LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಿ. ಸುಧಾಕರ್ ಅವರ ನಿಷ್ಟೆ, ಸರಳತೆ, ಸಾಮಾಜಿಕ ಕಳಕಳಿ ಅನನ್ಯ, ನಮ್ಮೆಲ್ಲರಿಗೂ ಮಾದರಿ: ಸಂಪುಟ ಸಹೋದ್ಯೋಗಿ ನಿಧನಕ್ಕೆ ಮಧು ಬಂಗಾರಪ್ಪ ತೀವ್ರ ಸಂತಾಪ

 ಹಿರಿಯೂರು ಶಾಸಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನಕ್ಕೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಂತಾಪ ಸೂಚಿಸಿದ್ದಾರೆ.

ಆತ್ಮೀಯ ಸ್ನೇಹಿತರು ಸಂಪುಟ ಸಹೋದ್ಯೋಗಿ ಡಿ. ಸುಧಾಕರ್ ಅವರು ಅಲ್ಪಕಾಲದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದ ಸುದ್ದಿ ಅತೀವ ದುಃಖವನ್ನುಂಟು ಮಾಡಿದೆ. ಆದರೆ ಅವರೊಂದಿಗಿನ ನೆನಪುಗಳು ಅಮರ. ಸಾರ್ವಜನಿಕ ಸೇವೆಯಲ್ಲಿ ಅವರು ತೋರುತ್ತಿದ್ದ ನಿಷ್ಟೆ ಸರಳತೆ ಮತ್ತು ಸಾಮಾಜಿಕ ಕಳಕಳಿ ಅನನ್ಯವಾದುದು ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

ನನ್ನ ಮತಕ್ಷೇತ್ರ ಸೊರಬ ತಾಲೂಕಿನ ಹುರುಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಉದ್ಯೋಗ ಖಾತ್ರಿ ಯೋಜನೆಯಡಿ ಕಾಂಪೌಂಡ್ ಹಾಗೂ ಅಡುಗೆ ಮನೆ ನಿರ್ಮಾಣದ ಶಂಕುಸ್ಥಾಪನೆಗೆ  ಅತಿಥಿಯಾಗಿ ಆಗಮಿಸಿದ್ದ ಅವರು ಕೇವಲ ಅತಿಥಿಯಾಗಿ ಉಳಿಯದೇ, ಸ್ವತಃ ತಾವೇ ಮಣ್ಣು ಹೊತ್ತು ಶ್ರಮದಾನ ಮಾಡುವ ಮೂಲಕ ಎಲ್ಲರನ್ನೂ ಬೆರಗುಗೊಳಿಸಿದ್ದರು. ಒಬ್ಬ ಸಚಿವರಾಗಿ ಅವರ ನಿಸ್ವಾರ್ಥ ಶ್ರಮ ಮತ್ತು ಜನಸಾಮಾನ್ಯರ ಜೊತೆ ಬೆರೆಯುತ್ತಿದ್ದ ರೀತಿ ನಮ್ಮೆಲ್ಲರಿಗೂ ಮಾದರಿ ಎಂದು ತಿಳಿಸಿದ್ದಾರೆ.

ಜನಸೇವೆಯಲ್ಲಿ ಅಪಾರ ಕಾಳಜಿ ಹೊಂದಿದ್ದ ಸುಧಾಕರ್ ಅವರು ಇಂದು ದೈವಾಧೀನರಾಗಿರುವುದು ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟ. ಅವರ ಜನಪರ ಕೆಲಸಗಳು ಸದಾ ಜೀವಂತ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬ ವರ್ಗ, ಅಭಿಮಾನಿಗಳು ಹಾಗೂ ಅಪಾರ ಬಂಧುಗಳಿಗೆ ನೋವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ