LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಾಲೆಗಳಲ್ಲಿ ಹಿಜಾಬ್ ಧರಿಸಬಹುದಾದರೆ ಹಿಂದೂಗಳಿಗೆ ಕೇಸರಿ ಶಾಲು ಹಾಕಲೂ ಅವಕಾಶ ನೀಡಬೇಕು: ಯತ್ನಾಳ್

ಶಾಲೆಗಳಲ್ಲಿ ಹಿಜಾಬ್ ಧರಿಸಬಹುದಾದರೆ ಹಿಂದೂಗಳಿಗೆ ಕೇಸರಿ ಶಾಲು ಹಾಕಲೂ ಅವಕಾಶ ನೀಡಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ.

ಸರ್ವೋಚ್ಛ ನ್ಯಾಯಾಲಯದಲ್ಲಿ ಶಾಲಾ ಮಕ್ಕಳು ಹಿಜಾಬ್ ಧರಿಸಬಹುದೇ ಇಲ್ಲವೇ ಎಂಬುವ ವಿಷಯದ ಪ್ರಕರಣ ಬಾಕಿ ಇರುವ  ಸಂದರ್ಭದಲ್ಲಿ ಶಾಲಾ ಮಕ್ಕಳು ತಮ್ಮ ಸಮವಸ್ತ್ರದೊಂದಿಗೆ ಹಿಜಾಬ್ ಕೂಡ ಧರಿಸಬಹುದು ಎಂದು ಸುತ್ತೋಲೆ ಹೊರಡಿಸಿರುವ ಕರ್ನಾಟಕ ಸರ್ಕಾರದ ನಿಲುವು ಅಲ್ಪಸಂಖ್ಯಾತರ ಮತ ಬ್ಯಾಂಕ್ ಅನ್ನು ಭದ್ರಪಡಿಸಿಕೊಳ್ಳುವ ಮತ್ತೊಂದು ಪ್ರಯತ್ನ ಎಂದು ಟೀಕಿಸಿದ್ದಾರೆ.

ಸರ್ವೋಚ್ಚ ನ್ಯಾಯಾಲಯದಲ್ಲಿ ಸದರಿ ಪ್ರಕರಣ sub-judice ಇರುವ ಸಂದರ್ಭದಲ್ಲೇ ಸಿದ್ದರಾಮಯ್ಯ ಸಂಪುಟದ ಮುಕುಟಮಣಿಗಳು ಹಿಜಾಬ್ ಧರಿಸಿ ಶಾಲೆಗೆ ಹೋಗಬಹುದು ಎಂಬ ಸುತ್ತೋಲೆ ಹೊರಡಿಸಿದ್ದಾರೆ.

ಸರ್ಕಾರದ ತರ್ಕಾನುಸಾರವೇ ಮುಸಲ್ಮಾನ ಹೆಣ್ಣು ಮಕ್ಕಳಿಗೆ ಹಿಜಾಬ್ ಧರಿಸಬಹುದಾದರೆ ಹಿಂದೂಗಳಿಗೆ ಕೇಸರಿ ಶಾಲನ್ನು ಧರಿಸಲು ಅವಕಾಶ ನೀಡಬೇಕು ಹಾಗೂ ಹಿಂದೂ ವಿದ್ಯಾರ್ಥಿ ಸಮೂಹಕ್ಕೆ ನಾನೆ ಸ್ವತಃ ಕೇಸರಿ ಶಾಲನ್ನು ಕೊಡುವ ವ್ಯವಸ್ಥೆಯನ್ನು ಮಾಡುತ್ತೇನೆ. ಮುಸಲ್ಮಾನ ಹೆಣ್ಣುಮಕ್ಕಳು ಹಿಜಾಬ್ ಧರಿಸಿಬಹುದಾದರೆ, ಎಲ್ಲ ಶಾಲಾ ಕಾಲೇಜುಗಳಲ್ಲಿ ಗಣಪತಿಯ ಹಾಗೂ ಸರಸ್ವತಿಯ ಮೂರ್ತಿಯನ್ನಿಟ್ಟು ನಿತ್ಯ ಪೂಜೆ ಮಾಡುವ ವ್ಯವಸ್ಥೆಯನ್ನು ಕಲ್ಪಿಸುತ್ತೇವೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳ, ಅಸ್ಸಾಂ ನಲ್ಲಿ ಆದ ಹಿಂದೂ ಮತಗಳ ಕ್ರೋಡೀಕರಣದಿಂದ ಕಾಂಗ್ರೆಸ್ ಪಕ್ಷದ ಧುರೀಣರ ನಿದ್ದೆಗೆಡಿಸಿದೆ. ಶಾಲಾ ಮೂಲಸೌಕರ್ಯ, ಶಿಕ್ಷಣದ ಗುಣಮಟ್ಟ, ಶಿಕ್ಷಕರ ನೇಮಕಾತಿ, ಸಕಾಲದಲ್ಲಿ ಶೂ-ಸಾಕ್ಸ್, ಪಠ್ಯಪುಸ್ತಕ ವಿತರಿಸಬೇಕಾಗಿದ್ದ ಸರ್ಕಾರ ತನ್ನ ಆದ್ಯತೆಗಳನ್ನು ಬದಿಗಿಟ್ಟು ಹಿಜಾಬ್ ಧರಿಸುವುದಕ್ಕೆ ಅನುಮತಿ ನೀಡಿರುವುದು ಇವರ ಖುರ್ಚಿಯ ಕಾಲುಗಳು ನಡುಗುತ್ತಿವೆ ಎಂಬುದಕ್ಕೆ ಸಾಕ್ಷಿ. ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಗೆ ಯುವ ಮತದಾರರು ಬುದ್ದಿ ಕಲಿಸುವುದು ನಿಶ್ಚಿತ ಎಂದು ಯತ್ನಾಳ್ ಹೇಳಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ