LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಯಾಣಿಕರ ಗಮನಕ್ಕೆ: ಭಾನುವಾರ ಈ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ಮೇ 17ರಂದು ಭಾನುವಾರ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಮಾಹಿತಿ ನೀಡಿದೆ.

ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಮೇ​ 17ರಂದು ಭಾನುವಾರ ನೇರಳೆ ಮಾರ್ಗದ ಕೆಲವು ನಿಲ್ದಾಣಗಳ ನಡುವೆ ಬೆಳಗ್ಗೆ 2 ಗಂಟೆಗಳ ಕಾಲ ಮೆಟ್ರೋ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್) ಮತ್ತು ಸರ್. ಎಂ. ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣಗಳ (ಸೆಂಟ್ರಲ್ ಕಾಲೇಜ್) ನಡುವೆ ಅತ್ಯಗತ್ಯ ನಿರ್ವಹಣಾ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ಬೆಳಗ್ಗೆ 07 ಗಂಟೆಯಿಂದ 09 ಗಂಟೆಯವರೆಗೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ (ಹೊಸಹಳ್ಳಿ) ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸಂಚಾರ ಇರುವುದಿಲ್ಲ.

ಇನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಬೆಳಗ್ಗೆ 07 ಗಂಟೆಯಿಂದ 09 ಗಂಟೆ ಅವಧಿಯಲ್ಲಿ ಕೆಳಕಂಡ ಮಾರ್ಗಗಳಲ್ಲಿ ಎಂದಿನಂತೆ ಮೆಟ್ರೋ ರೈಲುಗಳು ನಿಯಮಿತ ವೇಳಾಪಟ್ಟಿಯಂತೆ ಸಂಚರಿಸಲಿವೆ.

ಚಲ್ಲಘಟ್ಟ – ವಿಜಯನಗರ, ಎಂ.ಜಿ. ರಸ್ತೆ – ವೈಟ್ ಫೀಲ್ಡ್, ಕಾಡುಗೋಡಿ, ಮಾದಾವರ – ಸಿಲ್ಕ್ ಇನ್‌ಸ್ಟಿಟ್ಯೂಟ್, ಆರ್.ವಿ. ರಸ್ತೆ – ಬೊಮ್ಮಸಂದ್ರ ಈ ಮಾರ್ಗದಲ್ಲಿ ಎಂದಿನಂತೆ ಮೆಟ್ರೋ ಸಂಚಾರ ಲಭ್ಯವಿರಲಿದೆ.

ಭಾನುವಾರ ಬೆಳಗ್ಗೆ 09 ಗಂಟೆಯ ಬಳಿಕ ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳ ನಡುವೆ ಹಾಗೂ ಸಂಪೂರ್ಣ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆಗಳು ಎಂದಿನಂತೆ ಪುನಃ ಆರಂಭಗೊಳ್ಳಲಿವೆ ಎಂದು ಬಿಎಂಆರ್ ಸಿ ಎಲ್ ತಿಳಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ