LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವನ್ಯಜೀವಿ ಕುರಿತಾದ ಸಂಶೋಧನೆಗೆ ಐಪಿಎಸ್ ಅಧಿಕಾರಿ ಡಾ. ಹರ್ಷಗೆ ಕುವೆಂಪು ವಿವಿಯಿಂದ ಪಿ.ಎಚ್.ಡಿ. ಪದವಿ ಪ್ರದಾನ

ಶಿವಮೊಗ್ಗ: ವನ್ಯಜೀವಿ ಮತ್ತು ನಿರ್ವಹಣೆ ಬಗ್ಗೆ ವಿಶೇಷ ಆಸಕ್ತಿ ಹೊಂದಿರುವ ದಕ್ಷ ಐಪಿಎಸ್ ಅಧಿಕಾರಿ ಹಾಗೂ ಮೂಲತಃ ವೈದ್ಯರಾಗಿರುವ ಡಾ. ಹರ್ಷ ಅವರು ಮಂಡಿಸಿದ ಸಂಶೋಧನಾ ಪ್ರಬಂಧವನ್ನು ಪುರಸ್ಕರಿಸಿ ಕುವೆಂಪು ವಿಶ್ವವಿದ್ಯಾಲಯವು ಬುಧವಾರದಂದು ನಡೆದ 35 ನೇ ಘಟಿಕೋತ್ಸವದಲ್ಲಿ ಪಿ.ಎಚ್.ಡಿ. ಪದವಿಯನ್ನು ಪ್ರದಾನ ಮಾಡಿದೆ.

ಡಾ. ಹರ್ಷ ಅವರು, “ನಾಗರಹೊಳೆ, ಬಂಡೀಪುರ ಮತ್ತು ಬಿಆರ್‌ಟಿ (ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯ) ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಹುಲಿಗಳ ಜನಸಂಖ್ಯೆಯ ಸ್ಥಿರತೆಯ ಕುರಿತು ಒಂದು ಅಧ್ಯಯನ, ಮಾನವ-ಹುಲಿ ಸಂಘರ್ಷಕ್ಕೆ ವಿಶೇಷ ಉಲ್ಲೇಖದೊಂದಿಗೆ” ಎಂಬ ವಿಷಯದ ಕುರಿತು ಸುದೀರ್ಘ ಅಧ್ಯಯನ ನಡೆಸಿದ್ದರು.

ಸಂಶೋಧನೆಯಲ್ಲಿ ಕರ್ನಾಟಕದ ಪ್ರಮುಖ ಹುಲಿ ಸಂರಕ್ಷಿತ ಪ್ರದೇಶಗಳಾದ ನಾಗರಹೊಳೆ ಮತ್ತು ಬಂಡೀಪುರಗಳಲ್ಲಿ ಹುಲಿಗಳ ಸಂಖ್ಯೆ ಹಾಗೂ ಅವುಗಳ ನೈಸರ್ಗಿಕ ವಾಸಸ್ಥಾನದ ಸಮತೋಲನದ ಬಗ್ಗೆ ವೈಜ್ಞಾನಿಕ ವಿಶ್ಲೇಷಣೆ ನಡೆಸಲಾಗಿದೆ.

ಅರಣ್ಯ ಅಂಚಿನ ಗ್ರಾಮಗಳಲ್ಲಿ ಎದುರಾಗುತ್ತಿರುವ ಮಾನವ ಮತ್ತು ಹುಲಿಗಳ ನಡುವಿನ ಸಂಘರ್ಷಕ್ಕೆ ಕಾರಣಗಳು ಹಾಗೂ ಅದನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅವರು ಪ್ರಬಂಧದಲ್ಲಿ ಮಹತ್ವದ ಅಂಶಗಳನ್ನು ಉಲ್ಲೇಖಿಸಿದ್ದಾರೆ.

ಕುವೆಂಪು ವಿಶ್ವವಿದ್ಯಾನಿಲಯದ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗದ ಪ್ರಾಧ್ಯಾಪಕ ಡಾ. ವಿಜಯ ಕುಮಾರ್ ಅವರ ಮಾರ್ಗದರ್ಶನದಲ್ಲಿ ಡಾ. ಹರ್ಷ ಪಿ.ಎಸ್. ಅವರು ಐದು ವರ್ಷಗಳ ಕಾಲ ಕ್ಷೇತ್ರ ಆಧಾರಿತ ಅಧ್ಯಯನವನ್ನು ನಡೆಸಿದ್ದಾರೆ. ಪ್ರಸ್ತುತ ಡಾ.ಪಿ.ಎಸ್.ಹರ್ಷರವರು ಬಳ್ಳಾರಿ ವಲಯದ ಐಜಿಪಿ ಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್, ಸಚಿವ ಡಾ.ಎಂ.ಸಿ. ಸುಧಾಕರ್, ಕುವೆಂಪು ವಿವಿ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಮೊದಲಾದವರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ