LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

NEET UG 2026 OMR ಶೀಟ್ ವಿವಾದ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 6 ವಿದ್ಯಾರ್ಥಿಗಳು

ನವದೆಹಲಿ: NEET UG 2026 ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ತಮ್ಮ OMR ಉತ್ತರ ಪತ್ರಿಕೆಗಳಲ್ಲಿ ವ್ಯತ್ಯಾಸಗಳಿವೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ವಿದ್ಯಾರ್ಥಿಗಳ ಆರೋಪದ ಪ್ರಕಾರ, ಪರೀಕ್ಷೆಯಲ್ಲಿ ತಾವು ಗುರುತಿಸಿದ ಉತ್ತರಗಳು ಮತ್ತು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ OMR ಶೀಟ್‌ಗಳಲ್ಲಿರುವ ಉತ್ತರಗಳು ಒಂದಕ್ಕೊಂದು ಹೊಂದಿಕೆಯಾಗುತ್ತಿಲ್ಲ. ಈ ವಿಚಾರವನ್ನು ಮಂಗಳವಾರ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ಪ್ರಸ್ತಾಪಿಸಲಾಯಿತು.

ಅರ್ಜಿದಾರರ ಪರ ವಕೀಲರು ಪ್ರಕರಣವನ್ನು ತುರ್ತು ವಿಚಾರಣೆಗೆ ಸ್ವೀಕರಿಸುವಂತೆ ಕೋರಿದರು. ಇದಕ್ಕೆ ನ್ಯಾಯಪೀಠ, “ಇದರಲ್ಲಿ ತುರ್ತು ಏನು?” ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ವಕೀಲರು, NEET UG 2026 ಕೌನ್ಸೆಲಿಂಗ್ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಈ ಅರ್ಜಿ ಕೇವಲ ಆರು ವಿದ್ಯಾರ್ಥಿಗಳಿಗೆ ಸಂಬಂಧಿಸಿದೆ ಎಂದು ತಿಳಿಸಿದರು. ಬಳಿಕ ಪ್ರಕರಣವನ್ನು ವಿಚಾರಣಾ ಪಟ್ಟಿಗೆ ಸೇರಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿತು.

‘ನಾವು ಗುರುತಿಸಿದ ಉತ್ತರಗಳನ್ನು ಬದಲಿಸಲಾಗಿದೆ’ ಎಂಬ ಆರೋಪ

ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಯಲ್ಲಿ, ಪರೀಕ್ಷೆಯ ವೇಳೆ ತಾವು ಗುರುತಿಸಿದ ಉತ್ತರಗಳು ಮತ್ತು NTA ಬಿಡುಗಡೆ ಮಾಡಿದ OMR ಪ್ರತಿಗಳಲ್ಲಿರುವ ಉತ್ತರಗಳು ವಿಭಿನ್ನವಾಗಿವೆ ಎಂದು ಆರೋಪಿಸಲಾಗಿದೆ. ಈ ವ್ಯತ್ಯಾಸದಿಂದ ತಮ್ಮ ಅಂಕಗಳು ಹಾಗೂ ರ್ಯಾಂಕ್ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ಅವರು ವಾದಿಸಿದ್ದಾರೆ.ಅರ್ಜಿದಾರರ ಪರ ವಕೀಲರ ಮಾಹಿತಿ ಪ್ರಕಾರ, ಈ ಪ್ರಕರಣದಲ್ಲಿರುವ ಆರು ವಿದ್ಯಾರ್ಥಿಗಳು NEET UG 2026ರಲ್ಲಿ 600 ರಿಂದ 650ಕ್ಕೂ ಹೆಚ್ಚು ಅಂಕಗಳನ್ನು ಪಡೆದಿದ್ದಾರೆ. OMR ಶೀಟ್‌ಗಳಲ್ಲಿನ ವ್ಯತ್ಯಾಸದಿಂದ ತಮ್ಮಗೆ ಅನ್ಯಾಯವಾಗಿದೆ ಎಂದು ಅವರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಕೌನ್ಸೆಲಿಂಗ್‌ಗೆ ಮುನ್ನವೇ ವಿಚಾರಣೆಗೆ ಮನವಿ

ದೇಶಾದ್ಯಂತ NEET UG 2026 ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ವೈದ್ಯಕೀಯ ಪ್ರವೇಶ ಪ್ರಕ್ರಿಯೆ ಮೇಲೆ ಪರಿಣಾಮ ಬೀರುವ ಮೊದಲು ಈ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸುವಂತೆ ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಈ ಪ್ರಕರಣದ ವಿಚಾರಣೆ ಶೀಘ್ರದಲ್ಲೇ ನಡೆಯುವ ಸಾಧ್ಯತೆಯಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ