LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಿರುದ್ಯೋಗಿಗಳಿಗೆ ರುಡ್‍ಸೆಟ್ ಸಂಸ್ಥೆಯಿಂದ ಉದ್ಯೋಗ ತರಬೇತಿ

ಚಿತ್ರದುರ್ಗದ ರುಡ್‍ಸೆಟ್ ಸಂಸ್ಥೆಯು ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗಾಗಿ ಸ್ವಯಂ ಉದ್ಯೋಗ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಮೇ 18ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಮಹಿಳೆಯರ 30 ದಿನಗಳ ಟೈಲರಿಂಗ್ ಹಾಗೂ 35 ದಿನಗಳು ಮಹಿಳೆಯರ ಬ್ಯೂಟಿ ಪಾರ್ಲರ್ ತರಬೇತಿ, ಹಾಗೂ ಎಲ್ಲರಿಗೂ 38 ದಿನಗಳು ಕಂಪ್ಯೂಟರ್ ಅಕೌಂಟಿಂಗ್ ತರಬೇತಿ ನೀಡಲಾಗುವುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 19 ರಿಂದ 50 ವರ್ಷ ವಯೋಮಿತಿಯೊಳಗಿರಬೇಕು. ಕನ್ನಡ ಓದಲು ಮತ್ತು ಬರೆಯಲು ಬರಬೇಕು. ತರಬೇತಿಗೆ ಸಂಬಂಧಿಸಿದಂತೆ ಪ್ರಾಥಮಿಕ ಜ್ಞಾನ ಹಾಗೂ ಸ್ವಯಂ ಉದ್ಯೋಗ ಮಾಡುವ ಆಸಕ್ತಿ ಇರಬೇಕು. ಸಂಬಂಧಪಟ್ಟ ಕೌಶಲದಲ್ಲಿ ಪ್ರಾಥಮಿಕ ಜ್ಞಾನ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

ಈ ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರಲಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಮೊಬೈಲ್ ಸಂಖ್ಯೆ ಹೊಂದಿರುವ ಸ್ವವಿವರದ ಅರ್ಜಿಯೊಂದಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್‍ಬುಕ್ ಜೆರಾಕ್ಸ್ ಪ್ರತಿಗಳನ್ನು ತೆಗೆದುಕೊಂಡು ಮೇ 18, 2026 ರಂದು ನೇರವಾಗಿ ರುಡ್‍ಸೆಟ್ ಸಂಸ್ಥೆಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8431329162, 8618282445, 8660627785, 9019244300 ಸಂಪರ್ಕಿಸಬಹುದು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ