LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

NEET EXAM: ಮುಂದಿನ ವರ್ಷದಿಂದ ಆನ್ ಲೈನ್ ನಲ್ಲಿ ನೀಟ್ ಪರೀಕ್ಷೆ: ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಸಿದ್ಧತೆ ನಡೆಸಲಾಗಿದೆ: ಧರ್ಮೇಂದ್ರ ಪ್ರಧಾನ್ ಮಾಹಿತಿ

ನವದೆಹಲಿ: ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಮುಂದಿನ ವರ್ಷದಿಂದ ಆನ್ ಲೈನ್ ನಲ್ಲಿ ನೀಟ್ ಪರೀಕ್ಷೆ ನಡೆಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಧರ್ಮೇಂದ್ರ ಪ್ರಧಾನ್, ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ ನೀಟ್ ಪರೀಕ್ಷೆ ನಡೆಸಲು ಎಲ್ಲಾ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಪ್ರಶ್ನೆ ಪರೀಕ್ಷೆಯ ಸೋರಿಕೆಯ ಜವಾಬ್ದಾರಿಯನ್ನು ತೆಗೆದುಕೊಂಡು ಪರೀಕ್ಷಾ ಮಾಫಿಯಾ ವಿರುದ್ಧ ಹೋರಾಡುತ್ತೇವೆ ಎಂದು ಹೇಳಿದ್ದಾರೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಇದರ ಜವಾಬ್ದಾರಿ ನಾವು ತೆಗೆದುಕೊಳ್ಳಲು ಸಿದ್ಧರಿದ್ದೇವೆ. ಸಚಿವಾಲಯ ಇದನ್ನು ಸರಿಪಡಿಸಲಿದೆ. ಮೇ 3ರಂದು ನಡೆಸಲಾಗಿದ್ದ ನೀಟ್ ಪರೀಕ್ಷೆಯನ್ನು ಈಗಾಗಲೇ ರದ್ದುಗೊಳಿಸಲಾಗಿದ್ದು, ಜೂನ್ 21ಕ್ಕೆ ಮರುಪರೀಕ್ಷೆ ದಿನಾಂಕ ನಿಗದಿಪಡಿಸಲಾಗಿದೆ. ಮುಂದಿನ ವರ್ಷದಿಂದ ನೀಟ್ ಪರೀಕ್ಷೆಯನ್ನು ಆನ್ ಲೈನ್ ನಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ ವಿಧಾನದಲ್ಲಿ ನಡೆಸಲಾಗುವುದು ಎಂದು ಹೇಳಿದರು.

ನೀಟ್ ಪರೀಕ್ಷೆ ಮೇ 3ರಂದು ನಡೆದ ಬಳಿಕ ಮೇ 7ರಂದು ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ದೂರು ಬಂದಿತ್ತು. ಪರೀಕ್ಷೆಗೂ ಮುನ್ನ ಕೆಲವೆಡೆ ನೀಡಲಾಗಿದ್ದ ಗೆಸ್ ಪೇಪರ್‌ನಲ್ಲಿ ಪರೀಕ್ಷೆಯಲ್ಲಿ ನೀಡಲಾಗಿದ್ದ ಹೆಚ್ಚಿನ ಪ್ರಶ್ನೆಗಳು ಬಂದಿದ್ದವು ಎಂದು ಆರೋಪಿಸಲಾಗಿತ್ತು. ಕೂಡಲೇ ಉನ್ನತ ಶಿಕ್ಷಣ ಸಚಿವಾಲಯ ಈ ಸಂಬಂಧ ವಿಚಾರಣೆ ಆರಂಭಿಸಿ, ತನಿಖೆ ಹಸ್ತಾಂತರಿಸಿ ಬೇರೆ ರಾಜ್ಯಗಳನ್ನು ಸಂಪರ್ಕಿಸಿತ್ತು. ಮೇ 12ರಂದು ಗೆಸ್ ಪೇಪರ್ ಹೆಸರಲ್ಲಿ ಮೂಲ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಖಚಿತವಾಗಿದೆ. ಬಳಿಕ ಮೇ 13ರಂದು ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆವು ಎಂದು ತಿಳಿಸಿದ್ದಾರೆ.

ನೀಟ್ ಪರೀಕ್ಷಾ ಮಾಫಿಯಾ ಬಹಳ ದಿನಗಳಿಂದ ನಡೆಯುತ್ತಿದೆ. ಮಕ್ಕಳು ತಮ್ಮ ಹಕ್ಕುಗಳಿಂದ ವಂಚಿರಾಗಲು ಬಿಡುವುದಿಲ್ಲ. ಇದರ ವಿರುದ್ಧ ಹೋರಾಟ ನಡೆಸುತ್ತೇವೆ. ಇದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿಯೂ ತಪ್ಪು ಮಾಹಿತಿ ಹರಡುತ್ತಿವೆ. ಈ ಸಂಬಂಧ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದು, ವಿಚಾರಣೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಬೇಸಿಗೆಯ ಮಧ್ಯಾಹ್ನದ ಊಟಕ್ಕೆ ಹೇಳಿ ಮಾಡಿಸಿದ ಖಾದ್ಯ: ಮಾವಿನಕಾಯಿ ಚಿತ್ರಾನ್ನದ ಸುಲಭ ರೆಸಿಪಿ ನಿಮಗಾಗಿBREAKING: ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಬಿದ್ದು ದುರಂತ ಪ್ರಕರಣ: ಮಗು ಸೇರಿ ಒಂದೇ ಕುಟುಂಬದ 6 ಜನರು ದಾರುಣ ಸಾವುಪ್ರಯಾಣಿಕರ ಗಮನಕ್ಕೆ: ಭಾನುವಾರ ಈ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯBIG NEWS: ಕುಮಾರಸ್ವಾಮಿ ನಮ್ಮ ಬಗ್ಗೆ ಟೀಕೆ ಮಾಡಲಿಲ್ಲ ಎಂದರೆ ಅವರು ರಾಜಕೀಯವಾಗಿ ಬದುಕಲು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್ಮೆಂತ್ಯದ ಮ್ಯಾಜಿಕ್: ರಾತ್ರಿ ಮಲಗುವ ಮುನ್ನ ಈ ಲೇಪ ಹಚ್ಚಿದರೆ ಮುಖದ ಕಾಂತಿ ಕಂಡು ನೀವೇ ಬೆರಗಾಗ್ತೀರಾ!ಪರಿಸರ ಜಾಗೃತಿಯೊಂದಿಗೆ ಕಲಾ ಸಂಗಮ: 2026ರ ಆಗಸ್ಟ್‌ನಲ್ಲಿ ಲಡಾಖ್‌ನಲ್ಲಿ ವಿಶಿಷ್ಟ ಉತ್ಸವಹೊಸ ಅವತಾರದಲ್ಲಿ ಎನರ್ಜೆಟಿಕ್ ಸ್ಟಾರ್: ನಟ ರಾಮ್ ಪೋತಿನೇನಿ ಈಗ ಸಿನೆಮಾ ನಿರ್ದೇಶಕ!ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ : SC/ST ರೈತರಿಂದ ಅರ್ಜಿ ಆಹ್ವಾನJOB ALERT : ಅಂಚೆ ಇಲಾಖೆಯಿಂದ ಜೀವ ವಿಮೆ ಏಜೆಂಟ್ ಹುದ್ದೆಗೆ ಅರ್ಜಿ ಆಹ್ವಾನBREAKING: ಸೇತುವೆ ಮೇಲಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದು ನಾಲ್ವರು ದುರ್ಮರಣ