ಬೆಂಗಳೂರು: ಜಮೀನು ವ್ಯಾಜ್ಯಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಿರ್ದೇಶಕ ಟಿ.ಎನ್.ಸೀತಾರಾಮ್ ವಿರುದ್ಧದ ಕೇಸ್ ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.
ಜಮೀನು ವ್ಯಾಜ್ಯ ಸಂಬಂಧ ಪ್ರಕರಣ ರದ್ದು ಕೋರಿ ಟಿ.ಎನ್ ಸೀತಾರಾಮ್ ಸಹೋದರಿ ವಿಜಯಲಕ್ಷ್ಮಿ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ರಜಾಕಾಲದ ಏಕಸದಸ್ಯ ಪೀಠ ಸೀತಾರಾಮ್ ಮೇಲಿನ ಪ್ರಕರಣಕ್ಕೆ ತಡೆ ನೀಡಿದೆ.
ಐದು ಎಕರೆ ಜಮೀನು ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಟಿ.ಎನ್ ಸೀತಾರಾಮ್, ಸಹೋದರಿ ವಿಜಯಲಕ್ಷ್ಮಿ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿತ್ತು.
ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಟಿ.ಎನ್.ಸೀತಾರಾಮ್ ಸಹೋದರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಮಧ್ಯಾಂತರ ತಡೆ ನೀಡಿದ್ದು, ಬಿಗ್ ರಿಲೀಫ್ ಸಿಕ್ಕಂತಾಗಿದೆ.