LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಡಿಯಿಂದ ಶ್ರೀಕಿ ಬಂಧನ ಬೆನಲ್ಲೇ ನಲಪಾಡ್ ಗೆ ಮತ್ತೆ ಎದುರಾಗುತ್ತಾ ಕಂಟಕ?

ಬೆಂಗಳೂರಿ: ಬಿಟ್‌ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿರುವ ಜಾರಿ ನಿರ್ದೇಶನಾಲಯ (ಇಡಿ) ಕಿಂಗ್‌ಪಿನ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ಬಂಧಿಸಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಯುವ ನಾಯಕ ಮೊಹಮ್ಮದ್ ನಲಪಾಡ್ ಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ಸರ್ಕಾರದ ಇ-ಪ್ರೊಕ್ಯೂರಮೆಂಟ್ ವೆಬ್‌ಸೈಟ್ ಹ್ಯಾಕ್ ಮತ್ತು 4.5 ಕೋಟಿ ರೂ. ಅಕ್ರಮ ವಹಿವಾಟಿನ ಹಳೆಯ ನಂಟಿನ ಬಗ್ಗೆ ಇಡಿ ತನಿಖೆ ಚುರುಕುಗೊಳಿಸಿದೆ. ಈ ಹಿಂದೆ ಎರಡು ಬಾರಿ ಎಸ್‌ಐಟಿ ವಿಚಾರಣೆ ಎದುರಿಸಿದ್ದ ಮೊಹಮ್ಮದ್ ನಲಪಾಡ್ ವಿರುದ್ಧ ಈಗ ಹೆಚ್ಚಿನ ದಾಖಲೆಗಳನ್ನು ಇಡಿ ಕಲೆಹಾಕುತ್ತಿದೆ. ಈ ಹಿನ್ನೆಲೆಯಲ್ಲಿ ನಲಪಾಡ್ ಗೆ ಮತ್ತೆ ಇಡಿ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇಡಿ ಅಧಿಕಾರಿಗಳು ಬಿಟ್ ಕಾಯಿನ್ ಹಗರಣದ ಕಿಂಗ್‌ಪಿನ್ ಶ್ರೀಕಿ ಸೇರಿದಂತೆ ಮೂವರನ್ನು ಬಂಧಿಸಿದ್ದು, ಇದರ ಬೆನ್ನಲ್ಲೇ ಮೊಹಮ್ಮದ್ ನಲಪಾಡ್‌ಗೂ ಆತಂಕ ಎದುರಾಗಿದೆ. ಬಂಧಿತ ಶ್ರೀಕಿ ಜೊತೆ ಮೊಹಮ್ಮದ್ ನಲಪಾಡ್ ನಿಕಟ ಸಂಪರ್ಕ ಹೊಂದಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಈ ಹಿಂದೆ ರಾಜ್ಯ ಸರ್ಕಾರದ ಇ-ಪ್ರೊಕ್ಯೂರಮೆಂಟ್ ವೆಬ್‌ಸೈಟ್ ಹ್ಯಾಕ್ ಮಾಡಿ, ಸರ್ಕಾರದ ಹಣವನ್ನು ವಿವಿಧ ಅಕ್ರಮ ಖಾತೆಗಳಿಗೆ ವರ್ಗಾಯಿಸಿದ ಆರೋಪ ಶ್ರೀಕಿ ತಂಡದ ಮೇಲಿದೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ಎಸ್‌ಐಟಿ ತನಿಖೆಗೆ ವಹಿಸಿತ್ತು. ಎಸ್‌ಐಟಿ ತನಿಖೆಯ ವೇಳೆ ಹಲವು ಡಿಜಿಟಲ್ ವ್ಯಾಲೆಟ್‌ಗಳ ಕಳ್ಳತನ ಬೆಳಕಿಗೆ ಬಂದಿದ್ದಲ್ಲದೆ, ನಲಪಾಡ್ಗೂ ಈ ಜಾಲದ ಜೊತೆ ಲಿಂಕ್ ಇರುವುದು ಕಂಡುಬಂದಿತ್ತು. ಇದೇ ಕಾರಣಕ್ಕೆ ನಲಪಾಡ್ ಈಗಾಗಲೇ ಎರಡು ಬಾರಿ ಎಸ್‌ಐಟಿ ವಿಚಾರಣೆಗೂ ಹಾಜರಾಗಿದ್ದರು. ಈಗ ಇಡಿ ಅಧಿಕಾರಿಗಳು ಶ್ರೀಕಿಯನ್ನು ಬಂಧಿಸಿರುವುದರಿಂದ, ಅಕ್ರಮ ಹಣ ವರ್ಗಾವಣೆಯಲ್ಲಿ ನಲಪಾಡ್ ಪಾತ್ರದ ಕುರಿತು ದಾಖಲೆಗಳನ್ನು ಸಂಗ್ರಹಿಸುತ್ತಿದ್ದಾರೆ.

2024ರ ಏಪ್ರಿಲ್ ನಲ್ಲಿ ಶಾಸಕ ಹ್ಯಾರಿಸ್ ಮತ್ತು ನಲಪಾಡ್ ನಿವಾಸಗಳ ಮೇಲೆ ಇಡಿ 15 ಗಂಟೆಗಳ ಕಾಲ ಸುದೀರ್ಘ ದಾಳಿ ನಡೆಸಿತ್ತು. ಶ್ರೀಕಿ ಹ್ಯಾಕ್ ಮಾಡಿದ ಬಿಟ್‌ಕಾಯಿನ್‌ಗಳನ್ನು ಕ್ರಿಪ್ಟೋ ಮೂಲಕ ಹಣವಾಗಿ ಪರಿವರ್ತಿಸಿ, ಲೇಯರಿಂಗ್ (Layering) ಪದ್ಧತಿಯಲ್ಲಿ ವರ್ಗಾಯಿಸಿರುವುದು ಅಂದು ಪತ್ತೆಯಾಗಿತ್ತು. ಶ್ರೀಕಿ, ನಲಪಾಡ್ ಸಹೋದರ ಉಮರ್ ನಲಪಾಡ್‌ನ ಸಹಪಾಠಿಯಾಗಿದ್ದರಿಂದ ಈ ಸ್ನೇಹ ಆರಂಭವಾಗಿತ್ತು. ಶ್ರೀಕಿ ಮುಂಬೈ ಮೂಲದ ವ್ಯಕ್ತಿಯೊಬ್ಬನ ಮೂಲಕ ನಲಪಾಡ್ ಖಾತೆಗೆ 10 ಲಕ್ಷ ರೂ. ವರ್ಗಾಯಿಸಿದ ಆರೋಪ ಅಂದೇ ಕೇಳಿಬಂದಿತ್ತು. ಒಟ್ಟಾರೆ 4.5 ಕೋಟಿ ರೂ. ಅಕ್ರಮ ವಹಿವಾಟಿನ ಶಂಕೆ ವ್ಯಕ್ತವಾಗಿತ್ತು.

ಎಸ್‌ಐಟಿ ನೀಡಿದ್ದ ಮಾಹಿತಿಗಳ ಆಧಾರದ ಮೇಲೆ ಇಡಿ ಈಗ ಶ್ರೀಕಿಯನ್ನು ವಶಕ್ಕೆ ಪಡೆದಿದೆ. ಶ್ರೀಕಿ ನೀಡುವ ಹೇಳಿಕೆಗಳು ನಲಪಾಡ್ ಗೂ ಸಂಕಷ್ಟ ತರುವ ಸಾಧ್ಯತೆ ದಟ್ಟವಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ