LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಪರಾಧ ನಿಯಂತ್ರಣಕ್ಕೆ ಪೊಲೀಸ್ ಅಧಿಕಾರಿಗಳಿಗೆ ಫ್ರೀ ಹ್ಯಾಂಡ್: ಸಚಿವ ಸಂತೋಷ್ ಲಾಡ್

ಧಾರವಾಡ: ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳ ನಿಯಂತ್ರಿಸಲು ಪೊಲೀಸ್ ಅಧಿಕಾರಿಗಳಿಗೆ ಫ್ರೀ ಹ್ಯಾಂಡ್ ಮಾಡಲಾಗಿದೆ. ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ, ಅದಕ್ಕೆ ಕುಮ್ಮಕ್ಕು ನೀಡುವ ಮತ್ತು ಡ್ರಗ್ಸ್, ಗಾಂಜಾ, ಅಫೀಮು ಪ್ರಕರಣಗಳಲ್ಲಿ ಸಿಗುವ ವ್ಯಕ್ತಿಗಳಿಗೆ ಕಾನೂನಾತ್ಮಕವಾಗಿ ಕಠಿಣ ಕ್ರಮ ಕೈಗೊಳ್ಳಬೇಕು. ಧಾರವಾಡ ಜಿಲ್ಲೆಯನ್ನು ಡ್ರಗ್ಸ್, ಗಾಂಜಾ ಮತ್ತು ಅಪರಾಧ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಎಲ್ಲ ಹಂತದ ಪೊಲೀಸ್ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಕಾರ್ಮಿಕ ಇಲಾಖೆ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜಿಲ್ಲಾ ಹಾಗೂ ಮಹಾನಗರ ಪೊಲೀಸ್ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಮಾತನಾಡಿದರು.

ಕಳೆದ ಐದಾರು ತಿಂಗಳಿಂದ ಅಪರಾಧಗಳ ಸಂಖ್ಯೆ ಕಡಿಮೆ ಆಗಿದ್ದರೂ ಸಂಪೂರ್ಣ ನಿಯಂತ್ರಣವಾಗುತ್ತಿಲ್ಲ. ಡ್ರಗ್ಸ್, ಗಾಂಜಾ ಸೇವನೆ, ಮಾರಾಟ ಕಡಿಮೆ ಆಗಿದ್ದರೂ ಸಂಪೂರ್ಣ ನಿಲ್ಲುತ್ತಿಲ್ಲ. ಕೆಳಮಟ್ಟದಿಂದ ಪೆÇಲೀಸ್ ಅಧಿಕಾರಿಗಳು ಪ್ರತಿ ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲಿಸಿ, ತನಿಖೆ ಮಾಡಿ, ನಿಜವಾದ ಅಪರಾಧಿಗಳ ಮೇಲೆ ಕ್ರಮ ಜರುಗಿಸಬೇಕು. ಅಪರಾಧಿ ಕೃತ್ಯದ ಮನೊಭಾವದವರಿಗೆ ಪೆÇಲೀಸ್ ಖದರು ತೋರಿಸಿ, ನಿಯಮಾನುಸಾರ ಕಾನೂನು ಕ್ರಮ ಜರುಗಿಸಿ ಎಂದು ಸಚಿವರು ತಿಳಿಸಿದರು.

ಕಾಲೇಜು, ಸಾರ್ವಜನಿಕ ಸ್ಥಳ ಹಾಗೂ ಗ್ರಾಮ, ಪಟ್ಟಣ ಪ್ರದೇಶಗಳಲ್ಲಿ ಅಪರಾಧಿ ಡ್ರಗ್ಸ್, ಗಾಂಜಾ ಅಂತಹ ಅಫೀಮುಗಳ ಬಗ್ಗೆ ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಶಾಲಾ, ಕಾಲೇಜು ಶಿಕ್ಷಕರನ್ನು, ಸಮಾಜದ ಗಣ್ಯ ವ್ಯಕ್ತಿಗಳನ್ನು, ಜನಾಭಿಪ್ರಾಯ ರೂಪಿಸುವವರನ್ನು ಅಪರಾಧಮುಕ್ತ ಜಿಲ್ಲೆ ಮಾಡುವ ಆಂದೋಲನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು, ಪೊಲೀಸ್ ಅಧೀಕ್ಷಕರು ಮತ್ತು ಠಾಣಾ, ವೃತ್ತ ಮಟ್ಟದ ಅಧಿಕಾರಿಗಳು ರಾತ್ರಿ ವೇಳೆ ಜಿಲ್ಲೆಯಲ್ಲಿ ಸಂಚರಿಸಿ, ಅನಿರೀಕ್ಷಿತ ಭೇಟಿ ನೀಡಿ, ಶಾಂತಿ, ಕಾನೂನು ಸುವ್ಯವಸ್ಥೆ ಪರಿಶೀಲಿಸಬೇಕು. ಪ್ರತಿ ತಿಂಗಳು ಜಿಲ್ಲಾಧಿಕಾರಿಗಳು, ಪೆÇಲೀಸ್ ಆಯುಕ್ತರು, ಎಸ್.ಪಿ. ಅವರು ಖುದ್ದು ಪರಿಶೀಲಿಸಿ ತಮಗೆ ವರದಿ ಸಲ್ಲಿಸಬೇಕೆಂದು ಅವರು ಹೇಳಿದರು.

ಧಾರವಾಡ ಜಿಲ್ಲೆಯು ವಿದ್ಯಾವಂತರ ನಾಡು, ಸಾಂಸ್ಕೃತಿಕ ಬಿಡು, ಸಾಹಿತ್ಯ, ಸಂಸ್ಕೃತಿಯ ನೆಲ ಎಂಬುದು ಮರುಕಳಿಸುವಂತೆ ನಾವೇಲ್ಲರೂ ಕೆಲಸ ಮಾಡುವ ಅಗತ್ಯವಿದೆ. ಇದಕ್ಕೆ ಸಾರ್ವಜನಿಕರ ಸಹಕಾರವೂ ಅಗತ್ಯವಿದೆ. ಈ ನಿಟ್ಟಿನಲ್ಲಿ ಕ್ರಿಯಾಯೋಜನೆ ರೂಪಸಿ, ಜಿಲ್ಲಾಡಳಿತ ಕಾರ್ಯೋನ್ಮುಖವಾಗಬೇಕು ಎಂದು ಸಚಿವರು ಸಲಹೆ ನೀಡಿದರು.

ಅಪರಾಧಿಗಳು, ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗವಹಿಸುವವರು, ಶಾಂತಿ, ಸುವ್ಯಸ್ಥೆಗೆ ದಕ್ಕೆ ತರುವವರ ಮೇಲೆ ಮುಲಾಜು ಇಲ್ಲದೆ ಕ್ರಮಕೈಗೊಳ್ಳಿ. ಯಾರ ಶಿಫಾರಸ್ಸು, ಒತ್ತಡಗಳಿಗೆ ಒಳಗಾಗದೇ ನಿಯಮಾನುಸಾರ ಕಾನೂನು ಕ್ರಮಕೈಗೊಳ್ಳಿ. ಧಾರವಾಡ ಜಿಲ್ಲೆ ಆದಷ್ಟು ಬೇಗನೆ ಡ್ರಗ್ಸ್, ಗಾಂಜಾ ಹಾಗೂ ಅಪರಾಧ ಮುಕ್ತ ಜಿಲ್ಲೆಯಾಗಿ ರೂಪಗೊಳ್ಳಬೇಕು. ಇದಕ್ಕೆ ನಾನು ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರ, ಜನಪ್ರತಿನಿಧಿಗಳ ಸಹಕಾರ, ಮಾರ್ಗದರ್ಶನ ಇರುತ್ತದೆ ಎಂದು ಸಚಿವ ಸಂತೋಷ ಲಾಡ್ ಅವರು ಅಧಿಕಾರಿಗಳಿಗೆ ತಿಳಿಸಿದರು.

ವೇದಿಕೆಯಲ್ಲಿದ್ದ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಉಪ ಪೊಲೀಸ್ ಆಯುಕ್ತರಾದ ರವೀಶ ಸಿ.ಆರ್. ಮತ್ತು ಶೃತಿ ಎನ್.ಎಸ್. ಅವರು ಮಾತನಾಡಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಶಾಲಂ ಹುಸೇನ್ ಸೇರಿದಂತೆ ನಾಗರಿಕ ಪೊಲೀಸ್, ಸೈಬರ್ ಕ್ರೈಂ, ಅಬಕಾರಿ ಪೊಲೀಸ್, ಸಂಚಾರಿ  ಪೊಲೀಸ್, ರೈಲ್ವೆ ಪೊಲೀಸ್ ಇಲಾಖೆಗಳ ವಿವಿಧ ಹಂತದ ಅಧಿಕಾರಿಗಳು ಭಾಗವಹಿಸಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ