LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಸ್ತ್ರ ಸಂಹಿತೆ ಕುರಿತ ಸರ್ಕಾರದ ಆದೇಶಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳ ಆಕ್ಷೇಪ

ಬೆಂಗಳೂರು: ಶಾಲಾ ಕಾಲೇಜುಗಳಲ್ಲಿ ಜನಿವಾರ, ಹಿಜಾಬ್, ಶಿವ ದಾರ ಸೇರಿ ಸಾಂಪ್ರದಾಯಿಕ ಸಂಕೇತಗಳಿಗೆ ಅನುಮತಿ ನೀಡಿದ ಸರ್ಕಾರದ ಆದೇಶಕ್ಕೆ ಖಾಸಗಿ ಶಾಲಾ ಸಂಘಟನೆಗಳಿಂದ ಆಕ್ಷೇಪ ವ್ಯಕ್ತವಾಗಿದೆ.

ಸಮವಸ್ತ್ರದ ವಿಚಾರದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕಡ್ಡಾಯ ಆದೇಶ ಮಾಡಲು ಬರುವುದಿಲ್ಲ ಎಂದು ಹೇಳಲಾಗಿದೆ.

ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್, ಸರ್ಕಾರದ ವಸ್ತ್ರ ಸಂಹಿತೆ ಆದೇಶ ಸರ್ಕಾರಿ ಶಾಲೆಗಳಲ್ಲಿ ಅನುಷ್ಠಾನಕ್ಕೆ ತರಬಹುದು. ಈ ಆದೇಶವನ್ನು ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ಸಂವಿಧಾನಾತ್ಮಕವಾಗಿ ಕಡ್ಡಾಯಗೊಳಿಸಲು ಬರುವುದಿಲ್ಲ. ಟಿಎಂಎ ಪೈ ಪ್ರಕರಣದಲ್ಲಿ ನ್ಯಾಯಾಲಯ ಈ ಬಗ್ಗೆ ಸ್ಪಷ್ಟವಾಗಿ ಹೇಳಿದೆ. ಸಮವಸ್ತ್ರದ ವಿಚಾರ ಆಯಾ ಆಡಳಿತ ಮಂಡಳಿಗಳ ಸ್ವಂತ ನಿರ್ಧಾರಕ್ಕೆ ಬಿಟ್ಟಿದ್ದು. ಸರ್ಕಾರ ನಿರ್ದಿಷ್ಟ ವಸ್ತ್ರ ಸಂಹಿತೆ ಕಡ್ಡಾಯಗೊಳಿಸುವಂತಿಲ್ಲ ಎಂದು ಹೇಳಿದೆ. ಆದರೆ ಸ್ವತಃ ಆಡಳಿತ ಮಂಡಳಿ ಒಪ್ಪಿದರೆ ಅಭ್ಯಂತರವಿಲ್ಲ ಎಂದು ಹೇಳಲಾಗಿದೆ.

ಖಾಸಗಿ ಶಾಲೆಗಳ ರುಪ್ಸಾ ಸಂಘಟನೆ ಕೂಡ ವಸ್ತ್ರ ಸಂಹಿತೆ ಕುರಿತದ ಆದೇಶಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ಸರ್ಕಾರದ ಆದೇಶದಿಂದ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸೇರಿದಂತೆ ಎಲ್ಲ ಧರ್ಮ ಜಾತಿಗಳ ವಿದ್ಯಾರ್ಥಿಗಳು ತಮ್ಮದೇ ಆದ ಸಾಂಪ್ರದಾಯಿಕ ವಸ್ತ್ರಗಳನ್ನು ಧರಿಸಿ ಬರಲು ಮುಂದಾದರೆ ಸಮಾನತೆ ಎಲ್ಲಿ ಬರುತ್ತದೆ ಎಂದು ಪ್ರಶ್ನಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ