LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಧಿಕಾರಿಗಳಲ್ಲಿ ಬದ್ದತೆ ಇದ್ದಾಗ ಮಹಿಳೆಯರ, ಮಕ್ಕಳ ಸಂರಕ್ಷಣೆ: ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿ

ಧಾರವಾಡ: ಮಹಿಳೆಯರ ಅಭಿವೃದ್ಧಿಗಾಗಿ ಸರ್ಕಾರವು ವಿವಿಧ ಇಲಾಖೆಗಳ ಮೂಲಕ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ. ಕೆಲವು ಯೋಜನೆಗಳಲ್ಲಿ ಮಹಿಳೆಯರಿಗೆ ಮೀಸಲಾತಿಯನ್ನು ಕಲ್ಪಿಸಲಾಗಿದೆ. ಇಲಾಖೆಗಳು ಮಹಿಳಾ ಪರ ಕಾರ್ಯಕ್ರಮಗಳನ್ನು ಪರಸ್ಪರ ಸಮನ್ವಯದಿಂದ ಕಾರ್ಯಗತಗೊಳಿಸಬೇಕು. ಇಲಾಖೆಗಳ ಅಧಿಕಾರಿಗಳು ಮಾತೃ ಹೃದಯದಿಂದ ಕರ್ತವ್ಯ ನಿರ್ವಹಿಸಿದಾಗ ನೊಂದ ಮಹಿಳೆಯರ ಬದುಕಿನಲ್ಲಿ ನ್ಯಾಯ, ತೃಪ್ತಿಯ ಆಶಾಕಿರಣಗಳು ಮೂಡುತ್ತವೆ ಅಧಿಕಾರಿಗಳಲ್ಲಿ ಬದ್ದತೆ ಇದ್ದಾಗಮಾತ್ರ ಮಹಿಳಾ ಅಭೀವೃದ್ಧಿ ಕಾಣಲು ಸಾದ್ಯಾವಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿ ಅವರು ಹೇಳಿದರು.

ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಹಿಳಾ ಸ್ಪಂದನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಬಂಧಿತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ ಮಾತನಾಡಿದರು.

ಮಹಿಳೆಯರ ಸುರಕ್ಷತೆ ಹಾಗೂ ಸೈಬರ್ ಜಾಗೃತಿ ಕುರಿತು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜು, ಹೋಟೆಲ್‍ಗಳು ಹಾಗೂ ರೆಸ್ಟೋರೆಂಟ್‍ಗಳಲ್ಲಿ ಶೀ ಬಾಕ್ಸ್ ಅಳವಡಿಕೆಯನ್ನು ಕಡ್ಡಾಯಗೊಳಿಸಬೇಕು. ಮತ್ತು ಮಹಿಳೆಯರ ಮೇಲಿನ ಕಿರುಕುಳ ಅಥವಾ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವ ಉದ್ದೇಶದಿಂದ ಇಲಾಖೆ ಕಾರ್ಯಕ್ರಮಗಳನ್ನು ಕಂದಾಯ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಅವರು ಹೇಳಿದರು.

ಮಹಿಳೆಯರ ಘನತೆಗೆ ಮತ್ತು ಸುರಕ್ಷತೆಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ನಡೆದುಕೊಂಡರೆ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪೊಲೀಸ್ ಅಧಿಕಾರಿಗಳು ಸಂವೇದನಾಶೀಲರಾಗಿ ವರ್ತಿಸಬೇಕು ಎಂದು ಅವರು ತಿಳಿಸಿದರು.

ಶೀ ಬಾಕ್ಸ್, ಸ್ಥಳೀಯ ದೂರು ನಿವಾರಣಾ ಸಮಿತಿ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಲು ಬಸ್ ನಿಲ್ದಾಣ, ರೈಲು ನಿಲ್ದಾಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಮಾಹಿತಿ ಫಲಕ ಅಳವಡಿಸಬೇಕು. ಮತ್ತು ಮಹಿಳೆಯರು ಯಾವುದೇ ರೀತಿಯ ಸಮಸ್ಯೆ ಎದುರಿಸಿದಾಗ ಧೈರ್ಯವಾಗಿ ದೂರು ನೀಡಲು ಅನುಕೂಲವಾಗುವ ವಾತಾವರಣ ಸಮಾಜದಲ್ಲಿ ನಿರ್ಮಾಣ ಮಾಡಬೇಕು ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ ಅಕ್ಕಾ ಪಡೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಮಹಿಳೆಯರ ರಕ್ಷಣೆ ಹಾಗೂ ಜಾಗೃತಿಯಲ್ಲಿ ಮಹತ್ವದ ಪಾತ್ರವಹಿಸಿದೆ ಎಂದು ಪ್ರಶಂಸಿಸಿದರು. ಅಕ್ಕಾ ಪಡೆ ಸದಸ್ಯರೊಂದಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ, ಸಮಸ್ಯೆಗಳು ಹಾಗೂ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚಿಸಬೇಕು ಅವರು ಸಲಹೆ ನೀಡಿದರು.

ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಸೈಬರ್ ಕ್ರೈಂ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಿಯಮಿತವಾಗಿ ಆಯೋಜಿಸಬೇಕು. ಸಾಮಾಜಿಕ ಜಾಲತಾಣಗಳ ದುರುಪಯೋಗ, ಆನ್‍ಲೈನ್ ವಂಚನೆ ಹಾಗೂ ಡಿಜಿಟಲ್ ಸುರಕ್ಷತೆ ಕುರಿತು ಮಹಿಳೆಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಅವರು ಸೂಚಿಸಿದರು.

ಶಾಲೆ, ಕಾಲೇಜು, ಬಸ್ ನಿಲ್ದಾಣಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳಾ ಮತ್ತು ಮಕ್ಕಳ ಸಹಾಯವಾಣಿ ಸಂಖ್ಯೆ, ಪೊಲಿಸ್ ಠಾಣೆ, ಮಹಿಳಾ ಸಹಾಯವಾಣಿ, ಹೆಲ್ಪ್‍ಲೈನ್ ನಂಬರ್‍ಗಳನ್ನು  ಅಳವಡಿಸಬೇಕು ಎಂದು ಅವರು ಹೇಳಿದರು.

ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ಪ್ರತಿಯೊಂದು ಇಲಾಖೆ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಜನರ ಅಹವಾಲುಗಳಿಗೆ ಶೀಘ್ರ ಸ್ಪಂದನೆಯನ್ನು ನೀಡಬೇಕು. ಸಾರ್ವಜನಿಕರ ಮನವಿಗಳನ್ನು ಮಾನವೀಯ ದೃಷ್ಟಿಕೋನದಿಂದ ಪರಿಗಣಿಸಿ ತ್ವರಿತವಾಗಿ ಬಗೆಹರಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.

ಜಿಲ್ಲಾಧಿಕಾರಿ ಸ್ನೇಹಲ್ ಆರ್ ಅವರು ಮಾತನಾಡಿ, ಮಹಿಳೆಯರ ಸುರಕ್ಷತೆ, ಮಕ್ಕಳ ಕಲ್ಯಾಣ ಹಾಗೂ ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಸ್ಪಂದನೆ ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತವು ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಹೇಳಿದರು.

ಜಿಲ್ಲೆಯ ಶಾಲೆ, ಕಾಲೇಜು, ಹಾಸ್ಟೆಲ್, ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳಾ ಸುರಕ್ಷತೆ ಕುರಿತ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಶೀ ಬಾಕ್ಸ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಸಾರ್ವಜನಿಕರು ವಿಶೇಷವಾಗಿ ಮಹಿಳೆಯರು ಸಾಲಗಳನ್ನು ಪಡೆಯುವ ಸಂದರ್ಭದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗಿಂತ ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್‍ಗಳ ಮೂಲಕ ಸಾಲ ಪಡೆಯಬೇಕು. ಅತಿಯಾದ ಬಡ್ಡಿದರ ಹಾಗೂ ಒತ್ತಡದ ವಸೂಲಾತಿ ಕ್ರಮಗಳಿಂದ ಸಾರ್ವಜನಿಕರು, ಮಹಿಳೆಯರು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇರುವುದರಿಂದ ಸಾಲ ಪಡೆಯುವ ಮೊದಲು ಅದರ ನಿಯಮಗಳು, ಬಡ್ಡಿದರ ಹಾಗೂ ಮರುಪಾವತಿ ಅವಧಿಯನ್ನು ಸಮಗ್ರವಾಗಿ ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಂದು ಅವರು ಹೇಳಿದರು.

ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು  ಮಾತನಾಡಿ, ಅವಳಿನಗರ ವ್ಯಾಪ್ತಿಯಲ್ಲಿನ ವಿವಿಧ ಅಪರಾಧ ಪ್ರಕರಣಗಳ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು. ಕಾಣೆಯಾದ ವ್ಯಕ್ತಿಗಳ ಪತ್ತೆ ಕಾರ್ಯವನ್ನು ಪೊಲೀಸ್ ಇಲಾಖೆಯು ಅತ್ಯಂತ ಪರಿಣಾಮಕಾರಿಯಾಗಿ ಪತ್ತೆ ಹಚ್ಚಲಾಗುತ್ತಿದೆ.

ಡ್ರಗ್ಸ್ ಸಂಬಂಧಿತ ಪ್ರಕರಣಗಳನ್ನು ತಡೆಯಲು ವಿಶೇಷ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದ್ದು, ಯುವಜನರಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಶಾಲೆ, ಕಾಲೇಜುಗಳ ಸುತ್ತಮುತ್ತ ಕಟ್ಟುನಿಟ್ಟಿನ ನಿಗಾವಹಿಸಲಾಗಿದ್ದು, ಡ್ರಗ್ಸ್ ಜಾಲದ ವಿರುದ್ಧ ನಿರಂತರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಡಾ. ಎಚ್.ಎಚ್.ಕುಕನೂರ ಅವರು ಸ್ವಾಗತಿಸಿ,  ಪ್ರಸ್ತಾವಿಕವಾಗಿ ಮಾತನಾಡಿದರು.

ವೇದಿಕೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೆÇಲೀಸ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಉಪ ಪೊಲೀಸ್ ಆಯುಕ್ತೆ ಶೃತಿ ಎನ್.ಎಸ್. ಅವರು ವೇದಿಕೆ ಮೇಲೆ ಉಪಸ್ಥಿತರಿದ್ದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಇಲಾಖೆಯ ಸಿಬ್ಬಂದಿ ವರ್ಗದವರು, ವಿವಿಧ ಮಹಿಳಾ ಸಂಘಟನೆಗಳ, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ವಿವಿಧ ಜಿಲ್ಲೆಗಳ 200ರಕ್ಕೂ ಹೆಚ್ಚು ಮಹಿಳೆಯರಿಂದ ಅಹವಾಲು ಸ್ವೀಕಾರ: ಮಹಿಳಾ ಸ್ಪಂದನ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಮಹಿಳೆಯರಿಂದ 200ಕ್ಕೂ ಹೆಚ್ಚು ವೈಯಕ್ತಿಕ ಅಹವಾಲುಗಳನ್ನು ಮಹಿಳಾ ಆಯೋಗದ ಅಧ್ಯಕ್ಷರು ಸ್ವೀಕರಿಸಿದರು. ಆಸ್ತಿ ವಿಷಯದಲ್ಲಿ ಗಂಡ, ಸಹೋದರರು, ಸಂಬಂಧಿಕರಿಂದ ವಂಚನೆ ಪ್ರಕರಣ, ಗಂಡ ನಿಂದ ಪರಿತ್ಯಕ್ತೆ ಮಹಿಳೆಯರು, ವಸತಿ, ಗಂಡನಿಂದ ಅನೈತಿಕ ಸಂಭಂದ, ಅತ್ತೆ ನಾದಿನಿಯರಿಂದ ಕಿರುಕುಳ, ಗಂಡನಿಂದ ಕುಟುಂಬ ನಿರ್ಲಕ್ಷ, ಜಮೀನು ವಿವಾದ, ಮಹಿಳಾ ಸುರಕ್ಷತೆ, ಸರ್ಕಾರಿ ಸೌಲಭ್ಯಗಳ ವಿಳಂಬ, ಪಿಂಚಣಿ, ಮೂಲಭೂತ ಸೌಕರ್ಯಗಳ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಮಹಿಳೆಯರು ತಮ್ಮ ಅಹವಾಲು, ಮನವಿಗಳನ್ನು ಸಲ್ಲಿಸಿದರು.

ಅಹವಾಲುಗಳನ್ನು ಒಂದೊಂದಾಗಿ ಪರಿಶೀಲಿಸಿದ ಅಧ್ಯಕ್ಷೆ ಡಾ, ನಾಗಲಕ್ಷ್ಮೀ ಚೌದರಿ ಅವರು, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ, ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ತಕ್ಷಣ ಪರಿಹಾರ ಒದಗಿಸಿದರು. ತುರ್ತು ಅಗತ್ಯವಿರುವ ಪ್ರಕರಣಗಳನ್ನು ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ವರ್ಗಾಯಿಸಿ, ನಿಗದಿತ ಅವಧಿಯಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಕೊಹ್ಲಿಯನ್ನು ಕಾಡಿದ ಇಂಪೋಸ್ಟರ್ ಸಿಂಡ್ರೋಮ್ ಅಂದ್ರೆ ಏನು? ವಿರಾಟ್ ಕೊಹ್ಲಿ ಮಾನಸಿಕ ಹೋರಾಟಕ್ಕೆ ರಾಹುಲ್ ದ್ರಾವಿಡ್ ಲೈಫ್‌ಲೈನ್ ಕೊಟ್ಟಿದ್ದು ಹೇಗೆ?SHOCKING : ನಡುರಸ್ತೆಯಲ್ಲೇ ಮಹಿಳೆಯ ಉಡುಪು ಎಳೆದು ವಿಕೃತಿ ಮೆರೆದ ಕಾಮುಕ : ಆಘಾತಕಾರಿ ವೀಡಿಯೋ ವೈರಲ್ |WATCH VIDEO‘IT’ ಉದ್ಯೋಗಿಗಳಿಗೆ ನಿರಾಸೆ ; ‘ಬೋನಸ್’ ಕುರಿತು ಇನ್ಫೋಸಿಸ್ ಮಹತ್ವದ ಘೋಷಣೆ |InfosysJOB ALERT : ಪದವೀಧರರಿಗೆ ಗುಡ್ ನ್ಯೂಸ್ : ‘ಬ್ಯಾಂಕ್ ಆಫ್ ಬರೋಡಾ’ದಲ್ಲಿ 5,000 ಹುದ್ದೆಗಳಿಗೆ ಅರ್ಜಿ ಆಹ್ವಾನ |Bank of Baroda recruitment 2026JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ‘SBI’ ನಲ್ಲಿ 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ |SBI Recruitment 2026BIG NEWS: ಸಿಎಂ ಜೋಸೆಫ್ ವಿಜಯ್ ಸರ್ಕಾರಕ್ಕೆ ಮತ್ತೆ ಆತಂಕ: ಬೆಂಬಲ ಹಿಂಪಡೆಯುವುದಾಗಿ ಸಿಪಿಐಎಂ ಬೆದರಿಕೆBIG NEWS: ಮೇ 25ರ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಾರಿ ಬದಲಾವಣೆ ಮುನ್ಸೂಚನೆಪೋಷಕರಿಗೆ ಮತ್ತೊಂದು ಶಾಕ್, ಶಾಲಾ ಶುಲ್ಕ ಹೆಚ್ಚಳ ಬೆನ್ನಲ್ಲೇ ನೋಟ್ ಬುಕ್, ವರ್ಕ್ ಬುಕ್ ಗಳ ಬೆಲೆಯೂ ಏರಿಕೆIPL 2026: ಸೂರ್ಯವಂಶಿ ಆರ್ಭಟಕ್ಕೆ ನಲುಗಿದ ಲಕ್ನೋ; ಪ್ಲೇಆಫ್ ಆಸೆಯಲ್ಲಿ ರಾಜಸ್ಥಾನ್ ಸೋಲಿಗಾಗಿ ಕಾಯುತ್ತಿದ್ದ ಆ 4 ತಂಡಗಳು ಕಂಗಾಲು!ಆಂಕರ್ ಕೇಳಿದ ಪ್ರಶ್ನೆಗೆ ತಲೆಕೆಟ್ಟವನಂತೆ ಉತ್ತರ ಕೊಟ್ಟ ಪಂತ್: ಪಕ್ಕಾ ಎಣ್ಣೆ ಏಟಲ್ಲಿ ಆಡಿದ ಮಾತು ಎಂದ ನೆಟ್ಟಿಗರು; ವಿಡಿಯೊ