LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

Monsoon Rain : 24 ಗಂಟೆಗಳಲ್ಲಿ ಕೇರಳ ಕರಾವಳಿ ತಲುಪಲಿವೆ ನೈಋತ್ಯ ಮುಂಗಾರು ಮಾರುತಗಳು

ಜನರಿಗೆ ಹವಾಮಾನ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದೆ. ನೈಋತ್ಯ ಮುಂಗಾರು ಮಾರುತಗಳು ಮುಂದಿನ 24 ಗಂಟೆಗಳಲ್ಲಿ ಕೇರಳ ಕರಾವಳಿಯನ್ನು ತಲುಪಲಿವೆ ಎಂದು ಹೈದರಾಬಾದ್ ಹವಾಮಾನ ಕೇಂದ್ರ ತಿಳಿಸಿದೆ. ಈ ತಿಂಗಳ 6ರಂದು ರಾಯಲಸೀಮೆಗೆ ಮತ್ತು 8ರ ವೇಳೆಗೆ ತೆಲಂಗಾಣಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ. ಇದರ ಪರಿಣಾಮವಾಗಿ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಈಗಾಗಲೇ ಅಲ್ಲಲ್ಲಿ ಮಳೆ ಶುರುವಾಗಿದೆ.

ಮುಂದಿನ ದಿನಗಳ ಹವಾಮಾನ ಮುನ್ಸೂಚನೆ:

  • ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗುರುವಾರ ಮತ್ತು ಶುಕ್ರವಾರ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚಿನೊಂದಿಗೆ ಮಳೆಯಾಗುವ ಮುನ್ಸೂಚನೆ ಇದೆ. ಶುಕ್ರವಾರ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಕೇಂದ್ರ ಎಚ್ಚರಿಸಿದೆ.ಮುಂಗಾರಿನ ಆಗಮನದಿಂದಾಗಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಗರಿಷ್ಠ ತಾಪಮಾನವು ಕ್ರಮೇಣ 2 ರಿಂದ 4 ಡಿಗ್ರಿ ಸೆಲ್ಸಿಯಸ್‌ನಷ್ಟು ಇಳಿಕೆಯಾಗುವ ನಿರೀಕ್ಷೆಯಿದೆ.

ಕೇರಳಕ್ಕೆ ಮುಂಗಾರು ಪ್ರವೇಶದೊಂದಿಗೆ ಕರ್ನಾಟಕ, ಕೇರಳ, ತಮಿಳುನಾಡು, ಪುದುಚೇರಿಗಳಲ್ಲಿ ಉತ್ತಮ ಮಳೆಯಾಗಲಿದೆ. ಇದೇ ವೇಳೆ ಆಂಧ್ರಪ್ರದೇಶದ ಕರಾವಳಿ ರಾಯಲ್‌ಸೀಮಾ, ಕರ್ನಾಟಕದ ಕರಾವಳಿ ತೀರದಲ್ಲಿ ಭಾರಿ ಗಾಳಿ ಮಳೆಯಾಗಲಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ