LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಪದವಿ ಕಾಲೇಜು ಬೋಧಕರಿಗೆ ಗುಡ್ ನ್ಯೂಸ್: ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ.

ಕಡ್ಡಾಯ ವರ್ಗಾವಣೆ ಮತ್ತು ವಿಶೇಷ ಪ್ರಕಾರಗಳ ಕೋರಿಕೆ ವರ್ಗಾವಣೆಯನ್ನು ಮೇ ಮತ್ತು ಜುಲೈ ಒಳಗೆ ಕೈಗೊಳ್ಳುವಂತೆ ಸೂಚಿಸಲಾಗಿದೆ. ವಿಶೇಷ ಪ್ರಕರಣಗಳಿಗೆ ಅನ್ವಯಿಸುವ ಬೋಧಕರು ಅಗತ್ಯ ದಾಖಲೆಗಳೊಂದಿಗೆ ಇಲಾಖೆಯ ವೆಬ್ಸೈಟ್ ನಲ್ಲಿ ಲಭ್ಯವಿರುವ ಆನ್ಲೈನ್ ಅರ್ಜಿಯಲ್ಲಿ ವರ್ಗಾವಣೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ನ್ಯಾಯಾಲಯದ ಆದೇಶದಂತೆ 2024ರ ವರ್ಗಾವಣೆಯಲ್ಲಿ ಭಾಗವಹಿಸಿದ 436 ಬೋಧಕರಿಗೆ ಮುಂದಿನ ವರ್ಗಾವಣೆಗಳಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಇದರಲ್ಲಿ 199 ಮಂದಿ ವರ್ಗಾವಣೆಯಲ್ಲಿ ಭಾಗವಹಿಸಲು ಬಯಸಿದ್ದಾರೆ.

ತಾತ್ಕಾಲಿಕ ವೇಳಾಪಟ್ಟಿ

ಮೇ 11 ಬೋಧಕರ ವರ್ಗಾವಣೆ ಪ್ರಕಟಣೆ

ಮೇ 29 ವರ್ಗಾವಣೆಗೆ ಒಳಪಡುವ ಬೋಧಕರ ವಲಯವಾರು ಮತ್ತು ವರ್ಗವಾರು ತಾತ್ಕಾಲಿಕ ಪಟ್ಟಿ ಪ್ರಕಟ

ಜೂನ್ 5 ವಿನಾಯಿತಿ ಕೋರಿ ಅರ್ಜಿ ಸಲ್ಲಿಸಲು ಅವಕಾಶ

ಜೂನ್ 16 ತಾತ್ಕಾಲಿಕ ಆದ್ಯತಾ ಪಟ್ಟಿ ಪ್ರಕಟ

ಜೂನ್ 19ರಂದು ಆದ್ಯತಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

ಜೂನ್ 20ರಂದು ಅಂತಿಮ ಆದ್ಯತಾ ಪಟ್ಟಿ ಪ್ರಕಟ, ಕೌನ್ಸೆಲಿಂಗ್ ಹುದ್ದೆಗಳ ಪ್ರಕಟಣೆ ಮಾಡಲಾಗುವುದು ಎಂದು ಹೇಳಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಸಿದ್ಧರಾಮಯ್ಯ ಮುನಿಸಿನಿಂದ ಕೈತಪ್ಪಿದ ಸಚಿವ ಸ್ಥಾನ..? ಮನವೊಲಿಸಲು ಜಮೀರ್ ಅಹ್ಮದ್ ಕಸರತ್ತುಇಸ್ರೇಲ್, ಅಮೆರಿಕ ದಾಳಿಯಲ್ಲಿ ಮೃತಪಟ್ಟ 131 ದಿನಗಳ ನಂತರ ಜು. 9ರಂದು ಇರಾನ್ ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆSHOCKING: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ವಿಷಕಾರಿ ಅನಿಲ ಸೇವಿಸಿ ನಾಲ್ವರು ಸಾವುವಿವಾಹಿತೆಗೆ ಮತ್ತು ಬರುವ ಪಾನೀಯ ಕುಡಿಸಿ ರೇಪ್, ಬೆತ್ತಲೆ ಚಿತ್ರ ಸೆರೆಹಿಡಿದು ಬ್ಲಾಕ್ ಮೇಲ್BREAKING: ಇನ್ನು ಯಾರೂ ಒಂದು ರೂಪಾಯಿ ಲಂಚ ಕೊಡಬೇಕಿಲ್ಲ: ಭ್ರಷ್ಟಾಚಾರ ಮುಕ್ತ ರಾಜ್ಯವಾಗಿಸಲು ಸಿಎಂ ಡಿಕೆ ಮಹತ್ವದ ಹೆಜ್ಜೆಶಿವಮೊಗ್ಗ: ಕೊಳೆತ ಸ್ಥಿತಿಯಲ್ಲಿ ಮಹಿಳೆ, ಸಾಕು ನಾಯಿ ಶವ ಪತ್ತೆಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣ: ಚಿನ್ನಯ್ಯನ ಬ್ರೇನ್ ಮ್ಯಾಪಿಂಗ್ ಹಾಗೂ ರಿಟ್ ಅರ್ಜಿ ತನಿಖೆ ನಡೆಸುವಂತೆ SITಗೆ ಗಿರೀಶ್ ಮಟ್ಟಣ್ಣನವರ್ ದೂರುBREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಯೋಜನೆ ಸೌಲಭ್ಯ ಪಡೆಯಲು ಮತ್ತೆ ಅರ್ಜಿ ಸಲ್ಲಿಸಬೇಕು: ಸಿಎಂ ಡಿಕೆ ಮಾಹಿತಿದೇಶದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಕೋಟ್ಯಂತರ ರೂ ಅಕ್ರಮ ಫಂಡಿಂಗ್ ಆರೋಪ: ಕರ್ನಾಟಕದ ನಾಲ್ವರು ಸೇರಿ 7 ಜನರ ವಿರುದ್ಧ FIR ದಾಖಲುಸಂಬಳ ಪಡೆಯುವ ಪ್ರತಿಯೊಬ್ಬ ಉದ್ಯೋಗಿಯೂ  ತಿಳಿಯಲೇಬೇಕಾದ ಸೀಕ್ರೆಟ್ ಪಿಎಫ್ ಕಟ್ ಆದ್ರೆ ಸಿಗುತ್ತೆ ₹7 ಲಕ್ಷದ ಬಿಗ್ ಇನ್ಶೂರೆನ್ಸ್ ಬೆನಿಫಿಟ್