LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

KPME ಉಲ್ಲಂಘನೆ: ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ದಂಡ, ಪರವಾನಗಿ ರದ್ದು

ಬೆಂಗಳೂರು: ಕರ್ನಾಟಕ ಖಾಸಗಿ ನರ್ಸಿಂಗ್ ನಿಯಂತ್ರಣ ಕಾಯಿದೆ(ಕೆಪಿಎಂಇ) ನಿಯಮಗಳು ಉಲ್ಲಂಘಿಸಿದ ಖಾಸಗಿ ವೈದ್ಯಕೀಯ ಸಂಸ್ಥೆ, ಆಸ್ಪತ್ರೆಗಳು, ಕ್ಲಿನಿಕ್ ಗಳು ಹಾಗೂ ಪುನರ್ವಸತಿ ಕೇಂದ್ರಗಳ ವಿಚಾರಣೆ ನಡೆಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಕಾಂತರಾಜು ಪಿ.ಎಸ್ ಅವರು ದಂಡ ವಿಧಿಸಿ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು ನಗರ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಕೆಪಿಎಂಇ ಮತ್ತು ಕುಂದು ಕೊರತೆ ಪ್ರಾಧಿಕಾರದ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕೆಪಿಎಂಇ ಕಾಯ್ದೆ ಅನ್ವಯ ನಿಯಮವನ್ನು ಉಲ್ಲಂಘನೆ ಮಾಡಿರುವ  ಖಾಸಗಿ ವೈದ್ಯಕೀಯ ಸಂಸ್ಥೆಗಳು, ಆಸ್ಪತ್ರೆಗಳು, ಕ್ಲಿನಿಕ್ ಗಳು ಹಾಗೂ ಪುನರ್ವಸತಿ ಕೇಂದ್ರದವರಿಗೆ ವಿಚಾರಣೆ ನಡೆಸಿ ಎಚ್ಚರಿಕೆ ನೀಡಿ ಮುಂದಿನ ದಿನಗಳಲ್ಲಿ ಯಾವುದೇ ನ್ಯೂತೆಗಳನ್ನು ಮಾಡದಂತೆ ಮುಚ್ಚಳಿಕೆ ಪತ್ರವನ್ನು ನೀಡುವಂತೆ ಸೂಚಿಸಿದರು.

ಅದರಂತೆ ಹೆಚ್‌ಎಎಲ್ ರಸ್ತೆಯಲ್ಲಿರುವ ಕ್ಲೌಡ್‌ನೈನ್ ಆಸ್ಪತ್ರೆ – ರೂ. 50,000. ಇಕ್ಷಾ ಕ್ಲಿನಿಕ್, ಮುನೇಶ್ವರ ಲೇಔಟ್, ರೂ. 10,000. ಎನ್‌ಯು ಹಾಸ್ಪಿಟಲ್ಸ್ ಪ್ರೈವೇಟ್ ಲಿಮಿಟೆಡ್, ರಾಜಾಜಿನಗರ, ಬೆಂಗಳೂರು ರೂ. 10,000. ಆರ್.ವಿ. ಕ್ಲಿನಿಕ್, ಕೊಪ್ಪ ಮುಖ್ಯ ರಸ್ತೆ, ಹುಲ್ಲಹಳ್ಳಿ ಗ್ರಾಮ, ಜಿಗಣಿ ಹೋಬಳಿ, ಆನೇಕಲ್ ತಾಲ್ಲೂಕು ರೂ. 1,00,000 ದಂಡ ವಿಧಿಸಿದರು.

ಉಳಿದಂತೆ ಟಿ.ದಾಸರಹಳ್ಳಿಯ, ಪ್ರಶಾಂತನಗರದ  ಪೈಪ್ ಲೈನ್ ರಸ್ತೆಯ ಶ್ರೀ ಅಯ್ಯಪ್ಪ ಟೆಂಪಲ್ ಮೆಡಿಕಲ್ ಸೆಂಟರ್ ರೂ. 50,000, ಶ್ರೀ ಪದ್ಮಗಿರಿ ಕ್ಲಿನಿಕ್, ಎಸ್,ಎಲ್,ಎನ್ ರಸ್ತೆ, ಕೂಡ್ಲೂ ರೆಡ್ಡಿ ಲೇಜೌಟ್ ಜಿಗಣಿ, ಆನೇಕಲ್, ತಾಲ್ಲೂಕು ರೂ. 1.00,000, ಹಾಗೂ ಶ್ರೀ ಹರ್ಷವರ್ಧನ್ ಆಸ್ಪತ್ರೆ, 7ನೇ ಕ್ರಾಸ್, ಬಿ.ಜಿ. ರಸ್ತೆ, ಬೆಂಗಳೂರು ರೂ. 20,000 ಗಳ ದಂಡವನ್ನು ವಿಧಿಸಿ ಕೆಪಿಎಂಇ ಪರವಾನಗಿಯನ್ನು ರದ್ದುಪಡಿಸಿದರು.

ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮದಿನಿ, ಜಿಲ್ಲಾ ಆರೋಗ್ಯಧಿಕಾರಿ ನದೀಮ್ ಮೊಹ್ಮದ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: KKRTC ಗೆ 400 ಹೊಸ ಬಸ್ ಮಂಜೂರುಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರು ವಶಕ್ಕೆ: ಲಕ್ಷಾಂತರ ರೂ. ಮೌಲ್ಯದ ಆಭರಣ ವಶಬಾಂಗ್ಲಾದೇಶದ ನೂತನ ಅಧ್ಯಕ್ಷರಾಗಿ BNP ಅಭ್ಯರ್ಥಿ ಮಿರ್ಜಾ ಫಖ್ರುಲ್ ಇಸ್ಲಾಂ ಅಲಂಗೀರ್ ಆಯ್ಕೆBREAKING: ಲಡಾಖ್ ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆಗೆ ಕೇಂದ್ರ ನಿರ್ಧಾರ: ಅಮಿತ್ ಶಾ ಘೋಷಣೆಅನುಮತಿ ಇಲ್ಲದೆ ಸಚಿವ ಕೃಷ್ಣ ಬೈರೇಗೌಡರ ಪೋಸ್ಟರ್ ಅಂಟಿಸಿದ್ದ ವ್ಯಕ್ತಿ ವಿರುದ್ಧ ಕೇಸ್ ದಾಖಲುಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿKPME ಉಲ್ಲಂಘನೆ: ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ದಂಡ, ಪರವಾನಗಿ ರದ್ದುಮೋದಿ ದೇವರಿಗೆ ಪೂಜೆ: ಭಕ್ತರಿಂದ ‘ಜೈ ಜೈ ಮೋದಿ, ಹರ್ ಹರ್ ಮೋದಿ’ ಘೋಷಣೆ; ದೆಹಲಿ ಪ್ರೆಸ್ ಕ್ಲಬ್‌ನಲ್ಲಿ ‘ಮೋದಿ ಚಾಲೀಸಾ’ ಕಾರ್ಯಕ್ರಮ!ತಪ್ಪಾಯ್ತು ಕ್ಷಮಿಸಿಬಿಡಿ: ರಸ್ತೆ ಮುಚ್ಚಿದ್ದಕ್ಕೆ ಭಾರತೀಯ ಸೇನೆಗೆ ‘ನಾನು GenZ’ ಎಚ್ಚರಿಕೆ ನೀಡಿದ್ದ ಯುವತಿಯಿಂದ ಕ್ಷಮೆಯಾಚನೆಲೋಕಸಭಾ ಕ್ಷೇತ್ರ ಹೆಚ್ಚಳ ಮಾಡಬಾರದು; 1971ರ ಜನಸಂಖ್ಯೆ ಆಧಾರವನ್ನು ಗೌರವಿಸಬೇಕು ಸಿಎಂ ಡಿ.ಕೆ.ಶಿವಕುಮಾರ್ ಮನವಿ