LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪೆಟ್ರೋಲ್, ಡೀಸೆಲ್ ದರ ಏರಿಕೆ: ಜನಸಾಮಾನ್ಯರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ: ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಿ, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡನೀಯ. ಇದರಿಂದ ಜನಸಾಮನ್ಯರ ಬದುಕು ದುಸ್ತರವಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು.

ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ದರ ಏರಿಸುವ ನಿರೀಕ್ಷೆ ಇತ್ತು.‌ ನಿರೀಕ್ಷೆಯಂತೆಯೇ ಹೆಚ್ಚಿಸಿದ್ದಾರೆ. ಆದರೆ ಕರ್ನಾಟಕದಲ್ಲಿ ಇತರೆ ರಾಜ್ಯಗಳಿಗಿಂತ ಗಣನೀಯವಾಗಿ ಕಡಿಮೆಯಿರುವ ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಿದ್ದರ ಬಗ್ಗೆ ಬಿಜೆಪಿಯವರು ಟೀಕೆ ಮಾಡಿದ್ದರು. ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾದ ನಂತರ ಹಲವು ಬಾರಿ ಪೆಟ್ರೋಲ್ ಡೀಸೆಲ್ ದರಗಳನ್ನು ಹೆಚ್ಚಿಸಿದ್ದಾರೆ. ಈ ಬೆಲೆಏರಿಕೆ ಜನಸಾಮಾನ್ಯರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದ್ದು, ವಿಶೇಷವಾಗಿ ಕಾರ್ಮಿಕರು, ರೈತರು, ಬಡವರ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ. ಈ ನಿರ್ಣಯವನ್ನು ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿದರು.

ಪ್ರಧಾನಿ ಮೋದಿಯವರ ಆಡಳಿತ ಪ್ರಾರಂಭವಾಗುವ ಮುಂಚೆ 413 ರೂ.ಗಳಿಂದ ಗೃಹಬಳಕೆಯ ಎಲ್ ಪಿ ಜಿ ದರ ಈಗ 1000 ರೂಗಳನ್ನು ದಾಟಿದೆ. ಈ ಬೆಲೆಏರಿಕೆ ದಿನನಿತ್ಯದ ಬೆಲೆ ಹೆಚ್ಚಳಕ್ಕೂ ಕಾರಣವಾಗಲಿದೆ. ಎಲ್ ಪಿ ಜಿ ಪೂರೈಕೆ ವ್ಯತ್ಯಯವಾಗಿರುವ ನಡುವೆಯೇ ಬೆಲೆ ಏರಿಕೆಯು ಜನಜೀವನವನ್ನು ಅಸ್ತವ್ಯಸ್ತಗೊಳಿಸಲಿದೆ ಎಂದರು.

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನೀಟ್ ಯುಜಿ ಮರು ಪರೀಕ್ಷೆಗೆ ದಿನಾಂಕ ನಿಗದಿಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಸರ್ಕಾರವು ನೀಟ್ ಯುಜಿ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸಲು ವಿಫಲರಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಿದೆ ಎಂದರು.

ಕರ್ನಾಟಕದಲ್ಲಿ ಎಸ್ ಐ ಆರ್ ಪ್ರಕ್ರಿಯೆ ಪ್ರಾರಂಭವಾಗಲಿರುವ ವಿಚಾರವಾಗಿ, ರಾಜ್ಯದಲ್ಲಿ ಚುನಾವಣಾ ಆಯೋಗದಿಂದ ಎಸ್ ಐ ಆರ್ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಇದಕ್ಕೆ ಬೇಕಾದ ಸಿದ್ದತೆಯನ್ನು ಸರ್ಕಾರ ಮಾಡಿಕೊಳ್ಳುತ್ತಿದೆ ಎಂದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ