LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

MVI Recruitment : 2 ತಿಂಗಳ ಒಳಗೆ ನೇಮಕಾತಿ ಆದೇಶ ಹೊರಡಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಬೆಂಗಳೂರು: ಸಾರಿಗೆ ಇಲಾಖೆಯ 150 ಮೋಟಾರು ವಾಹನ ನಿರೀಕ್ಷಕರ (MVI) ಹುದ್ದೆಗಳ ಪರಿಷ್ಕೃತ ಅಂತಿಮ ಆಯ್ಕೆ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಅಭ್ಯರ್ಥಿಗಳಿಗೆ ಮುಂದಿನ ಎರಡು ತಿಂಗಳ ಒಳಗೆ ನೇಮಕಾತಿ ಆದೇಶ ನೀಡುವಂತೆ ರಾಜ್ಯ ಸರ್ಕಾರ ಹಾಗೂ ಸಾರಿಗೆ ಇಲಾಖೆಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿದೆ.

ಭಾರೀ ಸರಕು ಸಾಗಣೆ ವಾಹನ (HGV) ಮತ್ತು ಭಾರೀ ಪ್ರಯಾಣಿಕ ವಾಹನ (HPV) ಪೆಟ್ರೋಲ್ ಎಂಜಿನ್ ಕಾರ್ಯಾಗಾರಗಳಲ್ಲಿ (ಗ್ಯಾರೇಜ್) ಸೇವಾನುಭವ ಹೊಂದಿಲ್ಲ ಎಂಬ ಕಾರಣಕ್ಕೆ ಆಯ್ಕೆಯಾದ ಅಭ್ಯರ್ಥಿಗಳ ನೇಮಕಾತಿಯನ್ನು ತಡೆಹಿಡಿಯಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಅಭ್ಯರ್ಥಿಗಳು ಇತರೆ ಎಲ್ಲಾ ಅಗತ್ಯ ಷರತ್ತುಗಳನ್ನು ಪೂರೈಸಿದ್ದರೆ, ಕೇವಲ HGV ಮತ್ತು HPV ವಾಹನಗಳ ಸೇವಾನುಭವದ ಗೊಂದಲಗಳಿದ್ದರೂ ನೇಮಕಾತಿ ಆದೇಶ ನೀಡಬಹುದು ಎಂದು ನ್ಯಾಯಪೀಠ ತಿಳಿಸಿದೆ.

ಉದ್ಯೋಗ ಆಕಾಂಕ್ಷಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ದೇವದಾಸ್ ಹಾಗೂ ನ್ಯಾಯಮೂರ್ತಿ ಡಾ. ಕೆ. ಮನ್ಮಥ ರಾವ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಮಹತ್ವದ ಆದೇಶವನ್ನು ಹೊರಡಿಸಿದೆ. ಇದರಿಂದಾಗಿ ಹಲವು ವರ್ಷಗಳಿಂದ ನೇಮಕಾತಿ ಆದೇಶಕ್ಕಾಗಿ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ದೊಡ್ಡ ಮಟ್ಟದ ಸಮಾಧಾನ ಸಿಕ್ಕಂತಾಗಿದೆ.

ಪ್ರಕರಣದ ಹಿನ್ನೆಲೆ: 2016ರ ಫೆಬ್ರವರಿಯಲ್ಲಿ ಕೆಪಿಎಸ್‌ಸಿ 150 MVI ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿತ್ತು. ನಿಯಮಾವಳಿಗಳ ಪ್ರಕಾರ ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್‌ನ ಲಘು, ಭಾರೀ ಸರಕು ಮತ್ತು ಪ್ರಯಾಣಿಕ ವಾಹನಗಳ ದುರಸ್ತಿ ಕಾರ್ಯಾಗಾರದಲ್ಲಿ ಕನಿಷ್ಠ 1 ವರ್ಷದ ಸೇವಾ ಅನುಭವ ಕಡ್ಡಾಯವಾಗಿತ್ತು. ಆದರೆ, ಈ ಹಿಂದೆ ಹೈಕೋರ್ಟ್ 1 ವರ್ಷದ ಸೇವಾನುಭವದ ಷರತ್ತನ್ನು ಕೈಬಿಡುವಂತೆ ಸೂಚಿಸಿತ್ತು. ಅದರಂತೆ ಕೆಪಿಎಸ್‌ಸಿ 2023ರ ಅಕ್ಟೋಬರ್ 26ರಂದು ಪರಿಷ್ಕೃತ ಅಂತಿಮ ಆಯ್ಕೆಪಟ್ಟಿ ಪ್ರಕಟಿಸಿ, ದಾಖಲೆ ಪರಿಶೀಲನೆಗೆ ಜಿಲ್ಲಾಧಿಕಾರಿಗಳಿಗೆ ಕಳುಹಿಸಿತ್ತು.

ಆದಾಗ್ಯೂ ನೇಮಕಾತಿ ಆದೇಶ ಸಿಗದ ಅಭ್ಯರ್ಥಿಗಳು ಕೆಎಟಿ (KAT) ಮೆಟ್ಟಿಲೇರಿದ್ದರು. ಎರಡು ಪ್ರತ್ಯೇಕ ಕಾರ್ಯಾಗಾರಗಳಲ್ಲಿ ಪಡೆದ ಸೇವಾನುಭವವನ್ನು ಒಟ್ಟುಗೂಡಿಸಿ 1 ವರ್ಷ ಪೂರ್ಣಗೊಂಡಿದ್ದರೆ ಅದನ್ನು ಪರಿಗಣಿಸಬೇಕು ಎಂದು ಕೆಎಟಿ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸರ್ಕಾರ ಹಾಗೂ ಸಾರಿಗೆ ಇಲಾಖೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು, ಇದೀಗ ಹೈಕೋರ್ಟ್ ಅಭ್ಯರ್ಥಿಗಳ ಪರವಾಗಿ ತೀರ್ಪು ನೀಡಿ ಅರ್ಜಿ ವಿಲೇವಾರಿ ಮಾಡಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆ