LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಸ್ತೆ ದಾಟುವಾಗ ಬೈಕ್ ಡಿಕ್ಕಿಯಾಗಿ ಚಿರತೆ ಸಾವು

ಶಿವಮೊಗ್ಗ: ಕಾಡಿನಿಂದ ವೇಗವಾಗಿ ಬರುತ್ತಿದ್ದ ಚಿರತೆ ಬೈಕ್ ಡಿಕ್ಕಿಯಾಗಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 169 ರ 15ನೇ ಮೈಲಿಕಲ್ಲು ಬಳಿ ಶುಕ್ರವಾರ ಮಧ್ಯಾಹ್ನ ಬೈಕ್ ಡಿಕ್ಕಿ ಹೊಡೆದು ಹೆಣ್ಣು ಚಿರತೆ ಮೃತಪಟ್ಟಿದೆ. ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂದಾಜು ನಾಲ್ಕು ವರ್ಷದ ಚಿರತೆ ಕಾಡಿನಿಂದ ವೇಗವಾಗಿ ರಸ್ತೆ ದಾಟುವ ಪ್ರಯತ್ನದಲ್ಲಿದ್ದಾಗ ಇದೇ ಮಾರ್ಗವಾಗಿ ಬರುತ್ತಿದ್ದ ಬೈಕ್ ಡಿಕ್ಕಿಯಾಗಿದೆ.

ಶೆಟ್ಟಿಹಳ್ಳಿ ಅಭಯಾರಣ್ಯ ವ್ಯಾಪ್ತಿಯ ಗಾಜನೂರು ವಲಯ ಅರಣ್ಯ ವಿಭಾಗಕ್ಕೆ ಸೇರಿದ ಪ್ರದೇಶದಲ್ಲಿ ಘಟನೆ ನಡೆದಿದೆ. ಬೈಕ್ ಡಿಕ್ಕಿಯಾದ ರಭಸಕ್ಕೆ ತೀವ್ರ ಗಾಯಗೊಂಡು ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದೆ. ಚಿರತೆಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶೆಟ್ಟಿಹಳ್ಳಿ ಅಭಯಾರಣ್ಯ ವ್ಯಾಪ್ತಿಯ ಗಾಜನೂರು ವಲಯ ಅರಣ್ಯ ವಿಭಾಗಕ್ಕೆ ಸೇರಿದ ಪ್ರದೇಶದಲ್ಲಿ ಘಟನೆ ನಡೆದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಚಿರತೆಯ ಶವ ವಶಕ್ಕೆ ಪಡೆದಿದ್ದಾರೆ. ಬೈಕ್ ಸವಾರನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ