LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕರಿಗೆ ಟಿಕೆಟ್ ವಿತರಣೆಗೂ ಐಪಿಎಲ್ ಫೈನಲ್ ಪಂದ್ಯ ಸ್ಥಳಾಂತರಕ್ಕೂ ಯಾವುದೇ ಸಂಬಂಧವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಅಹಮದಾಬಾದ್ ನಲ್ಲಿ ದೊಡ್ಡ ಕ್ರೀಡಾಂಗಣವಿದೆ, ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ ಎಂದು‌ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಶಾಸಕರಿಗೆ ಐಪಿಎಲ್ ಟಿಕೆಟ್ ಬೇಡಿಕೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯವನ್ನು ಅಹಮದಾಬಾದಿಗೆ ಸ್ಥಳಾಂತರಿಸಲಾಗಿದೆ ಎಂಬ ಹೇಳಿಕೆಗಳ ಬಗ್ಗೆ ಬೇರೆ ಕಡೆ ಶಾಸಕರಿಗೆ ಶೇ 50 ರಷ್ಟು ಮೀಸಲಿರುತ್ತದೆ ಎಂದರು‌.

ಬಿಸಿಸಿಐ ಟಿಕೆಟ್ ವಿಚಾರಕ್ಕೆ ಸ್ಥಳಾಂತರ ನಿರ್ಧಾರ ಮಾಡಿದ್ದೇವೆ ಎಂದಿರುವ ಬಗ್ಗೆ ಅವರು ಈ ರೀತಿ ಹೇಳಿಕೆ ನೀಡಲಿ, ನಾನು ಅದಕ್ಕೆ ಸರಿಯಾದ ಉತ್ತರ ಕೊಡುತ್ತೇನೆ ಎಂದರು.

ಇನ್ನು ದಾವಣಗೆರೆಯಲ್ಲಿ ಮುಸ್ಲಿಂ ನಾಯಕರ ಅಮಾನತನ್ನು ವಾಪಸ್ ಪಡೆಯುವ ವಿಚಾರವಾಗಿ ನಾನು ಈ ಬಗ್ಗೆ ಏನೂ ಮಾತನಾಡುವುದಿಲ್ಲ. ಪಕ್ಷ ಈ ತೀರ್ಮಾನ ಮಾಡಿದೆ‌. ಸಿಎಂ ರಾಜಕೀಯ ಕಾರ್ಯದರ್ಶಿಯವರನ್ನು ಕೈಬಿಡಬೇಕಾದರೆ, ಆ ಬಗ್ಗೆ ಮುಖ್ಯಮಂತ್ರಿಯವರು ಮಾತನಾಡಿದ್ದರು. ಮುಖ್ಯಮಂತ್ರಿಗಳಿಗೆ ತಮ್ಮದೇ ಆದ ಮಾಹಿತಿ ಇರುತ್ತದೆ. ಪಕ್ಷದ ಪದಾಧಿಕಾರಿಗಳು ಮಾರ್ಗದರ್ಶನ ಮಾಡಿದ್ದಾರೆ. ಪಕ್ಷ ಅವರಿಗೆ ಕೆಲವು ಜವಾಬ್ದಾರಿಗಳನ್ನು ನೀಡಿತ್ತು. ಅದನ್ನು ಅವರು ಸರಿಯಾಗಿ ನಿಭಾಯಿಸಲಿಲ್ಲ ಅದಕ್ಕೆ ಅವರನ್ನು ಆ ಸ್ಥಾನದಿಂದ ಇಳಿಸಲಾಯಿತು. ಜಬ್ಬಾರ್ ಅವರು ತಾವಾಗಿಯೇ ರಾಜೀನಾಮೆ ನೀಡಿದ್ದರು. ಅದನ್ನು ಸ್ವೀಕಾರ ಮಾಡಿದ್ದೇವೆ ಅಷ್ಟೇ ಎಂದರು.

ದೆಹಲಿ ಭೇಟಿ ವಿಚಾರವಾಗಿ ಹೈಕಮಾಂಡ್ ಕರೆದಾಗ ನಾವು ಹೋಗುತ್ತೇವೆ. ಕರೆಯದೇ ಹೋಗುವುದು ಸರಿಯಲ್ಲ. ಕರೆಯುತ್ತಾರೆ, ಕರೆದಾಗ ನಾವು ಹೋಗುತ್ತೇವೆ ಎಂದರು.

ತಮಿಳುನಾಡಿನಲ್ಲಿ ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿರುವ ಬಗ್ಗೆ, ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು. ಜಾತ್ಯಾತೀತ ಶಕ್ತಿಗಳು ಒಂದಾಗಿ ಇರಬೇಕು ಎಂದು ಈ ತೀರ್ಮಾನ ಮಾಡಲಾಗಿದೆ. ಎಐಡಿಎಂಕೆ, ಬಿಜೆಪಿಯವರು ಎಷ್ಟೇ ಒತ್ತಡ ಹಾಕಿದರು ಟಿವಿಕೆಯವರು ಮೈತ್ರಿ ಮಾಡಿಕೊಳ್ಳಲಿಲ್ಲ. ಜಾತ್ಯಾತೀತ ಶಕ್ತಿ ಉಳಿಯಲು, ತಮಿಳುನಾಡಿನ ಹಿತಕ್ಕಾಗಿ ನಮ್ಮ ಪಕ್ಷ ತೀರ್ಮಾನ ಮಾಡಿದೆ ಎಂದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ