LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಸತಿ, ನಿವೇಶನ ಇಲ್ಲದವರಿಗೆ ಗುಡ್ ನ್ಯೂಸ್: ವಸತಿ ರಹಿತರ ಪಟ್ಟಿಗೆ ಹೆಸರು ಸೇರಿಸಲು ಅಂತಿಮ ಅವಕಾಶ

2018ರ ಸಮೀಕ್ಷೆಯಲ್ಲಿ ಕೈಬಿಟ್ಟುಹೋಗಿರುವ ಅರ್ಹ ವಸತಿ ಮತ್ತು ನಿವೇಶನ ರಹಿತ ಫಲಾನುಭವಿಗಳನ್ನು ಗುರುತಿಸಿ ಪಟ್ಟಿಗೆ ಸೇರ್ಪಡೆಗೊಳಿಸಲು ಇದೀಗ ಅಂತಿಮ ಅವಕಾಶ ನೀಡಲಾಗಿದ್ದು, ಮೇ 15ರೊಳಗೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಕಾರ್ಯಾಲಯ ತಿಳಿಸಿದೆ.

ರಾಜೀವ್ ಗಾಂಧಿ ವಸತಿ ನಿಗಮದ ನಿರ್ದೇಶನದಂತೆ, 2018ರಲ್ಲಿ ನಡೆಸಲಾದ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಸಮೀಕ್ಷಾ ಪಟ್ಟಿಯನ್ನು ಪರಿಷ್ಕರಿಸಲು ಸರ್ಕಾರ ಅನುಮತಿ ನೀಡಿದೆ. ಆ ಸಂದರ್ಭದಲ್ಲಿ ಅರ್ಹತೆ ಇದ್ದರೂ ತಾಂತ್ರಿಕ ಕಾರಣಗಳಿಂದ ಅಥವಾ ಇತರೇ ಅಡೆತಡೆಗಳಿಂದ ಪಟ್ಟಿಯಿಂದ ಹೊರಗುಳಿದವರನ್ನು ಪತ್ತೆಹಚ್ಚಿ, ಗ್ರಾಮ ಸಭೆಗಳ ಮೂಲಕ ಅವರ ಅರ್ಹತೆಯನ್ನು ಮರುಪರಿಶೀಲಿಸಿ ಪಟ್ಟಿಗೆ ಸೇರಿಸಲು ಸೂಚಿಸಲಾಗಿದೆ. 2026-27ನೇ ಸಾಲಿನ ಆಯವ್ಯಯದಲ್ಲಿ ರಾಜ್ಯದ ವಿವಿಧ ವಸತಿ ಯೋಜನೆಗಳಡಿ ಒಂದು ಲಕ್ಷ ಮನೆಗಳ ಹಂಚಿಕೆ ಗುರಿ ಹೊಂದಲಾಗಿದ್ದು, ಇದಕ್ಕಾಗಿ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಫಲಾನುಭವಿಗಳನ್ನು ಆನ್‍ಲೈನ್ ಲಾಟರಿ ಮೂಲಕ ಗ್ರಾಮ ಸಭೆಗಳಲ್ಲಿ ಪಾರದರ್ಶಕವಾಗಿ ಆಯ್ಕೆ ಮಾಡಲಾಗುವುದು. ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ವೆಬ್‍ಸೈಟ್‍ನಲ್ಲಿ ದತ್ತಾಂಶ ಅಳವಡಿಸಲು 2026ರ ಮೇ 15 ಅಂತಿಮ ದಿನಾಂಕವಾಗಿದೆ.

ಒಂದು ವೇಳೆ ಅರ್ಹ ವಸತಿ ರಹಿತರ ಹೆಸರುಗಳು ಇನ್ನೂ ಪಟ್ಟಿಗೆ ಸೇರ್ಪಡೆಯಾಗದಿದ್ದಲ್ಲಿ, ಸಂಬಂಧಪಟ್ಟ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕೂಡಲೇ ಕ್ರಮ ವಹಿಸಬೇಕು. ನಿಗದಿಪಡಿಸಿದ ಕಾಲಾವಕಾಶದ ನಂತರ ಯಾವುದೇ ಹೊಸ ಸೇರ್ಪಡೆಗೆ ಅವಕಾಶವಿರುವುದಿಲ್ಲ ಮತ್ತು ಅಂದಿನ ಪಟ್ಟಿಯನ್ನೇ ಅಂತಿಮ ಎಂದು ಪರಿಗಣಿಸಲಾಗುವುದು ಎಂದು ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
CWRC ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು: ರಾಜ್ಯದ ರೈತರ ಹಿತ ಕಾಯಲು ಸರ್ಕರ ಬದ್ಧ: ಸಚಿವ ರಾಮಲಿಂಗಾರೆಡ್ಡಿBIG NEWS: ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ; ಆದರೂ ಡಿ.ಕೆ.ಶಿವಕುಮಾರ್ ತಮಿಳುನಾಡು ಸಿಎಂ ಅವರನ್ನು ಸಂಧಾನಕ್ಕೆ ಆಹ್ವಾನಿಸಿದ್ದೇಕೆ? ಆರ್.ಅಶೋಕ್ ಪ್ರಶ್ನೆಮಾಜಿ ಸಿಎಂ ಜೆ.ಹೆಚ್. ಪಟೇಲ್ ಬೆಂಬಲಿಗರಾಗಿದ್ದ ಪಿ. ಶೇಖರಪ್ಪ ನಿಧನSHOCKING : ಲವರ್ ಜೊತೆ ಮಾತನಾಡಲು ಅಡ್ಡಿ ; ಅಳುತ್ತಿದ್ದ 3 ವರ್ಷದ ಮಗನನ್ನೇ ಕೊಂದ ಪಾಪಿ ತಾಯಿ.!ಸ್ವಾತಂತ್ರೋತ್ಸವ ಫಲಪುಷ್ಪ ಪ್ರದರ್ಶನ : ಲಾಲ್‌ಬಾಗ್‌ನಲ್ಲಿ ವಿವಿಧ ಸ್ಪರ್ಧೆ, ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಮಾಹಿತಿ ನೀಡಿದವರೇ ಅರೆಸ್ಟ್: ಹೈಕೋರ್ಟ್ ತರಾಟೆಜಲಾಶಯದ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಬಳಸಿBIG NEWS : ಸೈಬರ್ ಅಪರಾಧಗಳಿಗೆ ಮರಣದಂಡನೆ ; ಸಂಸತ್ತಿನಲ್ಲಿ ಮಹತ್ವದ ಮಸೂದೆ ಅಂಗೀಕಾರBREAKING : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಗ್ನತೆ ; ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ 20 ಮಂದಿ ಸಾವುಪೊಲೀಸ್ ನೇಮಕಾತಿ ಪರೀಕ್ಷೆ: ವಸ್ತ್ರಸಂಹಿತೆ, ನಿಷೇಧಿತ ವಸ್ತುಗಳು ಸೇರಿ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಸೂಚನೆ