LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನಿ ಮೋದಿಗೆ ತಮಿಳುನಾಡು ನೂತನ ಸಿಎಂ ವಿಜಯ್ ಕೃತಜ್ಞತೆ ಸಲ್ಲಿಕೆ

ಚೆನ್ನೈ: ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ವಿಜಯ್ ಅವರಿಗೆ ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ವಿಜಯ್ ಕೃತಜ್ಞತೆ ಸಲ್ಲಿಸಿದ್ದಾರೆ.

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಿ. ಜೋಸೆಫ್ ವಿಜಯ್ ಅವರಿಗೆ ಅಭಿನಂದಿಸಿದ ಪ್ರಧಾನಿ ಮೋದಿ, ಅವರ ಅಧಿಕಾರಾವಧಿ ಅತ್ಯುತ್ತಮವಾಗಿರಲಿ ಎಂದು ಹಾರೈಸುತ್ತೇನೆ. ಜನರ ಜೀವನವನ್ನು ಸುಧಾರಿಸಲು ಕೇಂದ್ರ ಸರ್ಕಾರವು ತಮಿಳುನಾಡು ಸರ್ಕಾರದೊಂದಿಗೆ ಸಹಭಾಗಿತ್ವದಲ್ಲಿ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದು ತಿಳಿಸಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ತಿರು ಸಿ. ಜೋಸೆಫ್ ವಿಜಯ್ ಅವರಿಗೆ ಅಭಿನಂದನೆಗಳು. ಅವರ ಮುಂದಿನ ಅಧಿಕಾರಾವಧಿಗೆ ಶುಭಾಶಯಗಳು. ಜನರ ಜೀವನವನ್ನು ಸುಧಾರಿಸಲು ಕೇಂದ್ರ ಸರ್ಕಾರವು ತಮಿಳುನಾಡು ಸರ್ಕಾರದೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದು ತಿಳಿಸಿದ್ದಾರೆ.

ನಾನು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗ ಶುಭ ಹಾರೈಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ನಮ್ಮ ಜನರ ಕಲ್ಯಾಣ ಮತ್ತು ಪ್ರಗತಿಯೇ ನಮ್ಮ ಏಕೈಕ ಗುರಿ. ತಮಿಳುನಾಡಿನ ನಿರಂತರ ಬೆಳವಣಿಗೆಗೆ ಕೇಂದ್ರ ಸರ್ಕಾರದ ಸಕ್ರಿಯ ಬೆಂಬಲ ಮತ್ತು ಸಹಕಾರವನ್ನು ನಾವು ಎದುರು ನೋಡುತ್ತಿದ್ದೇವೆ ಎಂದು ವಿಜಯ್ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆ