LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭೋವಿ ನಿಗಮ ಸೇರಿದಂತೆ ವಿವಿಧ ಸಮುದಾಯ ಅಭಿವೃದ್ಧಿ ನಿಗಮಗಳ ಸಾಲ ಮನ್ನಾ: ಸಿಎಂ ಸಿದ್ಧರಾಮಯ್ಯ

ಮೈಸೂರು: ಸಿದ್ದರಾಮೇಶ್ವರರೂ ಸೇರಿದಂತೆ ಸಂತ ಮಹಾಶಯರು, ಸಮಾಜದಲ್ಲಿ ಜಾತಿವರ್ಗಗಳ ವ್ಯವಸ್ಥೆ ತೊಲಗಬೇಕು ಎಂದು ಬಯಸಿದ್ದರು. ರಾಜ್ಯದಲ್ಲಿ ಸಮ ಸಮಾಜ ನಿರ್ಮಿಸುವ ಸಂಕಲ್ಪವನ್ನು ನಮ್ಮ ಸರ್ಕಾರ ಹೊಂದಿದೆ. ಉತ್ಪಾದಿಸಿದ ಸಂಪತ್ತು ಸಮಾನವಾಗಿ ಹಂಚಿಕೆಯಾಗಿಬೇಕು. ರಾಜ್ಯದ ಸರ್ವರಿಗೂ ಸಮಪಾಲು, ಸಮಬಾಳು ಸಿಗಬೇಕೆಂಬುದೇ ಸರ್ಕಾರದ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಿದ್ದ ಸಿದ್ದರಾಮೇಶ್ವರ ಜಯಂತಿಯನ್ನು ಉದ್ಘಾಟಿಸಿ, ಹಿರಿಯ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರಿಗೆ 2025-26ನೇ ಸಾಲಿನ “ಕಾಯಕಯೋಗಿ ಸಿದ್ದರಾಮೇಶ್ವರ ‌ಪ್ರಶಸ್ತಿ‌” ನೀಡಿ ಗೌರವಿಸಿ, ಬಳಿಕ ಸಿದ್ದರಾಮೇಶ್ವರರ ಕುರಿತು ಬರೆದಿರುವ ‘ಸಿದ್ದರಾಮ ಬೆಳ್ಳಿ ಕಿರಣ’ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಬಸವಾದಿ ಶರಣರು 12 ನೇ ಶತಮಾನದಲ್ಲಿ ಸಮಾನತೆಯ ಸಿದ್ಧಾಂತವನ್ನು ಬೋಧಿಸಿದ್ದರು. ಶೋಷಣೆಗೊಳಗಾದ ಹಾಗೂ ಅವಕಾಶವಂಚಿತ ಸಮುದಾಯಗಳು ಸಂಘಟಿತರಾಗುವ ಸಮ್ಮೇಳನಗಳು ಉತ್ತಮ ಕಾರ್ಯಗಳಾಗಿವೆ. 2013 ಮೇ 13ರ ಬಸವ ಜಯಂತಿಯಂದು ನಾನು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದೆ. ಬಸವಣ್ಣನವರು ಬೋಧಿಸಿದಂತೆ ನಾನು ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿರಿಸಿದ್ದೇನೆ. ರಾಜಕೀಯ ಸ್ವಾತಂತ್ರ್ಯವು, ಆರ್ಥಿಕ ಹಾಗೂ ಸಾಮಾಜಿಕ ಸ್ವಾತಂತ್ರ್ಯದ ತಳಹದಿಯ ಮೇಲೆ ನಿಂತಿದೆ. ಶಿಕ್ಷಣ ಪಡೆದಾಗ ಮಾತ್ರ ಸಾಮಾಜಿಕ ಆರ್ಥಿಕ ಶಕ್ತಿ ದೊರಕಲು ಸಾಧ್ಯ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರ ಭೋವಿ ನಿಗಮವೂ ಸೇರಿದಂತೆ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳ ಸಾಲವನ್ನು ಮನ್ನಾ ಮಾಡಿದೆ. ಪರಿಶಿಷ್ಟ ಜಾತಿಯ ಸಮುದಾಯಗಳಲ್ಲಿನ ಅಸಮಾನತೆ ಹೋಗಲಾಡಿಸಲು ಐತಿಹಾಸಿಕ ಒಳ ಮೀಸಲಾತಿಯನ್ನು ಜಾರಿಗೊಳಿಸಿದೆ. ಎಡಗೈಗೆ 5.25%, ಬಲಗೈಗೆ 5.25%, ಹಾಗೂ ಇತರ ಉಪಜಾತಿಗಳಿಗೆ 4.5% ಹಂಚಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಭೋವಿ ಸಮುದಾಯದವರು ಇಟ್ಟಿರುವ ಬೇಡಿಕೆಗಳ ಬಗ್ಗೆ ಸೂಕ್ತ ನಿರ್ಣಯ ಕೈಗೊಳ್ಳುತ್ತೇವೆ. ಸಮುದಾಯದವರಿಗೆ  ಕುಲಪತಿ, ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವ ಬಗ್ಗೆ ಪರಿಶೀಲಿಸಲಾಗುವುದು. ಏಳು ಕೋಟಿ ಜನರಿಗೂ ನ್ಯಾಯ ಸಿಗಬೇಕು ಹಾಗೂ ಯಾರೂ ಅವಕಾಶಗಳಿಂದ ವಂಚಿತರಾಗಬಾರದು. ಸಂವಿಧಾನ ರಚನೆಯಾದ ನಂತರ ಸಮಾನತೆಯನ್ನು ಸಾಧಿಸುವತ್ತ ದೇಶ ಸಾಗಿದ್ದು, ಸಂವಿಧಾನ ಹೇಳುವಂತೆಯೇ ನಡೆದುಕೊಳ್ಳುತ್ತೇವೆ ಎಂದರು.

ಎಲ್ಲಾ ಜಾತಿಗಳನ್ನು ಪ್ರೀತಿಸಿ, ಅವರೂ ನಮ್ಮನ್ನು ಪ್ರೀತಿಸುವಂತೆ ಮಾಡಬೇಕು ಹಾಗೂ ಸಹಿಷ್ಣುತೆಯನ್ನು ರೂಢಿಸಿಕೊಳ್ಳಬೇಕು. ಉತ್ಪಾದನೆಯಲ್ಲಿ ಎಲ್ಲರೂ ಭಾಗವಹಿಸಿ, ಉತ್ಪನ್ನವನ್ನು ಸಮಾನವಾಗಿ ಹಂಚಿಕೊಳ್ಳಬೇಕು ಎಂದು ಸಿದ್ಧರಾಮೇಶ್ವರರು ಬೋಧಿಸಿದ್ದರು. ಅವರು ನಡೆದ ಹಾದಿಯಲ್ಲಿಯೇ ನಮ್ಮ ಸರ್ಕಾರವೂ ನಡೆಯುತ್ತಿದೆ ಎಂದು ಸಿಎಂ ಹೇಳಿದ್ದಾರೆ.

ಬೋವಿ ಗುರುಪೀಠದ ಶ್ರೀ ಸಿದ್ಧರಾಮೇಶ್ವರ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್.ಎಸ್.ತಂಗಡಗಿ, ಪಶುಸಂಗೋಪನೆ ಸಚಿವ ವೆಂಕಟೇಶ್,  ಶಾಸಕರಾದ ಹರೀಶ್ ಗೌಡ, ಅನಿಲ್ ಚಿಕ್ಕಮಾದು, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಡಾ.ತಿಮ್ಮಯ್ಯ, ಬೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎನ್.ರಂಗಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಜೆ.ಮಂಜುನಾಥ್, ನಿರ್ದೇಶಕ ಮಂಜುನಾಥ್ ಸ್ವಾಮಿ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಹಾಗೂ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಬಂಗಾಳದಲ್ಲಿ ಹೊಸದಾಗಿ ಆಯ್ಕೆಯಾದ ಶೇ.65 ರಷ್ಟು ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್: ಶೇ.61 ರಷ್ಟು ಮಂದಿ ‘ಕೋಟ್ಯಾಧಿಪತಿಗಳು’SHOCKING: ರೈಲಿನಲ್ಲಿ ಸೀಟಿಗಾಗಿ ಗಲಾಟೆ ವೇಳೆ ಇಬ್ಬರಿಗೆ ಚಾಕು ಇರಿತFact Check: ಚುನಾವಣೆ ಗೆದ್ದ ಸಂಭ್ರಮದಲ್ಲಿ ಕಂಠಪೂರ್ತಿ ಕುಡಿದು ಬಿಯರ್ ಹಿಡಿದು ಡಾನ್ಸ್ ಮಾಡಿದ ಟಿವಿಕೆ ಅಭ್ಯರ್ಥಿ; ವಿಡಿಯೊವಿಜಯ್ ಪ್ರಮಾಣ ವಚನಕ್ಕೆ ಸಜ್ಜಾಗುತ್ತಿದ್ದಂತೆ ಅಚ್ಚರಿ ಬೆಳವಣಿಗೆ: ಬದ್ದವೈರಿಗಳಾದ ಡಿಎಂಕೆ -ಎಐಡಿಎಂಕೆ ಸರ್ಕಾರ ರಚನೆಗೆ ರಹಸ್ಯ ಮಾತುಕತೆವನ್ಯಜೀವಿ ಕುರಿತಾದ ಸಂಶೋಧನೆಗೆ ಐಪಿಎಸ್ ಅಧಿಕಾರಿ ಡಾ. ಹರ್ಷಗೆ ಕುವೆಂಪು ವಿವಿಯಿಂದ ಪಿ.ಎಚ್.ಡಿ. ಪದವಿ ಪ್ರದಾನಚಿಪ್ಪು ಹಂದಿಯ ಚಿಪ್ಪುಗಳ ಮಾರಾಟಕ್ಕೆ ಯತ್ನ: ಮೂವರು ಅರೆಸ್ಟ್ಭೋವಿ ನಿಗಮ ಸೇರಿದಂತೆ ವಿವಿಧ ಸಮುದಾಯ ಅಭಿವೃದ್ಧಿ ನಿಗಮಗಳ ಸಾಲ ಮನ್ನಾ: ಸಿಎಂ ಸಿದ್ಧರಾಮಯ್ಯBREAKING: 75 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಪಂ ನೌಕರರುBSNL ಗ್ರಾಹಕರಿಗೆ ಗುಡ್ ನ್ಯೂಸ್: ಕೇವಲ 1 ರೂ.ಗೆ 2GB ದೈನಂದಿನ ಡೇಟಾ, ಅನಿಯಮಿತ ಧ್ವನಿ ಕರೆ ಸೇರಿ ಹಲವು ಸೌಲಭ್ಯವಿಜಯಪುರದಲ್ಲಿ ಬೆಚ್ಚಿಬೀಳಿಸುವ ಘಟನೆ: 3 ವರ್ಷದ ಕಂದಮ್ಮನನ್ನು ಕಚ್ಚಿ ಎಳೆದೊಯ್ದ ಬೀದಿ ನಾಯಿ, ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ