ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್. ಅಂಬೇಡ್ಕರ್, ಅಟಲ್ ಬಿಹಾರಿ ವಾಜಪೇಯಿ ಇತ್ಯಾದಿ ಹಾಸ್ಟೆಲ್ ಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಪ್ರಕಟಿಸಿದೆ.
ಸೀಟು ಹಂಚಿಕೆ ಕುರಿತಂತೆ ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ ಮೇ 21ರೊಳಗೆ ಆಯಾ ಶಾಲೆಗಳಲ್ಲಿಯೇ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯಲ್ಲಿರುವ ವಿದ್ಯಾರ್ಥಿ ನಿಲಯಗಳಲ್ಲಿ ಆರನೇ ತರಗತಿ ಪ್ರವೇಶಕ್ಕೆ ಮಾರ್ಚ್ 1ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆ ನಡೆಸಿತ್ತು. ಇದರ ಮೊದಲ ಸುತ್ತಿನ ಸೀಟು ಹಂಚಿಕೆ ತಾತ್ಕಾಲಿಕ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಲಾಗಿದೆ.