LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೊ ಕೇಸ್: ತನಿಖಾಧಿಕಾರಿ ವರ್ಗಾವಣೆ

ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ವಿರುದ್ಧದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ವರ್ಗಾವಣೆ ಮಾಡಲಾಗಿದೆ.

ವಚನಾನಂದ ಸ್ವಾಮೀಜಿ ವಸತಿ ನಿಲಯದ ಮಕ್ಕಳನ್ನು ದುರ್ಬಳಕೆ ಮಾಡಿಕೊಂಡು ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ಐ ಮಂಜುಳಾ ಅವರನ್ನು ವರ್ಗಾವಣೆ ಮಾಡಲಾಗಿದೆ.

ಪಿಎಸ್ಐ ಮಂಜುಳಾ ಅವರ ಲಿಖಿತ ಮನವಿ ಪರಿಗಣಿಸಿ ಆಡಳಿತಾತ್ಮಕ ಕಾರಣಗಳಿಗಾಗಿ ವರ್ಗಾವಣೆ ಮಾಡಲಾಗಿದೆ. ಮಂಜುಳಾ ಅವರನ್ನು ಆಜಾದ್ ನಗರ ಪೊಲೀಸ್ ಠಾಣೆಗೆ ತನಿಖಾ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಆ ಸ್ಥಾನದಲ್ಲಿದ್ದ ಜಯರತ್ನಮ್ಮ ಅವರನ್ನು ಕಾನೂನು ಮತ್ತು ಸುವ್ಯವಸ್ಥೆ ವಿಭಾಗಕ್ಕೆ ವರ್ಗಾಯಿಸಲಾಗಿದೆ.

ಪ್ರಕರಣದ ತನಿಖೆಯನ್ನು ಹರಿಹರ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸುರೇಶ್ ಸಗರಿ ಅವರಿಗೆ ವಹಿಸಲಾಗಿದೆ ಎಂದು ಎಸ್ಪಿ ಹೆಚ್.ಟಿ. ಶೇಖರ್ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ