LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಇಟಿ/ನೀಟ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ಅರಿವು’ ಯೋಜನೆಯಡಿ ಶೈಕ್ಷಣಿಕ ಸಾಲ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಸಿಇಟಿ ಅಥವಾ ನೀಟ್ ಪರೀಕ್ಷೆ ಬರೆದು ವೃತ್ತಿಪರ ಕೋರ್ಸ್‌ಗಳಿಗೆ ಆಯ್ಕೆಯಾಗುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ‘ಅರಿವು’ ಸಾಲ ಯೋಜನೆಯಡಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವೈದ್ಯಕೀಯ (M.B.B.S), ಬಿ.ಡಿ.ಎಸ್, ಬಿ.ಇ/ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಟರ್, ಬಿ.ಆಯುಶ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಈ ಯೋಜನೆಯಡಿ ಶೈಕ್ಷಣಿಕ ಸಾಲ ಪಡೆಯಲು ಅರ್ಹರಿರುತ್ತಾರೆ.

ಅಭ್ಯರ್ಥಿಗಳು ನಿಗಮದ ಅಧಿಕೃತ ಜಾಲತಾಣ kmdconline.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಮೇ 30 ರೊಳಗೆ  ಅರ್ಜಿ ಸಲ್ಲಿಸಿದ ನಂತರ, ಅರ್ಜಿಯ ಹಾರ್ಡ್ ಕಾಪಿ (Hard Copy) ಮತ್ತು ಇಂಡೆಮ್ನಿಟಿ ಬಾಂಡ್ (Indemnity Bond) ಅನ್ನು ಸಂಬಂಧಪಟ್ಟ ಜಿಲ್ಲಾ ವ್ಯವಸ್ಥಾಪಕರ ಕಛೇರಿಗೆ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.

ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಕುರುಬರ ಹಾಸ್ಟೆಲ್ ಕಟ್ಟಡ, ಹದಡಿ ರಸ್ತೆ, ಜಯದೇವ ಸರ್ಕಲ್ ಹತ್ತಿರ, ದಾವಣಗೆರೆ-577002 ಅಥವಾ ದೂರವಾಣಿ ಸಂಖ್ಯೆ 8277944215 ಅನ್ನು ಸಂಪರ್ಕಿಸಬಹುದು ಎಂದು ದಾವಣಗೆರೆ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ