LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: NDA ಅಭ್ಯರ್ಥಿ ಗೆಲುವಿಗೆ JDS ಉಸ್ತುವಾರಿ ಸಮಿತಿ ರಚನೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಹಿರಿಯ ವಕೀಲ ಎ.ಪಿ. ರಂಗನಾಥ್ ಅವರನ್ನು ಗೆಲ್ಲಿಸುವ ಉದ್ದೇಶದಿಂದ ಜೆಡಿಎಸ್ ಪಕ್ಷವು ಪ್ರಮುಖ ನಾಯಕರನ್ನೊಳಗೊಂಡ ಬಲಿಷ್ಠ ಚುನಾವಣಾ ಉಸ್ತುವಾರಿ ಸಮಿತಿಯನ್ನು ರಚಿಸಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ಈ ಸಂಬಂಧ ಅಧಿಕೃತ ನೇಮಕಾತಿ ಆದೇಶವನ್ನು ಹೊರಡಿಸಿದ್ದಾರೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ (ಬೆಂಗಳೂರು ದಕ್ಷಿಣ) ಜಿಲ್ಲೆಗಳ ವ್ಯಾಪ್ತಿಯನ್ನು ಒಳಗೊಂಡಿರುವ ಈ ಶಿಕ್ಷಕರ ಕ್ಷೇತ್ರದ ಚುನಾವಣೆ ಅಕ್ಟೋಬರ್ 23ರ ಶುಕ್ರವಾರದಂದು ನಿಗದಿಯಾಗಿದೆ. ಮೈತ್ರಿಕೂಟದ ಅಭ್ಯರ್ಥಿಯ ಪರವಾಗಿ ಪ್ರಚಾರವನ್ನು ತಳಮಟ್ಟದಿಂದ ಸಂಘಟಿಸಲು ಪಕ್ಷದ ಹಾಲಿ ಹಾಗೂ ಮಾಜಿ ಜನಪ್ರತಿನಿಧಿಗಳು ಮತ್ತು ಪದಾಧಿಕಾರಿಗಳಿಗೆ ಮಹತ್ವದ ಹೊಣೆಗಾರಿಕೆ ವಹಿಸಲಾಗಿದೆ.

ಭೋಜೇಗೌಡ, ರಮೇಶ್‌ಗೌಡ ಹೆಗಲಿಗೆ ಸಮಗ್ರ ಉಸ್ತುವಾರಿ ಜವಾಬ್ದಾರಿ

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸಂಪೂರ್ಣ ಮೇಲುಸ್ತುವಾರಿಯ ನಾಯಕತ್ವವನ್ನು ವಿಧಾನ ಪರಿಷತ್ತಿನ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಸ್.ಎಲ್. ಭೋಜೇಗೌಡ ಹಾಗೂ ಗ್ರೇಟರ್ ಬೆಂಗಳೂರು ಜೆಡಿಎಸ್ ಅಧ್ಯಕ್ಷ, ಮಾಜಿ ಶಾಸಕ ಹೆಚ್.ಎಂ. ರಮೇಶ್‌ಗೌಡ ಅವರಿಗೆ ಒಪ್ಪಿಸಲಾಗಿದೆ. ಇವರೊಂದಿಗೆ ವಿಧಾನ ಪರಿಷತ್ ಸದಸ್ಯರಾದ ಡಾ. ಟಿ.ಎ. ಶರವಣ, ಟಿ.ಎನ್. ಜವರಾಯಿಗೌಡ, ಮಾಜಿ ಶಾಸಕರಾದ ಕೆ.ಟಿ. ಶ್ರೀಕಂಠೇಗೌಡ, ಇ. ಕೃಷ್ಣಪ್ಪ, ಅಖಂಡ ಶ್ರೀನಿವಾಸಮೂರ್ತಿ ಹಾಗೂ ವಿವಿಧ ಜಿಲ್ಲಾಧ್ಯಕ್ಷರು ಮತ್ತು ಪ್ರಮುಖ ಮುಖಂಡರಿಗೆ ಆಯಾ ಜಿಲ್ಲಾ ವ್ಯಾಪ್ತಿಯ ಉಸ್ತುವಾರಿ ನೀಡಲಾಗಿದೆ.

ಬಿಜೆಪಿ ಜತೆ ಸಮನ್ವಯ ಹಾಗೂ ಪ್ರಚಾರ ಕಾರ್ಯತಂತ್ರ

ಚುನಾವಣಾ ಯಶಸ್ಸಿಗಾಗಿ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಜೆಡಿಎಸ್ ಹಾಗೂ ಮಿತ್ರಪಕ್ಷ ಬಿಜೆಪಿಯ ಮುಖಂಡರೊಂದಿಗೆ ಸಮನ್ವಯ ಸಭೆಗಳನ್ನು ನಿರಂತರವಾಗಿ ನಡೆಸಲು ಸೂಚಿಸಲಾಗಿದೆ. ವಾರಕ್ಕೊಮ್ಮೆ ಉಭಯ ಪಕ್ಷಗಳ ಜಂಟಿ ಪತ್ರಿಕಾಗೋಷ್ಠಿಗಳನ್ನು ಕಡ್ಡಾಯವಾಗಿ ಆಯೋಜಿಸಬೇಕು ಹಾಗೂ ಕೇಂದ್ರ ಸಚಿವರು, ಸಂಸದರು, ಶಾಸಕರು ಮತ್ತು ಮಾಜಿ ಜನಪ್ರತಿನಿಧಿಗಳ ನೇತೃತ್ವದಲ್ಲಿ ಅಗತ್ಯವಿರುವ ಕಡೆ ಪ್ರಚಾರ ಸಭೆಗಳನ್ನು ಹಮ್ಮಿಕೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ.

ಶಿಕ್ಷಕರ ಸಂಘಟನೆಗಳು ಹಾಗೂ ಶಾಲಾ ಆಡಳಿತ ಮಂಡಳಿಗಳ ಸಂಪರ್ಕಕ್ಕೆ ಸೂಚನೆ

ತಾಲೂಕು ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿರುವ ವಿವಿಧ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಹಾಗೂ ಪದವೀಧರರ ಸಂಘಗಳಿಗೆ ಖುದ್ದು ಭೇಟಿ ನೀಡಿ ಎನ್‌ಡಿಎ ಅಭ್ಯರ್ಥಿ ಪರ ಮತಯಾಚಿಸಬೇಕು. ಜತೆಗೆ, ಖಾಸಗಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳನ್ನು ನೇರವಾಗಿ ಸಂಪರ್ಕಿಸಿ ಎ.ಪಿ. ರಂಗನಾಥ್ ಅವರಿಗೆ ಬೆಂಬಲ ಕೋರುವಂತೆ ತಿಳಿಸಲಾಗಿದೆ.

ಚುನಾವಣಾ ಕಣದಲ್ಲಿ ಮಿತ್ರಪಕ್ಷಗಳ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಅಥವಾ ಸಮನ್ವಯತೆಯ ಕೊರತೆ ಉಂಟಾಗದಂತೆ ಎಚ್ಚರವಹಿಸಬೇಕು. ಸ್ಥಳೀಯ ಮಟ್ಟದಲ್ಲಿ ತಲೆದೋರುವ ಸಣ್ಣಪುಟ್ಟ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಿಕೊಳ್ಳಬೇಕು ಹಾಗೂ ತುರ್ತು ಸಂದರ್ಭಗಳಲ್ಲಿ ಪಕ್ಷದ ರಾಜ್ಯ ಕಚೇರಿಯ ಗಮನಕ್ಕೆ ತರಬೇಕು ಎಂದು ಉಸ್ತುವಾರಿ ನಾಯಕರಿಗೆ ಹೆಚ್.ಡಿ. ಕುಮಾರಸ್ವಾಮಿ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು..

news_1790781785_2_188.webp

 

news_1790781784_1_970.webp

 

news_1790781783_0_602.webp

 

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS: ಫುಟ್‌ಪಾತ್‌ನಲ್ಲಿ ಬೈಕ್ ಓಡಿಸಿದರೆ ₹5,000 ದಂಡ: ಸರ್ಕಾರದಿಂದ ಕಠಿಣ ನಿಯಮ ಜಾರಿಗೆ ಸಿದ್ಧತೆಜೋಗ ಜಲಪಾತ ಇನ್ಮುಂದೆ ಸರ್ವಋತು ಪ್ರವಾಸಿ ತಾಣ: ಅಭಿವೃದ್ಧಿ ಕಾಮಗಾರಿ ಚುರುಕುಗೊಳಿಸಿ:ಅಧಿಕಾರಿಗಳಿಗೆ ಸಚಿವ ಕೆ.ಜೆ.ಜಾರ್ಜ್ ನಿರ್ದೇಶನಬೆಂಗಳೂರಲ್ಲಿ ಮಳೆಯಿಂದ ಅನಾಹುತಗಳು ಜರುಗುವ ಮುನ್ನ ಮುಂಜಾಗ್ರತಾ ಕ್ರಮ ವಹಿಸಿ: ಸಚಿವ ಕೃಷ್ಣ ಬೈರೇಗೌಡಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: NDA ಅಭ್ಯರ್ಥಿ ಗೆಲುವಿಗೆ JDS ಉಸ್ತುವಾರಿ ಸಮಿತಿ ರಚನೆಅಮೆರಿಕ ಅಧ್ಯಕ್ಷ ಟ್ರಂಪ್ ಜತೆಗೆ ಪ್ರಧಾನಿ ಮೋದಿ ದೂರವಾಣಿ ಸಂಭಾಷಣೆ: ವ್ಯಾಪಾರ, ರಕ್ಷಣೆ, ಜಾಗತಿಕ ಶಾಂತಿ ಪ್ರಯತ್ನಗಳ ಬಗ್ಗೆ ಮಹತ್ವದ ಚರ್ಚೆನಿಮ್ಮ ಪರ ನಾನಿದ್ದೇನೆ, ಅನ್ಯಾಯವಾಗಲು ಬಿಡಲ್ಲ: ಸಾಗರದಲ್ಲಿ ಶಾಹಿ ಗಾರ್ಮೆಂಟ್ಸ್ ನೌಕರರಿಗೆ ಶಾಸಕ ಬೇಳೂರು ಅಭಯ!ಮೀರತ್ ‘ನೀಲಿ ಡ್ರಮ್’ ಹತ್ಯೆ ಪ್ರಕರಣ: ಪತ್ನಿ, ಪ್ರಿಯಕರ ತಪ್ಪಿತಸ್ಥರೆಂದು ಕೋರ್ಟ್ ತೀರ್ಪುಸಣ್ಣ ಉಳಿತಾಯ ಖಾತೆದಾರರಿಗೆ ಮುಖ್ಯ ಮಾಹಿತಿ: ಸ್ಮಾಲ್ ಸೇವಿಂಗ್ಸ್ ಸ್ಕೀಂ ಬಡ್ಡಿ ದರಗಳಲ್ಲಿ ಯಥಾಸ್ಥಿತಿಸಾಗರದಲ್ಲಿ ಹೊಸ PF ನೀತಿಗೆ ವಿರೋಧಿಸಿ ಶಾಹಿ ಗಾರ್ಮೆಂಟ್ಸ್ ನೌಕರರು ಬೃಹತ್ ಪ್ರತಿಭಟನೆ!ಪಠ್ಯದಷ್ಟೇ ಕ್ರೀಡೆಯೂ ಬದುಕಿಗೆ ಮುಖ್ಯ, ಮಕ್ಕಳಲ್ಲಿ ನಾಯಕತ್ವ ಗುಣ ಬೆಳವಣಿಗೆಗೆ ಸಹಕಾರಿ: ಸಾಗರ ತಹಶೀಲ್ದಾರ್ ಡಾ.ಪ್ರತಿಭಾ ಅಭಿಪ್ರಾಯ