LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜನಗಣತಿ ಕಾರ್ಯಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ಶಿಕ್ಷಕಿ ಸ್ಥಳದಲ್ಲೇ ಸಾವು

ಕಾರವಾರ: ಜನಗಣತಿ ಕಾರ್ಯದ ಮಾಹಿತಿ ನೀಡಲು ತೆರಳುತ್ತಿದ್ದ ವೇಳೆ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಶಿಕ್ಷಕಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಸಿದ್ದಾಪುರ ಮುಖ್ಯರಸ್ತೆಯ ಕನ್ನಳ್ಳಿ ಚೆಕ್‌ಪೋಸ್ಟ್ ಬಳಿ ನಡೆದಿದೆ.

ಪೂರ್ಣಿಮಾ ಗಣಪತಿ ಭಟ್ (47) ಮೃತ ಶಿಕ್ಷಕಿ. ಬಸವಗಿರಿ ಕೊಲಸಿರ್ಸಿ ಕ್ರಾಸ್ ನಿವಾಸಿ.ಸಿದ್ದಾಪುರ ಪಟ್ಟಣದ ಹೊಸೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೂರ್ಣಿಮಾ ಸಹ-ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಜನಗಣತಿ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದರು.

ಜನಗಣತಿ ಮಾಹಿತಿ ನೀಡಲು ಹೋಗುತ್ತಿದ್ದ ವೇಳೆ ಶಿರಸಿ ಕಡೆಯಿಂದ ಸಿದ್ದಾಪುರದತ್ತ ಕಟ್ಟಿಗೆ ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್, ಪೂರ್ಣಿಮಾ ಅವರ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪೂರ್ಣಿಮಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆಯೇ ದುರಂತಕ್ಕೆ ಕಾರಣ ಎನ್ನಲಾಗಿದೆ. ಹಾವೇರಿ ಮೂಲದ ಟ್ರ್ಯಾಕ್ಟರ್ ಚಾಲಕ ಆಕಾಶ ಮಂಜಪ್ಪ ಬಾಲಣ್ಣನವರ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ