LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್‌ನವರು ನಮ್ಮ ಬೆನ್ನಿಗೆ ಚೂರಿ ಹಾಕಿಬಿಟ್ರು: ಟಿವಿಕೆ ಬೆಂಬಲಕ್ಕೆ ನಿಂತ ಕಾಂಗ್ರೆಸ್ ಜಾಡಿಸಿದ ಡಿಎಂಕೆ; ವಿಡಿಯೊ

ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಸದ್ಯ ಎಲ್ಲರ ಚಿತ್ತ ಸರ್ಕಾರ ರಚನೆಯತ್ತ ನೆಟ್ಟಿದೆ. 108 ಸೀಟುಗಳನ್ನು ಪಡೆದಿರುವ ಟಿವಿಕೆಗೆ ಸರ್ಕಾರ ರಚಿಸಲು ಇನ್ನೂ 10 ಶಾಸಕರ ಅಗತ್ಯವಿದ್ದು, ಕಾಂಗ್ರೆಸ್ ಜತೆ ಹಾಗೂ ಇತರೆ ಸಣ್ಣ ಪಕ್ಷಗಳ ಬೆಂಬಲ ಪಡೆದುಕೊಳ್ಳುವ ಸಾಧ್ಯತೆ ಇದೆ.

ಚುನಾವಣೆಗೂ ಮುನ್ನ ಮಾಡಿದ ಭಾಷಣದಲ್ಲಿ ಡಿಎಂಕೆ ತನ್ನ ರಾಜಕೀಯ ಶತ್ರು ಹಾಗೂ ಬಿಜೆಪಿ ತನ್ನ ಸಿದ್ಧಾಂತದ ಶತ್ರು ಎಂದು ಹೇಳಿದ್ದ ವಿಜಯ್ ಎನ್‌ಡಿಎ ಬೆಂಬಲಿತ ಎಐಎಡಿಎಂಕೆ ಜತೆ ಕೈ ಜೋಡಿಸುವುದಿಲ್ಲ ಎಂದೇ ಹೇಳಬಹುದು.

ಹೀಗಾಗಿ ಕಾಂಗ್ರೆಸ್ ಟಿವಿಕೆಗೆ ಬೆಂಬಲ ನೀಡುವುದು ಬಹುತೇಕ ಖಚಿತವಾಗಿದೆ. ಇನ್ನು ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್ ಸಹ ತಮಿಳುನಾಡಿನಿಂದ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಅನ್ನು ದೂರ ಇಡುವ ಕಾರಣದಿಂದಾಗಿ ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡುವ ಸಾಧ್ಯತೆ ಇದೆ ಎಂದಿದ್ದಾರೆ.

ಈ ಎಲ್ಲ ಬೆಳವಣಿಗೆಗಳ ಕುರಿತು ಡಿಎಂಕೆ ವಕ್ತಾರ ಸರವಣನ್ ಅಣ್ಣಾದುರೈ ಮಾತನಾಡಿದ್ದು, ‘ಮೇ 7ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ವಿಜಯ್ ಅವರಿಗೆ ಕೃತಜ್ಞತೆಗಳು. ಕಾಂಗ್ರೆಸ್ ಟಿವಿಕೆಗೆ ಬೆಂಬಲ ಸೂಚಿಸುವುದಾಗಿ ಹೇಳಿಕೊಂಡಿದೆ. ಇದನ್ನು ಬೆನ್ನಿಗೆ ಚೂರಿ ಹಾಕುವುದು ಎನ್ನುತ್ತಾರೆ. ಕಾಂಗ್ರೆಸ್ ತನ್ನ ನಿಲುವನ್ನು ಬದಲಿಸಿ ಬೆನ್ನಿಗೆ ಚೂರಿ ಹಾಕಿ ಟಿವಿಕೆ ಬೆಂಬಲಿಸಲು ಮುಂದಾಗಿದೆ. ಇದಕ್ಕೆ ಕಾರಣವನ್ನು ನೀಡುತ್ತಿರುವ ಕಾಂಗ್ರೆಸ್ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ಗಳನ್ನು ರಾಜ್ಯದೊಳಗೆ ಬಿಟ್ಟುಕೊಳ್ಳದಿರುವುದು ಎಂದು ಹೇಳುತ್ತಿದೆ. ನಾವು ಈ ಕೆಲಸವನ್ನು ದಶಕಗಳಿಂದ ಮಾಡುತ್ತಾ ಬಂದಿದ್ದೇವೆ ನಮ್ಮ ಹತ್ತಿರ ಇದನ್ನು ಹೇಳಬೇಡಿ. ಈ ರೀತಿ ನಿರ್ಧಾರ ಬದಲಿಸಿದರೆ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡಿರುವ ದೇಶದ ಇತರೆ ಪಕ್ಷಗಳಲ್ಲಿ ಇವರ ಬಗ್ಗೆ ಯಾವ ಅಭಿಪ್ರಾಯ ಮೂಡಬಹುದು’ ಎಂದು ಕಿಡಿಕಾರಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ