LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ನಲ್ಲಿ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದೆ: ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೆ ಗೊತ್ತಿಲ್ಲ ಎಂದು ಟೀಕಿಸಿದ ಪ್ರಧಾನಿ ಮೋದಿ

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರಕ್ಕಾಗಿ ಸಿಎಂ ಸಿದ್ದರಾಮಯ್ಯ- ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ನಡೆಯುತ್ತಿರುವ ಕುರ್ಚಿ ಕಾಳಗದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದು, ಆರ್ಟ್ ಆಫ್ ಲಿವಿಂಗ್ ನ 47ನೇ ವಾರ್ಷಿಕ ಕಾರ್ಯಕ್ರಮ ಹಾಗೂ ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಇದಕ್ಕೂ ಮುನ್ನ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವಿನ ಬಗ್ಗೆ ಪ್ರಸ್ತಾಪಿಸಿದರು. ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ತಮಿಳುನಾಡಿನಲ್ಲಿ ಕಾಂಗ್ರೆಸ್ ಅಧಿಕಾರ ದಾಹಕ್ಕಾಗಿ ಡಿಎಂಕೆ ಬೆನ್ನಿಗೆ ಚೂರಿ ಹಾಕಿದೆ. ನೂತನ ಪಕ್ಷ ಟಿವಿಕೆ ಜೊತೆ ಕೈಜೋಡಿಸಿದೆ ಎಂದರು. ಕಾಂಗ್ರೆಸ್​​ ಎಲ್ಲೆಲ್ಲಿ ಅಧಿಕಾರಕ್ಕೆ ಬರುತ್ತದೆಯೋ ಅಲ್ಲೆಲ್ಲ ಒಂದೊಂದು ಸಮಸ್ಯೆ ಇದ್ದೇ ಇರುತ್ತದೆ. ಹಿಮಾಚಲ ಪ್ರದೇಶದಲ್ಲಿ ಸಫಾಯಿ ಕರ್ಮಚಾರಿಗಳಿಗೆ ವೇತನ ದೊರೆಯುತ್ತಿಲ್ಲ. ತೆಲಂಗಾಣದಲ್ಲಿ ರೈತರ ಆತ್ಮಹತ್ಯೆಗಳಾಗುತ್ತಿವೆ. ಕೇರಳದಲ್ಲಿ ಬಹುಮತದೊಂದಿಗೆ ಚುನಾವಣೆ ಗೆದ್ದರೂ ಇನ್ನೂ ಸಿಎಂ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಇಲ್ಲಿ ಕರ್ನಾಟಕದಲ್ಲೂ ಸಿಎಂ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ ಎಂದರು.

ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟಿನ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ ಮೋದಿ, ಜನರು ಸಮಸ್ಯೆಗಳಿಂದ ಬಳಲುತ್ತಿದ್ದರೆ, ಸರ್ಕಾರದ ನಾಯಕರು ಲೂಟಿ ಹೊಡೆಯುವದರಲ್ಲಿ ನಿರತರಾಗಿದ್ದಾರೆ. ಆಂತರಿಕ ಜಗಳ ಮತ್ತು ಕುರ್ಚಿ ಕಿತ್ತಾಟದಲ್ಲಿ ಮುಳುಗಿದ್ದಾರೆ. ಕರ್ನಾಟಕದಲ್ಲಿ ಕುರ್ಚಿಗಾಗಿ ಸಿಎಂ ಹಾಗೂ ಡಿಸಿಎಂ ನಡುವೆ ಕಿತ್ತಾಟ ಆರಂಭವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಇದೇ ವೇಳೆ ಬೆಂಗಳೂರನ್ನು ಭಾರತದ ಭವಿಷ್ಯದ ಎಂಜಿನ್ ಎಂದು ಕರೆದ ಪ್ರಧಾನಿ, ‘ಇಂದು ಇಡೀ ಜಗತ್ತು ಡಿಜಿಟಲ್ ಇಂಡಿಯಾದ ಬಗ್ಗೆ ಮಾತನಾಡುತ್ತಿದ್ದರೆ ಅದಕ್ಕೆ ಬೆಂಗಳೂರಿನ ಯುವಶಕ್ತಿಯೇ ಕಾರಣ. ಕರ್ನಾಟಕದ ಐಟಿ ನೈಪುಣ್ಯ ಮತ್ತು ಸಂಶೋಧನೆಗಳು ದೇಶವನ್ನು ಸ್ವಾವಲಂಬಿಯಾಗಿಸುತ್ತಿವೆ’ ಎಂದರು. ಅಲ್ಲದೆ, ಕೊರೊನಾ ನಂತರದ ಆರ್ಥಿಕ ಚೇತರಿಕೆಯಲ್ಲಿ ಕರ್ನಾಟಕದ ರೈತರು ಮತ್ತು ಉದ್ಯಮಿಗಳ ಕೊಡುಗೆಯನ್ನು ಸ್ಮರಿಸಿದರು.

ಇನ್ನು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವಿನ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಬಂಗಾಳದ ಜನರು ಇತಿಹಾಸ ನಿರ್ಮಿಸಿದ್ದಾರೆ. ದಶಕಗಳ ಅರಾಜಕತೆಯನ್ನು ಕೊನೆಗಾಣಿಸಿ ವಿಕಾಸದ ಹಾದಿ ಹಿಡಿದಿದ್ದಾರೆ. ಈ ಗೆಲುವು ಕೇವಲ ಬಿಜೆಪಿಯದ್ದಲ್ಲ, ಇದು ಪ್ರಜಾಪ್ರಭುತ್ವದ ಗೆಲುವು’ ಎಂದರು. ಅಸ್ಸಾಂನಲ್ಲಿ ಸತತ ಎರಡನೇ ಬಾರಿಗೆ ಜನಾದೇಶ ನೀಡಿರುವುದು ನವ ಭಾರತದ ನಿರ್ಮಾಣಕ್ಕೆ ಸಿಕ್ಕ ಶಕ್ತಿ ಎಂದು ಹರ್ಷ ವ್ಯಕ್ತಪಡಿಸಿದರು. ಗೆಲುವಿಗೆ ಕಾರಣರಾದ ಪಕ್ಷದ ಎಲ್ಲಾ ಕಾರ್ಯಕರ್ತರಿಗೂ ಧನ್ಯವಾದ ಎಂದರು.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಅಸ್ತಿತ್ವವೇ ಇರಲಿಲ್ಲ. ಕೊನೆಗೆ 3 ಸ್ಥಾನ ದೊರೆಯಿತು. ಮತ್ತೆ ಚುನಾವಣೆಯಲ್ಲಿ ಮೂರು ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಅದೇ ರಾಜ್ಯದಲ್ಲಿ ಈಗ 200ಕ್ಕೂ ಹೆಚ್ಚು ಸ್ಥಾನ ಗಳಿಸಿ ಸರ್ಕಾರ ರಚಿಸಿದ್ದೇವೆ. ಕೇರಳದಲ್ಲಿಯೂ ಈಗ 3 ಸ್ಥಾನ ಗಳಿಸಿದ್ದೇವೆ. ಮುಂದಿನ ದಿನಗಳಲ್ಲಿ ಬಂಗಾಳದ ರೀತಿ ಕೇರಳದಲ್ಲಿಯೂ ಕಮಲ ಅರಳಲಿದೆ ಎಂದು ಹೇಳಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ