LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಂಜು ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ: ಕೊಹ್ಲಿ, ರಾಹುಲ್ ಸಾಲಿಗೆ ಸೇರಿದ ಸಿಎಸ್‌ಕೆ ಸ್ಟಾರ್ ಆಟಗಾರ!

ದೆಹಲಿ: ಸಿಎಸ್‌ಕೆ ತಂಡದ ಸ್ಟಾರ್ ಬ್ಯಾಟರ್ ಸಂಜು ಸ್ಯಾಮ್ಸನ್ ಐಪಿಎಲ್‌ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಮಂಗಳವಾರ ರಾತ್ರಿ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಅಜೇಯ 87 ರನ್ ಸಿಡಿಸಿದ ಸ್ಯಾಮ್ಸನ್, ಒಂದೇ ಸೀಸನ್‌ನಲ್ಲಿ ನಿರ್ದಿಷ್ಟ ತಂಡವೊಂದರ ವಿರುದ್ಧ ಲೀಗ್ ಹಂತದಲ್ಲಿ 200 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ಮೂರನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ಸೀಸನ್‌ನ ಆರಂಭಿಕ ಮೂರು ಪಂದ್ಯಗಳಲ್ಲಿ ಕೇವಲ 22 ರನ್ ಗಳಿಸಿ ನಿರಾಸೆ ಮೂಡಿಸಿದ್ದ ಸ್ಯಾಮ್ಸನ್, ನಂತರ ಅದ್ಭುತವಾಗಿ ಪುಟಿದೇಳುವ ಮೂಲಕ ಏಳು ಇನ್ನಿಂಗ್ಸ್‌ಗಳಲ್ಲಿ ಎರಡು ಶತಕ ಮತ್ತು ಒಂದು ಅರ್ಧಶತಕ ಸಿಡಿಸಿದ್ದಾರೆ. ವಿಶೇಷವೆಂದರೆ ದೆಹಲಿ ವಿರುದ್ಧದ ಮೊದಲ ಪಂದ್ಯದಲ್ಲಿ ಅಜೇಯ 115 ರನ್ ಗಳಿಸಿದ್ದ ಅವರು, ಎರಡನೇ ಪಂದ್ಯದಲ್ಲಿ ಅಜೇಯ 87 ರನ್ ಚಚ್ಚಿದ್ದಾರೆ. ಆ ಮೂಲಕ ದೆಹಲಿ ವಿರುದ್ಧ ಈ ಸೀಸನ್‌ನಲ್ಲಿ ಒಟ್ಟು 202 ರನ್ ಕಲೆಹಾಕಿದ್ದಾರೆ.

ಈ ಸಾಧನೆ ಮಾಡಿದ ಇತರ ದಿಗ್ಗಜರು:

  1. ವಿರಾಟ್ ಕೊಹ್ಲಿ: 2016ರ ಸೀಸನ್‌ನಲ್ಲಿ ಗುಜರಾತ್ ಲಯನ್ಸ್ ವಿರುದ್ಧ ಲೀಗ್ ಹಂತದಲ್ಲಿ ಎರಡು ಶತಕಗಳನ್ನು (100* ಮತ್ತು 109) ಸಿಡಿಸುವ ಮೂಲಕ ಒಟ್ಟು 209 ರನ್ ಗಳಿಸಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎನಿಸಿಕೊಂಡಿದ್ದರು.
  2. ಕೆಎಲ್ ರಾಹುಲ್: 2022ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಆಡುತ್ತಾ ಮುಂಬೈ ಇಂಡಿಯನ್ಸ್ ವಿರುದ್ಧ ಎರಡು ಅಜೇಯ ಶತಕಗಳನ್ನು (103* ಮತ್ತು 103*) ಬಾರಿಸಿ 206 ರನ್ ಕಲೆಹಾಕಿದ್ದರು.

ಸದ್ಯ ಸಿಎಸ್‌ಕೆ ಪ್ಲೇ ಆಫ್ ಹಾದಿಯಲ್ಲಿರುವಾಗ ಸಂಜು ಸ್ಯಾಮ್ಸನ್ ಅವರ ಈ ಭರ್ಜರಿ ಫಾರ್ಮ್ ತಂಡಕ್ಕೆ ಆನೆಬಲ ತಂದಿದೆ. ಕೇವಲ ವೈಯಕ್ತಿಕ ದಾಖಲೆ ಮಾತ್ರವಲ್ಲದೆ ತಂಡದ ಗೆಲುವಿನಲ್ಲೂ ಸ್ಯಾಮ್ಸನ್ ಪ್ರಮುಖ ಪಾತ್ರ ವಹಿಸುತ್ತಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ