LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಂಸಾರದಲ್ಲಿ ಬಿರುಕು? ವಿಚ್ಛೇದನದ ಗಾಳಿ ಸುದ್ದಿಯ ನಡುವೆ ಮುಂಬೈ ಬೀದಿಯಲ್ಲಿ ಕಾಣಿಸಿಕೊಂಡ ಮೌನಿ ರಾಯ್

ಖ್ಯಾತ ಬಾಲಿವುಡ್ ಹಾಗೂ ಕಿರುತೆರೆ ನಟಿ ಮೌನಿ ರಾಯ್ ಮತ್ತು ಅವರ ಪತಿ ಸೂರಜ್ ನಂಬಿಯಾರ್ ನಡುವಿನ ಸಂಬಂಧದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಎಲ್ಲಾ ವಿಚ್ಛೇದನದ ವದಂತಿಗಳ ನಡುವೆಯೇ ಮೌನಿ ರಾಯ್ ಮುಂಬೈನಲ್ಲಿ ತಮ್ಮ ಆಪ್ತ ಗೆಳತಿಯೊಂದಿಗೆ ಡಿನ್ನರ್ ಡೇಟ್ ನಲ್ಲಿ ಕಾಣಿಸಿಕೊಂಡಿದ್ದು, ಕ್ಯಾಮೆರಾ ಕಣ್ಣುಗಳಿಗೆ ಸಿಲುಕಿದ್ದಾರೆ.

ಬುಧವಾರ ರಾತ್ರಿ ಮುಂಬೈನ ಹೋಟೆಲ್‌ವೊಂದಕ್ಕೆ ಗೆಳತಿ ರೂಪಾಲಿ ಕಡಿಯಾನ್ ಅವರೊಂದಿಗೆ ಬಂದಿದ್ದ ಮೌನಿ, ಕಪ್ಪು ಬಣ್ಣದ ಶಾರ್ಟ್ ಡ್ರೆಸ್‌ನಲ್ಲಿ ಮಿಂಚುತ್ತಿದ್ದರು. ಈ ವೇಳೆ ಅಲ್ಲಿ ಹಾಜರಿದ್ದ ಮಾಧ್ಯಮದವರು ಮತ್ತು ಪಾಪರಾಜಿಗಳು ವಿಚ್ಛೇದನದ ಸುದ್ದಿಯ ಕುರಿತು ಪ್ರಶ್ನೆ ಕೇಳಲು ಪ್ರಯತ್ನಿಸಿದರೂ ಸಹ, ಮೌನಿ ಯಾವುದೇ ಪ್ರತಿಕ್ರಿಯೆ ನೀಡದೆ ಮೌನವಾಗಿಯೇ ಅಲ್ಲಿಂದ ತೆರಳಿದರು. ಇದಕ್ಕೂ ಮುನ್ನ ಬೆಳಿಗ್ಗೆ ಮೌನಿ ತಮ್ಮ ಗೆಳತಿ ರೂಪಾಲಿ ಜನ್ಮದಿನಕ್ಕೆ ಸಾಮಾಜಿಕ ಜಾಲತಾಣದಲ್ಲಿ ವಿಶೇಷವಾಗಿ ಶುಭಾಶಯ ಕೋರಿದ್ದರು.

ತಮ್ಮ ವೈವಾಹಿಕ ಜೀವನದ ಕುರಿತು ಹರಿದಾಡುತ್ತಿರುವ ಸುದ್ದಿಗಳ ಬಗ್ಗೆ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಪ್ರತಿಕ್ರಿಯಿಸಿದ್ದ ಮೌನಿ ರಾಯ್, ಮಾಧ್ಯಮಗಳು ದಯವಿಟ್ಟು ಸುಳ್ಳು ಸುದ್ದಿಗಳನ್ನು ಹಬ್ಬಿಸಬೇಡಿ ಮತ್ತು ನಮಗೆ ಸ್ವಲ್ಪ ಖಾಸಗಿತನವನ್ನು ನೀಡಿ ಎಂದು ವಿನಂತಿಸಿದ್ದರು. ಆದರೂ ಸಹ ಸೋಷಿಯಲ್ ಮೀಡಿಯಾ ಬಳಕೆದಾರರು ಮೌನಿ ಮತ್ತು ಸೂರಜ್ ಪರಸ್ಪರ ಇನ್ಸ್ಟಾಗ್ರಾಮ್‌ನಲ್ಲಿ ಅನ್‌ಫಾಲೋ ಮಾಡಿರುವುದನ್ನು ಗಮನಿಸಿದ್ದು, ಸೂರಜ್ ತಮ್ಮ ಖಾತೆಯನ್ನು ಡಿಲೀಟ್ ಮಾಡಿರುವುದು ವದಂತಿಗಳಿಗೆ ಮತ್ತಷ್ಟು ಪುಷ್ಟಿ ನೀಡಿದೆ.

2022ರ ಜನವರಿ 27 ರಂದು ಗೋವಾದಲ್ಲಿ ಬೆಂಗಳೂರು ಮೂಲದ ಉದ್ಯಮಿ ಸೂರಜ್ ನಂಬಿಯಾರ್ ಅವರನ್ನು ಮೌನಿ ವಿವಾಹವಾಗಿದ್ದರು. ಮಲಯಾಳಿ ಮತ್ತು ಬಂಗಾಳಿ ಸಂಪ್ರದಾಯದಂತೆ ಈ ಅದ್ಧೂರಿ ವಿವಾಹ ನೆರವೇರಿತ್ತು. ಪ್ರಸ್ತುತ ಈ ಜೋಡಿಯ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದು, ಮುಂದಿನ ದಿನಗಳಲ್ಲಿ ನಟಿ ಈ ಬಗ್ಗೆ ಅಧಿಕೃತವಾಗಿ ಸ್ಪಷ್ಟನೆ ನೀಡುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ