LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ: ಎರಡು ಕಾರ್ಯಕ್ರಮಗಳಲ್ಲಿ ಭಾಗಿ

ಬೆಂಗಳೂರು: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ನಂತರ ಪ್ರಧಾನಿ ಮೋದಿ ಮೇ 10ರ ಭಾನುವಾರ ಬೆಳಿಗ್ಗೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಬೆಂಗಳೂರಿನಲ್ಲಿ ನಡೆಯುವ ಎರಡು ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ.

ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಿಂದ ಪ್ರಧಾನಿ ಮೋದಿಯವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 9 ಗಂಟೆಗೆ ಹೆಚ್ಎಎಲ್ ವಿಮಾನ ನಿಲ್ದಾಣದ ಬಳಿ ಸಮಾರಂಭ ನಡೆಯಲಿದೆ. ಪ್ರಧಾನಿ ಮೋದಿಯವರಿಗೆ ಮೈಸೂರು ಪೇಟ, ರೇಷ್ಮೆ ಶಾಲು ಹೊದಿಸಿ ಸನ್ಮಾನಿಸಲಿದ್ದು, ಅವರು ಸುಮಾರು ಅರ್ಧ ಗಂಟೆ ಭಾಷಣ ಮಾಡಲಿದ್ದಾರೆ.

ನಂತರ ಕನಕಪುರ ರಸ್ತೆಯ ಆರ್ಟ್ ಆಫ್ ಲಿವಿಂಗ್ ಇಂಟರ್ನ್ಯಾಷನಲ್ ಸೆಂಟರ್ ನಲ್ಲಿ ಹೊಸದಾಗಿ ನಿರ್ಮಾಣ ಮಾಡಿರುವ ಧ್ಯಾನ ಮಂದಿರ ಅನಾವರಣಗೊಳಿಸಿ ವಿಶೇಷ ವಿಮಾನದಲ್ಲಿ ತೆಲಂಗಾಣಕ್ಕೆ ತೆರಳದಿದ್ದಾರೆ.

ಹೆಚ್ಎಎಲ್ ವಿಮಾನ ನಿಲ್ದಾಣದ ಸಮೀಪ ನಡೆಯುವ ಪ್ರಧಾನಿ ಮೋದಿ ಅವರ ಅಭಿನಂದನಾ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದಗೌಡ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ವಿ. ಸೋಮಣ್ಣ, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಸೇರಿದಂತೆ ಹಲವರು ಉಪಸ್ಥಿತರಿರುವರು. 15 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ