ಬೆಂಗಳೂರು: ಬೆಂಗಳೂರು ನಗರದಲ್ಲಿ ಪ್ರತ್ಯೇಕವಾಗಿ ಎರಡು ಕಡೆ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ.
ಸೋಲದೇವನಹಳ್ಳಿ ಮತ್ತು ಬ್ಯಾಡರಹಳ್ಳಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ದಾಳಿಯ ವೇಳೆ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ. ದಾಳಿಯ ವೇಳೆ ವೇಶ್ಯಾವಾಟಿಕೆಗೆ ದೂಡಲ್ಪಟ್ಟಿದ್ದ ಮೂವರು ಮಹಿಳೆಯರನ್ನು ರಕ್ಷಿಸಲಾಗಿದೆ. ಆರೋಪಿಗಳು ಹಲವು ದಿನಗಳಿಂದ ಮನೆಗಳನ್ನು ಬಾಡಿಗೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.