LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಸ್ತೆ ಕಾಮಗಾರಿ ವೇಳೆ ಬಿಸಿಲ ಬೇಗೆಯಿಂದ ದಣಿದು ಮಲಗಿದ್ದ ಕಾರ್ಮಿಕನ ಮೇಲೆ ಹರಿದ ರೋಡ್ ರೋಲರ್: ಸ್ಥಳದಲ್ಲೇ ಸಾವು

ಮಂಗಳೂರು: ರಸ್ತೆ ಕಾಮಗಾರಿ ವೇಳೆಯಲ್ಲಿ ರೋಡ್ ರೋಲರ್ ಹರಿದು ಕಾರ್ಮಿಕ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಬಿಹಾರ ಮೂಲದ ಕಾರ್ಮಿಕ ರಾಮಚಂದ್ರ ಶಿಕಾರ್(55) ಮೃತಪಟ್ಟವರು. ಬಿಸಿಲ ಬೇಗೆಯಿಂದ ದಣಿದು ಮಲಗಿದ್ದ ಅವರ ಮೇಲೆ ರೋಡ್ ರೋಲರ್ ಹರಿದು ದುರಂತ ನಡೆದಿದೆ. ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಗೆ ತರಲಾಗಿದ್ದ ರೋಡ್ ರೋಲರ್ ನಿಲ್ಲಿಸಲಾಗಿತ್ತು. ಅದರ ನೆರಳಿನಲ್ಲಿ ರಾಮಚಂದ್ರ ಶಿಕಾರಿ ಮಲಗಿದ್ದರು. ಚಾಲಕ ಅವರನ್ನು ಗಮನಿಸದೇ ರೋಡ್ ರೋಲರ್ ಚಾಲನೆ ಮಾಡಿದ್ದು, ರಾಮಚಂದ್ರ ಅವರ ಮೇಲೆ ರೋಲರ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 75ರ ಚತುಷ್ಪಥ ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ಸರ್ವಿಸ್ ರಸ್ತೆ ಕೆಲಸ ನಡೆಯುತ್ತಿದ್ದು, ಕಾರ್ಮಿಕ ರಾಮಚಂದ್ರ ಶಿಕಾರಿ ರೋಲರ್ ಹಿಂಭಾಗದಲ್ಲಿ ಮಲಗಿದ್ದರು. ಆತ ಮಲಗಿರುವುದು ಚಾಲಕನ ಅರಿವಿಗೆ ಬಾರದೆ ರೋಡ್ ರೋಲರ್ ಚಲಾಯಿಸಿದ್ದರಿಂದ ಅವಘಡ ಸಂಭವಿಸಿದೆ. ಅಪಘಾತದಿಂದ ರಾಮಚಂದ್ರ ಶಿಕಾರಿ ಮೃತದೇಹ ಅಪ್ಪಚ್ಚಿಯಾಗಿದೆ. ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ