LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿಪ್ಪು ಹಂದಿಯ ಚಿಪ್ಪುಗಳ ಮಾರಾಟಕ್ಕೆ ಯತ್ನ: ಮೂವರು ಅರೆಸ್ಟ್

ಚಿಪ್ಪು ಹಂದಿಯ ಚಿಪ್ಪುಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಮಂಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.

ಮಾಹಿತಿ ಆಧರಿಸಿ ಮೇ 5 ರಂದು ಮಂಗಳೂರು ಕದ್ರಿ ಉದ್ಯಾನವನದ ಬಳಿಯಲ್ಲಿ ಮಾರುತಿ ಸ್ವಿಪ್ಟ್ ಕಾರ್ ನಲ್ಲಿ ಚಿಪ್ಪುಗಳನ್ನು ಸಾಗಿಸುತ್ತಿದ್ದಾಗ ದಾಳಿ ನಡೆಸಲಾಗಿದೆ. ಬೆಂಗಳೂರು ದಕ್ಷಿಣದ ಹೆಚ್.ಆರ್. ಜಗದೀಶ್, ಕನಕಪುರದ ಸಿದ್ದುನಾಯ್ಕ ಹಾಗೂ ಬೆಂಗಳೂರು ಬನಶಂಕರಿ 2ನೇ ಹಂತದ ಬಾಬು ಟಿಪ್ಪು ಸಾಬ್ ಇವರು ಮಾರಾಟ ಮಾಡಲು ಕಾರ್ ನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ 5.200 ಕಿ.ಗ್ರಾಂ ಚಿಪ್ಪು ಹಂದಿಯ ಚಿಪ್ಪುಗಳನ್ನು ಮತ್ತು ಸ್ವಿಫ್ಟ್ ಕಾರ್‌ ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬೆಂಗಳೂರು ಸಿ.ಐ.ಡಿ. ಅರಣ್ಯ ಘಟಕದ ಪೊಲೀಸ್ ಮಹಾನಿರೀಕ್ಷಕರು, ಮಡಿಕೇರಿ ಸಿ.ಐ.ಡಿ. ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಪವನ್ ನೆಜ್ಜೂರು ಇವರುಗಳ ಮಾರ್ಗದರ್ಶನಲ್ಲಿ ಮಂಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್ ಉಪನಿರೀಕ್ಷಕ ದಿಲೀಪ್ ಜಿ.ಆರ್. ಮತ್ತು ಸಿಬ್ಬಂದಿಗಳಾದ ತಾರನಾಥ ಎಸ್. ಹಾಗೂ ಅಬ್ದುಲ್ ರವೂಫ್ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

 ಅರಣ್ಯ ಕಾಯ್ದೆ ಮತ್ತು ವನ್ಯಜೀವಿಗಳ ಸಂರಕ್ಷಣಾ ಕಾಯ್ದೆಗೆ ಸಂಬಂಧಪಟ್ಟ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಮಡಿಕೇರಿ ಸಿಐಡಿ ಅರಣ್ಯ ಘಟಕ ಪೊಲೀಸ್ ಅಧೀಕ್ಷಕರ ಕಚೇರಿ ದೂ.ಸಂ.: 9480800220 ಹಾಗೂ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ಸಾಗರ ಕಚೇರಿ ದೂ.ಸಂ.: 9480803394ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಸಾಗರ ಸಿ.ಐ.ಡಿ. ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ