ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ವೈದ್ಯಕೀಯ ಪದವಿ ವ್ಯಾಸಂಗಕ್ಕಾಗಿ ನೀಟ್ ಅಭ್ಯರ್ಥಿಗಳಿಂದ ಯಾವುದೇ ಕಾಲೇಜುಗಳು ಮರುಪಾವತಿ ಹೆಸರಲ್ಲಿ ಠೇವಣಿ ಹಣ, ಇತರೆ ಯಾವುದೇ ಹೆಚ್ಚುವರಿ ಶುಲ್ಕ ಕೇಳಿದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(ಕೆಇಎ) ಪ್ರವೇಶ ಮೇಲ್ವಿಚಾರಣಾ ಸಮಿತಿ ಸಂಪರ್ಕಿಸುವಂತೆ ತಿಳಿಸಲಾಗಿದೆ.
UGMedical and #PGMedical: ಈ ಕೋರ್ಸ್ ಗಳಿಗೆ ಪ್ರವೇಶ ಪಡೆಯುವ ಸಂದರ್ಭದಲ್ಲಿ ವೈದ್ಯಕೀಯ ಕಾಲೇಜುಗಳು ನಿಗದಿತ ಶುಲ್ಕಕ್ಕಿಂತ ಹೆಚ್ಚು ಶುಲ್ಕ ವಸೂಲಿ ಮಾಡಿದ್ದರೆ ಅಂತಹ ವಿದ್ಯಾರ್ಥಿಗಳು ಪ್ರವೇಶ ಮೇಲ್ವಿಚಾರಣೆ ಸಮಿತಿಗೆ ದೂರು ಸಲ್ಲಿಸಬಹುದು.
ಕೆಲವು ವೈದ್ಯಕೀಯ ಕಾಲೇಜುಗಳು ಸರ್ಕಾರದ ಜತೆ ಮಾಡಿಕೊಂಡಿರುವ ಒಪ್ಪಂದಕ್ಕೆ ವಿರುದ್ಧವಾಗಿ ಹೆಚ್ಚು ಶುಲ್ಕ ವಸೂಲಿ ಮಾಡಿರುವ ಬಗ್ಗೆ ದೂರುಗಳು ಬಂದಿವೆ. ಈ ಬಗ್ಗೆ ಕಾಲೇಜು ಆಡಳಿತ ಮಂಡಳಿಗಳು ಕೂಡ ಎಚ್ಚರ ವಹಿಸಬೇಕು. ಹಾಗಯೇ ಈ ರೀತಿ ತೊಂದರೆಗೆ ಒಳಗಾದ ಅಭ್ಯರ್ಥಿಗಳು/ಪೋಷಕರು ಕೂಡ ಬೆಂಗಳೂರಿನ ಮಲ್ಲೇಶ್ವರದ ಸಂಪಿಗೆ ರಸ್ತೆಯ 18ನೇ ಅಡ್ಡ ರಸ್ತೆಯಲ್ಲಿನ KEA ಕಟ್ಟಡದಲ್ಲಿನ ಸಮಿತಿ ಕಚೇರಿಗೆ ಬಂದು ದೂರು ನೀಡಬಹುದು ಎಂದು ಪ್ರವೇಶ ಮೇಲ್ವಿಚಾರಣೆ ಸಮಿತಿ ಅಧ್ಯಕ್ಷರಾದ ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ್ ತಿಳಿಸಿದ್ದಾರೆ.