LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಿಯಕರನೊಂದಿಗೆ ಓಡಿ ಹೋಗಲು ಪತಿ ಮನೆಯಲ್ಲಿಯೇ ಚಿನ್ನಾಭರಣ ಕಳ್ಳತನ ಮಾಡಿದ ನವವಿವಾಹಿತೆ

ಬೆಳಗಾವಿ: ನವವಿವಾಹಿತೆಯೊಬ್ಬಳು ತನ್ನ ಪ್ರಿಯತಮನೊಂದಿಗೆ ಓಡಿಹೋಗಲು ಪತಿ ಮನೆಯಲ್ಲಿಯೇ ಕಳ್ಳತನ ಮಾಡಿರುವ ವಿಚಿತ್ರ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಹಸೀನಾ ಎಂಬಾಕೆ ಎರಡು ತಿಂಗಳ ಹಿಂದಷ್ಟೆ ಶರೀಫ್ ಎಂಬಾತನ ಜೊತೆ ವಿವಾಹವಾಗಿ ಗಂಡನ ಮನೆಗೆ ಬಂದಿದ್ದಾಳೆ. ವಿವಾಹಕ್ಕೂ ಮುನ್ನವೇ ಹಸೀನಾ ಬೇರೊಬ್ಬನ ಪ್ರೀತಿಯಲ್ಲಿ ಬಿದ್ದಿದ್ದಳು. ಪ್ರಿಯಕರನ ಜೊತೆ ಎಸ್ಕೇಪ್ ಆಗಲು ಪತಿಯ ಮನೆಗೆ ಕನ್ನ ಹಾಕಿದ್ದಾಳೆ.

ಹಸೀನಾ ತನ್ನ ಪ್ರಿಯಕರ ಹಣಮಂತ ಮಾರಾಪೂರ ಜೊತೆ ಸೇರಿ ಪತಿ ಶರೀಫ್ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ಈ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ ನಡೆದಿದೆ.‌

ಹಸೀನಾ ಪತಿಯ ಮನೆಯಲ್ಲಿದ್ದ 21 ಲಕ್ಷ ಮೌಲ್ಯದ ‌154.6 ಗ್ರಾಂ ಚಿನ್ನಾಭರಣ. 11 ಸಾವಿರ ಮೌಲ್ಯದ 45ಗ್ರಾಂ ಬೆಳ್ಳಿಯ ಆಭರಣ ಕಳ್ಳತನ ಮಾಡಿದ್ದಾಳೆ. ಕೂಡಲೆ ಕಳ್ಳತನದ ಬಗ್ಗೆ ದಿಲಶಾದ್ ನದಾಫ್ ಎಂಬುವವರಿಂದ ಕಟಕೋಳ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಮದುರ್ಗ ಸಿಪಿಐ ವಿನಾಯಕ ಬಡಿಗೇರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಕೇವಲ 48 ಗಂಟೆಯಲ್ಲಿ ಕಳ್ಳರನ್ನು ಬಂಧಿಸಿದ್ದಾರೆ.

ಮೂಲತಃ ಮೂಡಲಗಿ ತಾಲೂಕಿನ ನಿವಾಸಿಯಾಗಿರುವ ಹಸೀನಾ ನದಾಫ್ ಕಳೆದ ಎರಡು ತಿಂಗಳ ಹಿಂದೆ ಹೊಸಕೋಟಿ ಗ್ರಾಮದ ಶರೀಫ್ ಜೊತೆ ವಿವಾಹವಾಗಿದ್ದಳು. ಆದರೆ ಮದುವೆಯಾದ ಬಳಿಕವೂ ತನ್ನ ಪ್ರೀಯಕರ ಹಣಮಂತನ ಸಂಪರ್ಕದಲ್ಲಿದ್ದಳು. ಇಬ್ಬರೂ ಸೇರಿ ಶರೀಫ್ ಮನೆಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ