ್ರೀಯ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಅಧ್ಯಕ್ಷರು, ಅಲ್ಲಿನ ಮೂಲಭೂತ ಸೌಕರ್ಯಗಳು, ದ್ವಿಚಕ್ರ ವಾಹನ ನಿಲುಗಡೆ(ಪಾರ್ಕಿಂಗ್) ವ್ಯವಸ್ಥೆ, ಶೌಚಾಲಯ ಹಾಗೂ ಮೂತ್ರಾಲಯಗಳ ಸ್ವಚ್ಛತೆ ನಿರ್ವಹಣೆಯನ್ನು ಖುದ್ದಾಗಿ ಪರಿಶೀಲಿಸಿದರು. ಜೊತೆಗೆ ಬಸ್ ಪಾಸ್ ವಿತರಣಾ ಕೌಂಟರ್‌ ಗೆ ತೆರಳಿ, ವಿದ್ಯಾರ್ಥಿಗಳಿಗೆ ಹಾಗೂ ಪ್ರಯಾಣಿಕರಿಗೆ ಪಾಸ್ ವಿತರಣೆ ಸಮರ್ಪಕವಾಗಿ ನಡೆಯುತ್ತಿದೆಯೇ ಎಂಬ ವಾಸ್ತವಿಕ ಸ್ಥಿತಿಗತಿಯನ್ನು ಪರಿಶೀಲಿಸಿದರು.

ಎಲೆಕ್ಟ್ರಿಕ್ ಬಸ್ ಘಟಕ ನಿರ್ಮಾಣಕ್ಕೆ ಸೂಚನೆ:

ಜಿಲ್ಲಾಧಿಕಾರಿಗಳ ಅನುಮೋದನೆಯಂತೆ ಕೆಕೆಆರ್‌ಟಿಸಿಗೆ ಮಂಜೂರಾಗಿರುವ 5 ಎಕರೆ ಖಾಲಿ ನಿವೇಶನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶೀಘ್ರವಾಗಿ ಎಲೆಕ್ಟ್ರಿಕ್ ಬಸ್ ಘಟಕ(Electric Bus Unit) ನಿರ್ಮಾಣ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಂತರ ಕೊಪ್ಪಳ ವಿಭಾಗೀಯ ಕಚೇರಿಯ ಪಕ್ಕದಲ್ಲಿರುವ ಹಳೆಯ ವಸತಿ ಗೃಹಗಳನ್ನು ತೆರವುಗೊಳಿಸಿದ ಸ್ಥಳವನ್ನು ವೀಕ್ಷಿಸಿದರು.

ಪ್ರಗತಿ ಪರಿಶೀಲನಾ ಸಭೆ & ದೇವರಾಜ ಅರಸು ಜಯಂತಿ: ವಿಭಾಗೀಯ ಕಚೇರಿಯಲ್ಲಿ ದಿವಂಗತ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಬಳಿಕ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಎಲ್ಲಾ ಶಾಖಾ ಮುಖ್ಯಸ್ಥರು ಹಾಗೂ ಘಟಕ ವ್ಯವಸ್ಥಾಪಕರೊಂದಿಗೆ ಸಭೆ ನಡೆಸಿ, ವಿಭಾಗದ ಭೌತಿಕ ಮತ್ತು ಆರ್ಥಿಕ ಪ್ರಗತಿಯನ್ನು ಪರಿಶೀಲಿಸಿ ಅಧಿಕಾರಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಾರ್ವಜನಿಕರಿಗೆ ಉತ್ತಮ ಹಾಗೂ ಗುಣಮಟ್ಟದ ಸಾರಿಗೆ ಸೇವೆ ಒದಗಿಸಲು ಸಿಬ್ಬಂದಿ ಬದ್ಧರಾಗಿರಬೇಕೆಂದು ಕರೆ ನೀಡಿದರು.

 ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಸೇರಿದಂತೆ ಘಟಕ ವ್ಯವಸ್ಥಾಪಕರು, ಶಾಖಾ ಮುಖ್ಯಸ್ಥರು ಹಾಗೂ ಇತರೆ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: KKRTC ಗೆ 400 ಹೊಸ ಬಸ್ ಮಂಜೂರುಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರು ವಶಕ್ಕೆ: ಲಕ್ಷಾಂತರ ರೂ. ಮೌಲ್ಯದ ಆಭರಣ ವಶಬಾಂಗ್ಲಾದೇಶದ ನೂತನ ಅಧ್ಯಕ್ಷರಾಗಿ BNP ಅಭ್ಯರ್ಥಿ ಮಿರ್ಜಾ ಫಖ್ರುಲ್ ಇಸ್ಲಾಂ ಅಲಂಗೀರ್ ಆಯ್ಕೆBREAKING: ಲಡಾಖ್ ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆಗೆ ಕೇಂದ್ರ ನಿರ್ಧಾರ: ಅಮಿತ್ ಶಾ ಘೋಷಣೆಅನುಮತಿ ಇಲ್ಲದೆ ಸಚಿವ ಕೃಷ್ಣ ಬೈರೇಗೌಡರ ಪೋಸ್ಟರ್ ಅಂಟಿಸಿದ್ದ ವ್ಯಕ್ತಿ ವಿರುದ್ಧ ಕೇಸ್ ದಾಖಲುಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿKPME ಉಲ್ಲಂಘನೆ: ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ದಂಡ, ಪರವಾನಗಿ ರದ್ದುಮೋದಿ ದೇವರಿಗೆ ಪೂಜೆ: ಭಕ್ತರಿಂದ ‘ಜೈ ಜೈ ಮೋದಿ, ಹರ್ ಹರ್ ಮೋದಿ’ ಘೋಷಣೆ; ದೆಹಲಿ ಪ್ರೆಸ್ ಕ್ಲಬ್‌ನಲ್ಲಿ ‘ಮೋದಿ ಚಾಲೀಸಾ’ ಕಾರ್ಯಕ್ರಮ!ತಪ್ಪಾಯ್ತು ಕ್ಷಮಿಸಿಬಿಡಿ: ರಸ್ತೆ ಮುಚ್ಚಿದ್ದಕ್ಕೆ ಭಾರತೀಯ ಸೇನೆಗೆ ‘ನಾನು GenZ’ ಎಚ್ಚರಿಕೆ ನೀಡಿದ್ದ ಯುವತಿಯಿಂದ ಕ್ಷಮೆಯಾಚನೆಲೋಕಸಭಾ ಕ್ಷೇತ್ರ ಹೆಚ್ಚಳ ಮಾಡಬಾರದು; 1971ರ ಜನಸಂಖ್ಯೆ ಆಧಾರವನ್ನು ಗೌರವಿಸಬೇಕು ಸಿಎಂ ಡಿ.ಕೆ.ಶಿವಕುಮಾರ್ ಮನವಿ